RR vs GT, IPL 2023: ಸ್ಯಾಮ್ಸನ್ vs ಹಾರ್ದಿಕ್: ಐಪಿಎಲ್​ನಲ್ಲಿಂದು ರಾಜಸ್ಥಾನ್- ಗುಜರಾತ್ ನಡುವೆ ಹೈವೋಲ್ಟೇಜ್ ಪಂದ್ಯ

RR vs GT, IPL 2023: ಸ್ಯಾಮ್ಸನ್ vs ಹಾರ್ದಿಕ್: ಐಪಿಎಲ್​ನಲ್ಲಿಂದು ರಾಜಸ್ಥಾನ್- ಗುಜರಾತ್ ನಡುವೆ ಹೈವೋಲ್ಟೇಜ್ ಪಂದ್ಯ
RR vs GT IPL 2023

16ನೇ ಆವೃತ್ತಿಯ ಇಂಡಿಯನ್ ಪ್ರೀಮಿಯರ್ ಲೀಗ್​ನಲ್ಲಿಂದು (IPL 2023) ಮಹತ್ವದ ಪಂದ್ಯ ನಡೆಯಲಿದೆ. ಜೈಪುರದ ಸವಾಯ್ ಮಾನ್​ಸಿಂಗ್ ಸ್ಟೇಡಿಯಂನಲ್ಲಿ ಸಂಜು ಸ್ಯಾಮ್ಸನ್ (Sanju Samson) ನೇತೃತ್ವದ ರಾಜಸ್ಥಾನ್ ರಾಯಲ್ಸ್ ತಂಡ ಹಾರ್ದಿಕ್ ಪಾಂಡ್ಯ ನಾಯಕತ್ವದ ಗುಜರಾತ್ ಟೈಟಾನ್ಸ್ (RR vs GT) ಅನ್ನು ಎದುರಿಸಲಿದೆ. ಜಿಟಿ ಈಗಾಗಲೇ ಅಗ್ರಸ್ಥಾನದಲ್ಲಿದ್ದು ಆಡಿದ ಒಂಬತ್ತು ಪಂದ್ಯಗಳಲ್ಲಿ ಆರು ಗೆಲುವು, ಮೂರು ಸೋಲು ಕಂಡು 12 ಅಂಕ ಸಂಪಾದಿಸಿ +0.532 ರನ್​ರೇಟ್ ಹೊಂದಿದೆ. ಇತ್ತ ಆರ್​ಆರ್​ ಆಡಿರುವ 9 ಪಂದ್ಯಗಳಲ್ಲಿ ಐದು ಜಯ, ನಾಲ್ಕು ಪಂದ್ಯಗಳಲ್ಲಿ ಸೋಲುಂಡು 10 ಅಂಕದೊಂದಿಗೆ +0.800 ರನ್​ರೇಟ್ ನಲ್ಲಿದೆ. ಇಂದಿನ ಪಂದ್ಯದಲ್ಲಿ ರಾಜಸ್ಥಾನ್ ಗೆದ್ದರೆ ನಂಬರ್ ಒನ್ ಸ್ಥಾನಕ್ಕೇರಲಿದೆ.

ರಾಜಸ್ಥಾನ್:

