ವರದಿ ಮತ್ತು ಫೋಟೋ ಕೃಪೆ ಸುರೇಶ್ ಪಟ್ಟಣ್, ಮೊ : 98862 95817
ಚಿತ್ರದುರ್ಗ, ಡಿ.21:
ತಾಲ್ಲೂಕು ನಿವೃತ್ತ ನೌಕರರ ಸಂಘ (ರಿ) ಚಿತ್ರದುರ್ಗ ಹಾಗೂ ತಾಲ್ಲೂಕು ನಿವೃತ್ತ ನೌಕರರ ಮನರಂಜನಾ ಮತ್ತು ಸಾಂಸ್ಕೃತಿಕ ಸಂಘ (ರಿ) ಚಿತ್ರದುರ್ಗ ಇವರ ಸಂಯುಕ್ತ ಆಶ್ರಯದಲ್ಲಿ ಗೋನೂರು ನಿರಾಶ್ರಿತರ ಪರಿಹಾರ ಕೇಂದ್ರಕ್ಕೆ ಕ್ರಾಶ್ ಕಾರ್ಟ್ (ಔಷಧಿ ಟ್ಯಾಲಿ) ವಿತರಣೆ ಕಾರ್ಯಕ್ರಮ ಡಿಸೆಂಬರ್ 22ರಂದು ಸೋಮವಾರ ಬೆಳಿಗ್ಗೆ 10.30ಕ್ಕೆ ಆಯೋಜಿಸಲಾಗಿದೆ.
ಗೋನೂರು ನಿರಾಶ್ರಿತರ ಪರಿಹಾರ ಕೇಂದ್ರದಲ್ಲಿ ನಡೆಯಲಿರುವ ಈ ಕಾರ್ಯಕ್ರಮವನ್ನು ವಿಧಾನ ಪರಿಷತ್ ಸದಸ್ಯರಾದ ಕೆ.ಎಸ್. ನವೀನ್ ಅವರು ಉದ್ಘಾಟಿಸಲಿದ್ದಾರೆ. ಕಾರ್ಯಕ್ರಮದ ಅಧ್ಯಕ್ಷತೆಯನ್ನು ತಾಲ್ಲೂಕು ನಿವೃತ್ತ ನೌಕರರ ಸಂಘದ ಅಧ್ಯಕ್ಷರಾದ ಬಿ.ಕೆ. ಹನುಮಂತಪ್ಪ ವಹಿಸಲಿದ್ದಾರೆ.
ಮುಖ್ಯ ಅತಿಥಿಗಳಾಗಿ ಹೆಚ್ಚುವರಿ ಪೊಲೀಸ್ ಅಧಿಕ್ಷಕರಾದ ಡಾ. ಕೆ. ಶಿವಕುಮಾರ್, ಸಮಾಜ ಕಲ್ಯಾಣ ಇಲಾಖೆಯ ಉಪನಿರ್ದೇಶಕರಾದ ಬಿ. ಮಲ್ಲಿಕಾರ್ಜುನ, ಜಿಲ್ಲಾ ಆಸ್ಪತ್ರೆಯ ನಿವಾಸಿ ವೈದ್ಯಾಧಿಕಾರಿಗಳಾದ ಡಾ. ಆನಂದ ಪ್ರಕಾಶ್, ಎಸ್‌ಬಿಐ ಬ್ಯಾಂಕ್‌ನ ಚೀಪ್ ಮ್ಯಾನೇಜರ್ ಬ್ರಹ್ಮದೇವ್ ಸಿಂಗ್ ಭಾಗವಹಿಸಲಿದ್ದಾರೆ.
ಇದೇ ವೇಳೆ ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಸಂಘದ ಮಾಜಿ ಜಿಲ್ಲಾಧ್ಯಕ್ಷರು, ಶಿವಮೊಗ್ಗದ ಮುಖ್ಯ ಇಂಜಿನಿಯರ್ ಕಚೇರಿಯ ಲೆಕ್ಕಾಧಿಕಾರಿ ಕೆ. ಮಂಜುನಾಥ್, ಸಂಘದ ಪ್ರಧಾನ ಕಾರ್ಯದರ್ಶಿ ಹೆಚ್. ಪರಮೇಶ್ವರಪ್ಪ, ಖಜಾಂಚಿ ಎಸ್. ಹಾಲಾನಾಯ್ಕ, ಗೋನೂರು ನಿರಾಶ್ರಿತ ಪರಿಹಾರ ಕೇಂದ್ರದ ಆಪ್ತ ಸಮಾಲೋಚಕರಾದ ಎಂ. ಮಹದೇವಯ್ಯ, ಅಧೀಕ್ಷಕರಾದ ಬಿ. ವಿಜಯಕುಮಾರ್ ಸೇರಿದಂತೆ ಅನೇಕ ಗಣ್ಯರು ಉಪಸ್ಥಿತರಿರಲಿದ್ದಾರೆ.
ಈ ಕ್ರಾಶ್ ಕಾರ್ಟ್ ವಿತರಣೆಯಿಂದ ನಿರಾಶ್ರಿತ ಪರಿಹಾರ ಕೇಂದ್ರದಲ್ಲಿನ ಆರೋಗ್ಯ ಸೇವೆಗಳಿಗೆ ಹೆಚ್ಚಿನ ನೆರವು ದೊರೆಯಲಿದೆ ಎಂದು ಸಂಘದ ಪದಾಧಿಕಾರಿಗಳು ತಿಳಿಸಿದ್ದಾರೆ.
Views: 20