ರೋಹಿತ್ ಪಡೆ ಎರಡನೇ ದಿನದಾಟದಂತ್ಯಕ್ಕೆ 7 ವಿಕೆಟ್ ನಷ್ಟಕ್ಕೆ 421 ರನ್.

ಹೈದರಾಬಾದ್ ನಲ್ಲಿ ನಡೆಯುತ್ತಿರುವ ಭಾರತ ಹಾಗೂ ಇಂಗ್ಲೆಂಡ್ ನಡುವಿನ ಮೊದಲ ಟೆಸ್ಟ್ ಪಂದ್ಯದಲ್ಲಿ ಭಾರತ ಬೃಹತ್ ಮುನ್ನಡೆಯತ್ತ ದಾಪುಗಾಲಿಟ್ಟಿದೆ. ಇಂಗ್ಲೆಂಡ್ ತಂಡವನ್ನು 246 ರನ್ ಗಳಿಗೆ ಆಲೌಟ್ ಮಾಡಿ ಮೊದಲ ಇನ್ನಿಂಗ್ಸ್ ಆಡುತ್ತಿರುವ ರೋಹಿತ್ ಪಡೆ ಎರಡನೇ ದಿನದಾಟದಂತ್ಯಕ್ಕೆ 7 ವಿಕೆಟ್ ನಷ್ಟಕ್ಕೆ 421 ರನ್ ಕಲೆ ಹಾಕಿದೆ.

ಈ ಮೂಲಕ ಭಾರತ ಮೊದಲ ಇನ್ನಿಂಗ್ಸ್ ನಲ್ಲಿ 175 ರನ್ ಗಳ ಮುನ್ನಡೆ ಕಾಯ್ದುಕೊಂಡಿದೆ. ತಂಡದ ಪರ ರವೀಂದ್ರ ಜಡೇಜಾ 81 ರನ್ ಹಾಗೂ ಅಕ್ಷರ್ ಪಟೇಲ್ 35 ರನ್ ಗಳಿಸಿ ಮೂರನೇ ದಿನದಾಟಕ್ಕೆ ಬ್ಯಾಟಿಂಗ್ ಕಾಯ್ದುಕೊಂಡಿದ್ದಾರೆ.

ಶತಕ ವಂಚಿತ ಯಶಸ್ವಿ ಜೈಸ್ವಾಲ್ , ಕೆ ಎಲ್ ರಾಹುಲ್

119 ರನ್ ಗಳಿಗೆ 1 ವಿಕೆಟ್ ಕಳೆದುಕೊಂಡು 127 ರನ್ ಗಳ ಹಿನ್ನಡೆಯೊಂದಿಗೆ ಎರಡನೇ ದಿನದಾಟ ಆರಂಭಿಸಿದ ಭಾರತಕ್ಕೆ ದಿನದಾಟದ ಮೊದಲ ಓವರ್ ನಲ್ಲೇ ಆಘಾತ ಎದುರಾಯಿತು. ಆರಂಭಿಕ ಬ್ಯಾಟರ್ ಯಶಸ್ವಿ ಜೈಸ್ವಾಲ್ ಮೊದಲ ಓವರ್ ನಲ್ಲೇ 1 ಬೌಂಡರಿ ಬಾರಿಸಿ, ಮರು ಎಸತದಲ್ಲೇ ಜೋ ರೂಟ್ ಗೆ ಕ್ಯಾಚಿತ್ತು ನಿರ್ಗಮಿಸಿದರು. 80 ರನ್ ಗಳ ಸ್ಪೋಟಕ ಇನ್ನಿಂಗ್ಸ್ ಜೈಸ್ವಾಲ್ 20 ರನ್ ಗಳಿಂದ ಶತಕ ವಂಚಿತರಾದರು. ಆ ಬಳಿಕ ಬಂದ ಕೆ ಎಲ್ ರಾಹುಲ್, ಶುಭ್ ಮನ್ ಗಿಲ್ ಜೊತೆ ಇನ್ನಿಂಗ್ಸ್ ಕಟ್ಟಲು ಯತ್ನಿಸಿದರು. ಆದರೆ ಕಳಪೆ ಫಾರ್ಮ್ ನಿಂದ ಬಳಲುತ್ತಿರುವ ಗಿಲ್ 29 ರನ್ ಗಳಿಗೆ ಇನ್ನಿಂಗ್ಸ್ ಮುಗಿಸಿ ಜೊತೆಯಾಟಕ್ಕೆ ಬ್ರೇಕ್ ಹಾಕಿದರು. ಐದನೇ ಕ್ರಮಾಂಕದಲ್ಲಿ ಬಂದ ಶ್ರೇಯಸ್ ಅಯ್ಯರ್ 35 ರನ್ ಗಳ ಕೊಡುಗೆ ನೀಡಿ ಪೆವಿಲಿಯನ್ ಸೇರಿಕೊಂಡರು.