ಅರ್​ಆರ್​ ತಂಡಕ್ಕೆ ಯಶಸ್ವಿ ಜೈಸ್ವಾಲ್ ಮತ್ತು ಜೋಸ್ ಬಟ್ಲರ್ ಭರ್ಜರಿ ಆರಂಭ ಒದಗಿಸುತ್ತಿರುವುದು ಪ್ಲಸ್ ಪಾಯಿಂಟ್. ಅದರಲ್ಲೂ ಜೈಸ್ವಾಲ್ ಭರ್ಜರಿ ಫಾರ್ಮ್​ನಲ್ಲಿದ್ದು ಹಿಂದಿನ ಮುಂಬೈ ವಿರುದ್ಧದ ಪಂದ್ಯದಲ್ಲಿ ಶತಕ ಸಿಡಿಸಿ ಅಬ್ಬರಿಸಿದ್ದರು. ಸರಿಯಾದ ಕ್ರಮಾಂಕದಲ್ಲಿ ಬ್ಯಾಟಿಂಗ್ ಸಿಗದೆ ದೇವದತ್ ಪಡಿಕ್ಕಲ್ ಪರದಾಡುತ್ತಿದ್ದಾರೆ. ಸಂಜು ಸ್ಯಾಮ್ಸನ್, ಶಿಮ್ರೋನ್ ಹೆಟ್ಮೇರ್ ಮಧ್ಯಮ ಕ್ರಮಾಂಕದ ಬ್ಯಾಟಿಂಗ್ ಅಸ್ತ್ರ. ಧ್ರುವ್ ಜುರೆಲ್ ಮತ್ತು ಜೇಸನ್ ಹೋಲ್ಡರ್ ಕಡೆಯಿಂದ ಉತ್ತಮ ಆಟ ಬರಬೇಕಿದೆ. ಆರ್​ಆರ್​ ಸ್ಪಿನ್ನರ್​ಗಳಾದ ಚಹಲ್, ಅಶ್ವಿನ್ ಮತ್ತು ಝಂಪಾ ಎದುರಾಳಿಗೆ ಕಂಟಕವಾಗಿದ್ದಾರೆ. ಟ್ರೆಂಟ್ ಬೌಲ್ಟ್, ಸಂದೀಪ್ ಶರ್ಮಾ, ಜೇಸನ್ ಹೋಲ್ಡನ್, ಕುಲ್ದೀಪ್ ಸೇನ್ ವೇಗಿಗಳಾಗಿದ್ದಾರೆ.

IPL 2023: ವಿರಾಟ್ ಕೊಹ್ಲಿಗೆ ವಿಧಿಸಿದ ದಂಡವನ್ನು ಕಟ್ಟುವವರು ಯಾರು?

ಗುಜರಾತ್:

ಜಿಟಿ ತಂಡದ ಪ್ಲೇಯರ್ಸ್ ಭರ್ಜರಿ ಪ್ರದರ್ಶನ ತೋರುತ್ತಿದ್ದಾರೆ. ಉತ್ತಮ ರನ್​ರೇಟ್ ಕೂಡ ಹೊಂದಿದೆ. ನಾಯಕ ಹಾರ್ದಿಕ್ ಪಾಂಡ್ಯ ಲಯಕಂಡುಕೊಂಡಿರುವುದು ದೊಡ್ಡ ಪ್ಲಸ್ ಪಾಯಿಂಟ್. ವೃದ್ದಿಮಾನ್ ಸಾಹ ಹಾಗೂ ಶುಭ್​ಮನ್ ಗಿಲ್ ಕಳೆದ ಪಂದ್ಯದಲ್ಲಿ ಬಿಟ್ಟರೆ ಉಳಿದ ಮ್ಯಾಚ್​ನಲ್ಲೆಲ್ಲ ಸ್ಫೋಟಕ ಆರಂಭ ಒದಗಿಸಿದ್ದಾರೆ. ಅಭಿನವ್ ಮನೋಹರ್ ಸಿಕ್ಕ ಅವಕಾಶವನ್ನು ಬಳಸಿಕೊಂಡಿದ್ದಾರೆ. ಡೇವಿಡ್ ಮಿಲ್ಲರ್, ವಿಜಯ್ ಶಂಕರ್ ಹಾಗೂ ರಾಹುಲ್ ತೇವಾಟಿಯ ಫಿನಿಶರ್​ಗಳಾಗಿ ಗುರುತಿಸಿಕೊಂಡಿದ್ದಾರೆ. ಮೊಹಮ್ಮದ್ ಶಮಿ, ಮೋಹಿತ್ ಶರ್ಮಾ, ಜೋಶ್ವಾ ಲಿಟಲ್, ರಶೀದ್ ಖಾನ್ ಹಾಗೂ ನೂರ್ ಅಹ್ಮದ್ ಮಾರಕವಾಗಿದ್ದಾರೆ.

