Rajasthan Royals Vs Lucknow Super Giant : ಐಪಿಎಲ್ 2024ರ ನಾಲ್ಕನೇ ಪಂದ್ಯದಲ್ಲಿ ರಾಜಸ್ಥಾನ್ ರಾಯಲ್ಸ್, ಲಕ್ನೋ ಸೂಪರ್ ಜೈಂಟ್ಸ್ ತಂಡವನ್ನು ಎದುರಿಸುತ್ತಿದೆ. ಈ ಪಂದ್ಯ ರಾಜಸ್ಥಾನದ ತವರು ಮೈದಾನ ಜೈಪುರದ ಸವಾಯಿ ಮಾನ್ಸಿಂಗ್ ಕ್ರೀಡಾಂಗಣದಲ್ಲಿ ನಡೆಯುತ್ತಿದೆ.

ಐಪಿಎಲ್ 2024ರ ನಾಲ್ಕನೇ ಪಂದ್ಯದಲ್ಲಿ ರಾಜಸ್ಥಾನ್ ರಾಯಲ್ಸ್, ಲಕ್ನೋ ಸೂಪರ್ ಜೈಂಟ್ಸ್ ತಂಡವನ್ನು 20 ರನ್ಗಳಿಂದ ಸೋಲಿಸಿತು. ಪಂದ್ಯದಲ್ಲಿ ಮೊದಲು ಬ್ಯಾಟ್ ಮಾಡಿದ ರಾಜಸ್ಥಾನ 20 ಓವರ್ಗಳಲ್ಲಿ 4 ವಿಕೆಟ್ ಕಳೆದುಕೊಂಡು 193 ರನ್ ಗಳಿಸಿತು. ತಂಡದ ಪರ ಸಂಜು ಸ್ಯಾಮ್ಸನ್ 82 ರನ್ಗಳ ಅಜೇಯ ಇನ್ನಿಂಗ್ಸ್ ಆಡಿದರು. ಉತ್ತರವಾಗಿ ಲಕ್ನೋ ತಂಡ 20 ಓವರ್ಗಳಲ್ಲಿ ಆರು ವಿಕೆಟ್ ಕಳೆದುಕೊಂಡು 173 ರನ್ ಗಳಿಸಲಷ್ಟೇ ಶಕ್ತವಾಯಿತು. ಲಕ್ನೋ ಪರ ನಾಯಕ ರಾಹುಲ್ ಮತ್ತು ನಿಕೋಲಸ್ ಪೂರನ್ ತಲಾ ಅರ್ಧಶತಕ ಸಿಡಿಸಿದರಾದರೂ ತಂಡವನ್ನು ಗೆಲುವಿನ ದಡ ಮುಟ್ಟಿಸಲು ಸಾಧ್ಯವಾಗಲಿಲ್ಲ. ರಾಹುಲ್ 58 ರನ್ ಗಳಿಸಿ ಔಟಾದರೆ, ಪುರನ್ 64 ರನ್ ಗಳಿಸಿ ಅಜೇಯರಾಗಿ ಉಳಿದರು. ಕೊನೆಯ ಆರು ಎಸೆತಗಳಲ್ಲಿ ಲಕ್ನೋ ಗೆಲುವಿಗೆ 27 ರನ್ಗಳ ಅಗತ್ಯವಿತ್ತು, ಆದರೆ ತಂಡವು ಕೇವಲ ಆರು ರನ್ ಗಳಿಸಲು ಸಾಧ್ಯವಾಯಿತು. ಕಳೆದ ಸೀಸನ್ನಲ್ಲಿ ಲಕ್ನೋ ಪರ ಆಡಿದ್ದ ಅವೇಶ್ ಖಾನ್ ಕೇವಲ ಆರು ರನ್ ಬಿಟ್ಟುಕೊಟ್ಟು ರಾಜಸ್ಥಾನಕ್ಕೆ ಅಮೋಘ ಗೆಲುವು ತಂದುಕೊಟ್ಟರು.
ನಮ್ಮ ಸಮಗ್ರ ಸುದ್ದಿಗಳಿಗಾಗಿ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು
WhatsApp Group: https://chat.whatsapp.com/KnDIfiBURQ9G5sLEJLqshk
Facebook page: https://www.facebook.com/samagrasudii
Sharechat: https://sharehat.com/profile/edu514826335?d=n
Twitter: https://twitter.com/SuddiSamagra
Threads: https://www.threads.net/@samagrasuddi.co.in
Instagram: https://www.instagram.com/samagrasuddi.co.in/
Telegram: https://t.me/+E1ubNzdguQ5jN2Y1