RR vs RCB Pitch Report: ಆರ್​ಸಿಬಿ ಸೋತರೆ ಪ್ಲೇ ಆಫ್ ಕನಸು ಭಗ್ನ: ಸವಾಯಿ ಮಾನ್​ಸಿಂಗ್ ಪಿಚ್ ಯಾರಿಗೆ ಹೆಚ್ಚು ಸಹಕಾರಿ?

ಇಂಡಿಯನ್ ಪ್ರೀಮಿಯರ್ ಲೀಗ್ 2023 ರಲ್ಲಿಂದು ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡಕ್ಕೆ ರಾಜಸ್ಥಾನ್ ರಾಯಲ್ಸ್ ಸವಾಲೊಡ್ಡುತ್ತಿದೆ. ಜೈಪುರದ ಸವಾಯಿ ಮಾನ್​ಸಿಂಗ್ ಸ್ಟೇಡಿಯಂನಲ್ಲಿ ಈ ಹೈವೋಲ್ಟೇಜ್ ಕದನ ಏರ್ಪಡಿಸಲಾಗಿದ್ದು, ಉಭಯ ತಂಡಗಳಿಗೆ ಇದು ಮಾಡು ಇಲ್ಲವೇ ಮಡಿ ಪಂದ್ಯವಾಗಿದೆ.ಪಾಯಿಂಟ್ ಟೇಬಲ್​ನಲ್ಲಿ ಆರ್​ಸಿಬಿ ಏಳನೇ ಸ್ಥಾನಕ್ಕೆ ಕುಸಿದಿದೆ. ಆಡಿದ ಹನ್ನೊಂದು ಪಂದ್ಯಗಳ ಪೈಕಿ ಐದರಲ್ಲಿ ಗೆಲುವು ಆರರಲ್ಲಿ ಸೋಲು ಕಂಡು 10 ಅಂಕ ಸಂಪಾದಿಸಿ -0.345 ರನ್​ರೇಟ್ ಹೊಂದಿದೆ. ಇತ್ತ ರಾಜಸ್ಥಾನ್ ಐದನೇ ಸ್ಥಾನದಲ್ಲಿದೆ. ಆಡಿದ 12 ಪಂದ್ಯಗಳಲ್ಲಿ ಆರು ಗೆಲುವು, ಆರು ಸೋಲುಂಡು +0.633ರನ್​ರೇಟ್​ನೊಂದಿಗೆ 12 ಅಂಕ ಸಂಪಾದಿಸಿದೆ.ಪ್ಲೇ ಆಫ್​ಗೇರುವ ದೃಷ್ಟಿಯಿಂದ ರಾಜಸ್ಥಾನ್-ಆರ್​ಸಿಬಿ ಉಭಯ ತಂಡಗಳಿಗೆ ಈ ಪಂದ್ಯ ಗೆಲ್ಲಲೇಬೇಕು. ಒಂದು ವೇಳೆ ಆರ್​ಸಿಬಿ ಸೋತರೆ ರಾಜಸ್ಥಾನ್ ರಾಯಲ್ಸ್​ಗೆ ಪ್ಲೇಆಫ್ ಪ್ರವೇಶಿಸುವ ಅವಕಾಶ ಇರಲಿದೆ. ಆರ್​ಆರ್ ಸೋತರೆ ಬಹುತೇಕ ಟೂರ್ನಿಯಿಂದ ಹೊರಬಿದ್ದಂತೆ. ಇನ್ನು ಆರ್​ಸಿಬಿ ಸೋತರೂ ಟೂರ್ನಿಯಿಂದ ಹೊರಬಿದ್ದಂತೆ.ಎಲ್ಲರ ಚಿತ್ತ ನೆಟ್ಟಿರುವ ಈ ಪಂದ್ಯ ಮಧ್ಯಾಹ್ನ 3.30ಕ್ಕೆ ಶುರುವಾಗಲಿದೆ. ಸವಾಯಿ ಮಾನ್​ಸಿಂಗ್ ಸ್ಟೇಡಿಯಂ ಪಿಚ್ ಸ್ಪಿನ್ನರ್‌ಗಳಿಗೆ ಹೆಚ್ಚು ನೆರವು ನೀಡುತ್ತದೆ. ಪಂದ್ಯ ಆರಂಭವಾದ ಕೆಲವು ಓವರ್‌ಗಳಲ್ಲಿ ವೇಗದ ಬೌಲರ್‌ಗಳು ಪ್ರಾಬಲ್ಯ ಸಾಧಿಸಿದರೆ ನಂತರ ಸ್ಪಿನ್ನರ್​ಗಳ ಆಟ ನಡೆಯಲಿದೆ.ಈ ಮೈದಾನದಲ್ಲಿ ಅತಿ ದೊಡ್ಡ ಬೌಂಡರಿ ಇರುವುದರಿಂದ ದೊಡ್ಡ ಮೊತ್ತ ಕಲೆಹಾಕುವುದು ಕಷ್ಟ. ಬ್ಯಾಟ್ಸ್‌ಮನ್‌ಗಳು ರನ್ ಗಳಿಸಲು ಪರದಾಡುವುದು ಖಚತ. ಹೀಗಾಗಿ ಟಾಸ್ ಗೆದ್ದ ನಾಯಕ ಮೊದಲು ಬೌಲಿಂಗ್ ಆಯ್ಕೆ ಮಾಡಿಕೊಳ್ಳುವ ಸಂಭವವಿದೆ.ಸವಾಯಿ ಮಾನ್​ಸಿಂಗ್ ಮೈದಾನದಲ್ಲಿ ಇದುವರೆಗೂ 50 ಐಪಿಎಲ್ ಪಂದ್ಯಗಳು ನಡೆದಿದ್ದು 17 ಬಾರಿ ಮೊದಲು ಬ್ಯಾಟ್‌ ಮಾಡಿದ್ದ ತಂಡಗಳು ಜಯ ಗಳಿಸಿದ್ದರೆ, 33 ಬಾರಿ ಟಾರ್ಗೆಟ್ ಬೆನ್ನಟ್ಟಿದ ತಂಡಗಳು ಗೆಲುವು ಪಡೆದುಕೊಂಡಿದೆ.ಉಭಯ ತಂಡಗಳ ಮುಖಾಮುಖಿ ನೋಡುವುದಾದರೆ ಒಟ್ಟು 29 ಪಂದ್ಯಗಳು ನಡೆದಿವೆ. ಇದರಲ್ಲಿ ರಾಜಸ್ಥಾನ್ ರಾಯಲ್ಸ್ ಗೆಲುವು 12 ಪಂದ್ಯ ಗೆದ್ದಿದ್ದರೆ, ರಾಯಲ್ ಚಾಲೆಂಜರ್ಸ್ ಬೆಂಗಳೂರು 14 ಮ್ಯಾಚ್​ನಲ್ಲಿ ಗೆಲುವು ಸಾಧಿಸಿ ಪಾರುಪತ್ಯ ಮೆರೆದಿದೆ.

source https://tv9kannada.com/photo-gallery/cricket-photos/rr-vs-rcb-match-today-start-at-3-30pm-in-sawai-mansingh-stadium-this-pitch-favours-bowlers-kannada-sports-news-vb-578165.html

Leave a Reply

Your email address will not be published. Required fields are marked *