ರಾಜಸ್ಥಾನ ರಾಯಲ್ಸ್ ತಂಡ: ಯಶಸ್ವಿ ಜೈಸ್ವಾಲ್, ಜೋಸ್ ಬಟ್ಲರ್, ಸಂಜು ಸ್ಯಾಮ್ಸನ್ (ನಾಯಕ), ದೇವದತ್ ಪಡಿಕ್ಕಲ್, ಶಿಮ್ರೋನ್ ಹೆಟ್ಮೆಯರ್, ಧ್ರುವ್ ಜುರೆಲ್, ಜೇಸನ್ ಹೋಲ್ಡರ್, ರವಿಚಂದ್ರನ್ ಅಶ್ವಿನ್, ಟ್ರೆಂಟ್ ಬೌಲ್ಟ್, ಸಂದೀಪ್ ಶರ್ಮಾ, ಯುಜ್ವೇಂದ್ರ ಚಹಲ್, ಕುಲ್ದೀಙ್ ಸೇನ್, ಮುರುಗನ್ ಪರಾಗ್, ರಿಯಾನ್ ಪರಾಗ್ , ಡೊನಾವನ್ ಫೆರೇರಾ, ಕುಲ್ದೀಪ್ ಯಾದವ್, ಜೋ ರೂಟ್, ಆಡಮ್ ಝಂಪಾ, ನವದೀಪ್ ಸೈನಿ, ಆಕಾಶ್ ವಸಿಷ್ಟ್, ಕೆಸಿ ಕರಿಯಪ್ಪ, ಓಬೇದ್ ಮೆಕಾಯ್, ಕೆಎಂ ಆಸಿಫ್, ಅಬ್ದುಲ್ ಬಸಿತ್, ಕುನಾಲ್ ಸಿಂಗ್ ರಾಥೋರ್.

ಗುಜರಾತ್ ಟೈಟಾನ್ಸ್ ತಂಡ: ವೃದ್ಧಿಮಾನ್ ಸಹಾ, ಶುಭ್​ಮನ್ ಗಿಲ್, ಹಾರ್ದಿಕ್ ಪಾಂಡ್ಯ (ನಾಯಕ), ವಿಜಯ್ ಶಂಕರ್, ಡೇವಿಡ್ ಮಿಲ್ಲರ್, ಅಭಿನವ್ ಮನೋಹರ್, ರಾಹುಲ್ ತೇವಾಟಿಯಾ, ರಶೀದ್ ಖಾನ್, ಮೊಹಮ್ಮದ್ ಶಮಿ, ನೂರ್ ಅಹ್ಮದ್, ಜೋಶ್ವಾ ಲಿಟಲ್, ಮೋಹಿತ್ ಶರ್ಮಾ, ಸಾಯಿ ಸುದರ್ಶನ್, ಶ್ರೀಕರ್ ಭರತ್, ಶಿವಂ ಮಾವಿ, ರವಿಶ್ರೀನಿವಾಸನ್ ಸಾಯಿ ಕಿಶೋರ್, ಜಯಂತ್ ಯಾದವ್, ಅಲ್ಜಾರಿ ಜೋಸೆಫ್, ಯಶ್ ದಯಾಳ್, ಪ್ರದೀಪ್ ಸಾಂಗ್ವಾನ್, ಮ್ಯಾಥ್ಯೂ ವೇಡ್, ದಾಸುನ್ ಶಾನಕ, ಓಡನ್ ಸ್ಮಿತ್, ದರ್ಶನ್ ನಲ್ಕಂಡೆ, ಉರ್ವಿಲ್ ಪಟೇಲ್.

ಇನ್ನಷ್ಟು ಕ್ರೀಡಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

source https://tv9kannada.com/sports/cricket-news/rr-vs-gt-rajasthan-royals-will-be-taking-on-gujarat-titans-for-the-first-time-in-ipl-2023-kannada-news-vb-570469.html

Leave a Reply

Your email address will not be published. Required fields are marked *