ಅಜೇಯ ಅರ್ಧಶತಕ ಸಿಡಿಸಿದ ಜಡೇಜಾ

ನಂತರ ರಾಹುಲ್​ಗೆ ಜೊತೆಯಾದ ಜಡೇಜಾ ತಂಡದ ಇನ್ನಿಂಗ್ಸ್ ನಿಭಾಯಿಸಿದರು. ಈ ವೇಳೆ ರಾಹುಲ್ 86 ರನ್​ಗಳ ಇನ್ನಿಂಗ್ಸ್ ಆಡಿ ಶತಕ ವಂಚಿರಾದರೆ, ವಿಕೆಟ್ ಕೀಪರ್ ಬ್ಯಾಟರ್ ಕೆಎಸ್ ಭರತ್ 41 ರನ್​ಗಳಿಗೆ ಪೆವಿಲಿಯನ್ ಸೇರಿಕೊಂಡರು. ಅಶ್ವಿನ್ ಕೂಡ 1 ರನ್​ಗಳಿಗೆ ರನೌಟ್​ಗೆ ಬಲಿಯಾಗಬೇಕಾಯ್ತು. ಆದರೆ ಒಂದು ತುದಿಯಲ್ಲಿ ಭದ್ರವಾಗಿ ಬೇರೂರಿದ ರವೀಂದ್ರ ಜಡೇಜಾ ತಮ್ಮ ಅರ್ಧಶತಕ ಪೂರ್ಣಗೊಳಿಸಿದರು.

ಜೋ ರೂಟ್​ಗೆ 2 ವಿಕೆಟ್

ಅಶ್ವಿನ್ ವಿಕೆಟ್ ಬಳಿಕ ಬಂದ ಅಕ್ಷರ್ ಪಟೇಲ್ ದಿನದಾಟದಂತ್ಯವರೆಗೆ ಅಜೇಯರಾಗಿ ಉಳಿದು 35 ರನ್ ಸಿಡಿಸಿದರೆ, ರವೀಂದ್ರ ಜಡೇಜಾ ಕೂಡ 81 ರನ್ ಕಲೆಹಾಕಿ ನಾಳೆಗೆ ಬ್ಯಾಟಿಂಗ್ ಕಾಯ್ದುಕೊಂಡಿದ್ದಾರೆ. ಇಂಗ್ಲೆಂಡ್ ಪರ ಟಾಮ್ ಹಾರ್ಟ್ಲಿ ಹಾಗೂ ಜೋ ರೂಟ್ ತಲಾ 2 ವಿಕೆಟ್ ಪಡೆದರೆ, ಜ್ಯಾಕ್ ಲೀಚ್ ಹಾಗೂ ರೆಹಾನ್ ಅಹ್ಮದ್ ತಲಾ 1 ವಿಕೆಟ್ ಪಡೆಯುವಲ್ಲಿ ಯಶಸ್ವಿಯಾದರು.

ನಮ್ಮ ಸಮಗ್ರ ಸುದ್ದಿಗಳಿಗಾಗಿ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು 

WhatsApp Group: https://chat.whatsapp.com/KnDIfiBURQ9G5sLEJLqshk

Facebook page: https://www.facebook.com/samagrasudii

Sharechat: https://sharehat.com/profile/edu514826335?d=n

Twitter: https://twitter.com/SuddiSamagra

Threads: https://www.threads.net/@samagrasuddi.co.in

Instagram: https://www.instagram.com/samagrasuddi.co.in/

Telegram: https://t.me/+E1ubNzdguQ5jN2Y1

Leave a Reply

Your email address will not be published. Required fields are marked *