ರೈಲ್ವೆ ಇಲಾಖೆಯಲ್ಲಿ ಸರ್ಕಾರಿ ಉದ್ಯೋಗ ಪಡೆಯುವ ಕನಸು ಕಾಣುತ್ತಿರುವ ಯುವಜನತೆಗೆ ರೈಲ್ವೆ ನೇಮಕಾತಿ ಮಂಡಳಿ (RRB) ಭರ್ಜರಿ ಸಿಹಿಸುದ್ದಿ ನೀಡಿದೆ. ದೇಶಾದ್ಯಂತ ಖಾಲಿ ಇರುವ ಬರೋಬ್ಬರಿ 11,127 ‘ಅಸಿಸ್ಟೆಂಟ್ ಲೋಕೋ ಪೈಲಟ್’ (ALP) ಹುದ್ದೆಗಳನ್ನು ಭರ್ತಿ ಮಾಡಲು ಅಧಿಕೃತ ಅಧಿಸೂಚನೆ ಹೊರಡಿಸಲಾಗಿದ್ದು, ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ಐಟಿಐ (ITI) ಪೂರ್ಣಗೊಳಿಸಿದ ಅಭ್ಯರ್ಥಿಗಳಿಗೆ ಇದೊಂದು ಸುವರ್ಣಾವಕಾಶವಾಗಿದ್ದು, ಆಸಕ್ತರು ಜೂನ್ 14ರೊಳಗೆ ಆನ್‌ಲೈನ್ ಮೂಲಕ ಅರ್ಜಿ ಸಲ್ಲಿಸಬಹುದಾಗಿದೆ.
ಹುದ್ದೆಗಳ ಸಂಕ್ಷಿಪ್ತ ವಿವರ:
- ಹುದ್ದೆಯ ಹೆಸರು: ಅಸಿಸ್ಟೆಂಟ್ ಲೋಕೋ ಪೈಲಟ್ (ALP)
- ಒಟ್ಟು ಹುದ್ದೆಗಳು: 11,127 (ಇದರಲ್ಲಿ ನಮ್ಮ ಬೆಂಗಳೂರು ವಿಭಾಗಕ್ಕೆ 200 ಹುದ್ದೆಗಳು ಮೀಸಲಾಗಿವೆ).
ಶೈಕ್ಷಣಿಕ ಅರ್ಹತೆಗಳು: ಅಭ್ಯರ್ಥಿಗಳು ಕಡ್ಡಾಯವಾಗಿ ಎಸ್‌ಎಸ್‌ಎಲ್‌ಸಿ (SSLC) ಅಥವಾ ತತ್ಸಮಾನ ಪರೀಕ್ಷೆಯಲ್ಲಿ ತೇರ್ಗಡೆಯಾಗಿರಬೇಕು. ಇದರೊಂದಿಗೆ NCVT ಅಥವಾ SCVT ಮಾನ್ಯತೆ ಪಡೆದ ಸಂಸ್ಥೆಗಳಿಂದ ಸಂಬಂಧಪಟ್ಟ ಟ್ರೇಡ್‌ಗಳಲ್ಲಿ ಐಟಿಐ (ITI) ಪೂರ್ಣಗೊಳಿಸಿರಬೇಕು. ಫಿಟ್ಟರ್, ಎಲೆಕ್ಟ್ರಿಷಿಯನ್, ಮೆಕ್ಯಾನಿಕ್ (ಮೋಟಾರ್ ವಾಹನ, ಡೀಸೆಲ್, ರೇಡಿಯೋ, ಟಿವಿ, ಎಲೆಕ್ಟ್ರಾನಿಕ್ಸ್), ವೈರ್‌ಮ್ಯಾನ್, ಟರ್ನರ್, ಮೆಷಿನಿಸ್ಟ್, ಎಸಿ ಹಾಗೂ ರೆಫ್ರಿಜರೇಷನ್ ಮೆಕ್ಯಾನಿಕ್ ಸೇರಿದಂತೆ ವಿವಿಧ ಟ್ರೇಡ್‌ಗಳಲ್ಲಿ ಪಾಸ್ ಆದವರು ಅರ್ಜಿ ಸಲ್ಲಿಸಲು ಅರ್ಹರು.
ವಯೋಮಿತಿ ಹಾಗೂ ಸಡಿಲಿಕೆ: ಅರ್ಜಿದಾರರ ಕನಿಷ್ಠ ವಯಸ್ಸು 18 ವರ್ಷಗಳಾಗಿರಬೇಕು ಹಾಗೂ ಗರಿಷ್ಠ ವಯಸ್ಸು 30 ವರ್ಷ ಮೀರಿರಬಾರದು. ಸರ್ಕಾರದ ನಿಯಮಾನುಸಾರ ಮೀಸಲಾತಿ ವರ್ಗಗಳಿಗೆ ವಯೋಮಿತಿಯಲ್ಲಿ ಈ ಕೆಳಗಿನಂತೆ ಸಡಿಲಿಕೆ ನೀಡಲಾಗಿದೆ:
- ಒಬಿಸಿ (OBC) ಅಭ್ಯರ್ಥಿಗಳಿಗೆ: 3 ವರ್ಷ
- ಎಸ್‌ಸಿ/ಎಸ್‌ಟಿ (SC/ST) ಅಭ್ಯರ್ಥಿಗಳಿಗೆ: 5 ವರ್ಷ
- ಅಂಗವಿಕಲ (PwBD) ಅಭ್ಯರ್ಥಿಗಳಿಗೆ: 10 ರಿಂದ 15 ವರ್ಷ
ಅರ್ಜಿ ಶುಲ್ಕದ ವಿವರ:
- ಸಾಮಾನ್ಯ ಮತ್ತು ಒಬಿಸಿ ವರ್ಗದ ಅಭ್ಯರ್ಥಿಗಳಿಗೆ: ₹500/-
- ಎಸ್‌ಸಿ/ಎಸ್‌ಟಿ, ಮಾಜಿ ಸೈನಿಕರು, ಮಹಿಳೆಯರು, ತೃತೀಯ ಲಿಂಗಿಗಳು ಮತ್ತು ಪಿಡಬ್ಲ್ಯುಬಿಡಿ ಅಭ್ಯರ್ಥಿಗಳಿಗೆ: ₹250/- (ಸೂಚನೆ: ಅರ್ಜಿ ಶುಲ್ಕವನ್ನು ಕೇವಲ ಆನ್‌ಲೈನ್ ಮೂಲಕವೇ ಪಾವತಿಸಬೇಕು).
ಆಯ್ಕೆ ಪ್ರಕ್ರಿಯೆ ಮತ್ತು ವೇತನ ಶ್ರೇಣಿ: ಅರ್ಜಿ ಸಲ್ಲಿಸಿದ ಅಭ್ಯರ್ಥಿಗಳನ್ನು ಹಂತಹಂತವಾಗಿ ಆಯ್ಕೆ ಮಾಡಲಾಗುತ್ತದೆ. ಕಂಪ್ಯೂಟರ್ ಆಧಾರಿತ ಪರೀಕ್ಷೆ (CBT), ದೈಹಿಕ ಸಾಮರ್ಥ್ಯ ಪರೀಕ್ಷೆ (PET), ವೈದ್ಯಕೀಯ ಪರೀಕ್ಷೆ ಮತ್ತು ಅಂತಿಮವಾಗಿ ದಾಖಲೆಗಳ ಪರಿಶೀಲನೆ ಹಾಗೂ ಸಂದರ್ಶನ ಇರಲಿದೆ. ಆಯ್ಕೆಯಾದ ಅಭ್ಯರ್ಥಿಗಳಿಗೆ ಆರಂಭಿಕವಾಗಿ ತಿಂಗಳಿಗೆ ₹19,900 ಮೂಲ ವೇತನ ದೊರೆಯಲಿದೆ.
ಅರ್ಜಿ ಸಲ್ಲಿಸುವ ವಿಧಾನ:
- ಅಭ್ಯರ್ಥಿಗಳು ರೈಲ್ವೆ ನೇಮಕಾತಿ ಮಂಡಳಿಯ ಅಧಿಕೃತ ವೆಬ್‌ಸೈಟ್: indianrailways.gov.inಗೆ ಅಥವಾ
- ಅರ್ಜಿ ಸಲ್ಲಿಸಲು ಇಲ್ಲಿ ಕ್ಲಿಕ್ ಮಾಡಿ
(https://www.rrbapply.gov.in/#/auth/home) - ಮುಖಪುಟದಲ್ಲಿ ‘Create An Account’ ಆಯ್ಕೆ ಮಾಡಿ, ಹೊಸದಾಗಿ ರಿಜಿಸ್ಟರ್ ಮಾಡಿಕೊಳ್ಳಿ.
- ಲಾಗಿನ್ ಐಡಿ ಮತ್ತು ಪಾಸ್‌ವರ್ಡ್ ಬಳಸಿ ಲಾಗಿನ್ ಆದ ಬಳಿಕ ಅಪ್ಲಿಕೇಶನ್ ಫಾರ್ಮ್ ಅನ್ನು ಎಚ್ಚರಿಕೆಯಿಂದ ಭರ್ತಿ ಮಾಡಿ.
- ಅಗತ್ಯ ದಾಖಲೆಗಳನ್ನು ಅಪ್‌ಲೋಡ್ ಮಾಡಿ, ನಿಗದಿತ ಶುಲ್ಕವನ್ನು ಪಾವತಿಸಿ.
- ಭರ್ತಿ ಮಾಡಿದ ವಿವರಗಳನ್ನು ದೃಢಪಡಿಸಿ ‘Submit’ ಮಾಡಿ ಹಾಗೂ ಮುಂದಿನ ರೆಫರೆನ್ಸ್‌ಗಾಗಿ ಅರ್ಜಿಯ ಪ್ರಿಂಟ್ ತೆಗೆದುಕೊಳ್ಳಿ.
ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ: ಜೂನ್ 14, 2026

