Sakshi Malik: ನಾನು ಪ್ರತಿಭಟನೆಯಿಂದ ಹಿಂದೆ ಸರಿದಿಲ್ಲ, ಎಲ್ಲವೂ ಸುಳ್ಳು ಸುದ್ದಿ ಎಂದ ಸಾಕ್ಷಿ ಮಲಿಕ್

Sakshi Malik: ನಾನು ಪ್ರತಿಭಟನೆಯಿಂದ ಹಿಂದೆ ಸರಿದಿಲ್ಲ, ಎಲ್ಲವೂ ಸುಳ್ಳು ಸುದ್ದಿ ಎಂದ ಸಾಕ್ಷಿ ಮಲಿಕ್

ನಾನು ಪ್ರತಿಭಟನೆಯಿಂದ ಹಿಂದೆ ಸರಿದಿಲ್ಲ, ಸುಳ್ಳು ಸುದ್ದಿ ಹಬ್ಬಿಸಲಾಗುತ್ತಿದೆ ಎಂದು ಕುಸ್ತಿಪಟುಗಳ ಪ್ರತಿಭಟನೆಯ ಬಗ್ಗೆ ಸಾಕ್ಷಿ ಮಲಿಕ್ ಟ್ವೀಟ್ ಮಾಡಿದ್ದಾರೆ. ಸಾಕ್ಷಿ ಮಲಿಕ್ ಕುಸ್ತಿಪಟುಗಳ ಪ್ರತಿಭಟನೆಯಿಂದ ಹಿಂದೆ ಸರಿದು ಮತ್ತೆ ಕೆಲಸಕ್ಕೆ ಮರಳಿದ್ದಾರೆ ಎನ್ನುವ ಸುದ್ದಿ ಹರಿದಾಡಿತ್ತು.  ಭಾರತೀಯ ಕುಸ್ತಿ ಫೆಡರೇಷನ್ ಅಧ್ಯಕ್ಷ ಬ್ರಿಜ್ ಭೂಷಣ್ ಶರಣ್ ಸಿಂಗ್ ಅವರ ವಿರುದ್ಧ ಕಿರುಕುಳ ಆರೋಪ ಮಾಡಿದ್ದು ಅವರನ್ನು ಕೂಡಲೇ ಬಂದಿಸುವಂತೆ ಒತ್ತಾಯಿಸಿ ಕಳೆದ ಒಂದು ತಿಂಗಳಿನಿಂದ ದೆಹಲಿಯ ಜಂತರ್​-ಮಂತರ್​ನಲ್ಲಿ ಪ್ರತಿಭಟನೆ ನಡೆಸುತ್ತಿದ್ದರು. ಡಬ್ಲ್ಯುಎಫ್‌ಐ ಮುಖ್ಯಸ್ಥ ಬ್ರಿಜ್ ಭೂಷಣ್ ಶರಣ್ ಸಿಂಗ್ ವಿರುದ್ಧ ಪ್ರತಿಭಟನೆ ನಡೆಸಿದ ಕುಸ್ತಿಪಟುಗಳು ಶನಿವಾರ ಗೃಹ ಸಚಿವ ಅಮಿತ್ ಶಾ ಅವರನ್ನು ಅವರ ನಿವಾಸದಲ್ಲಿ ಭೇಟಿ ಮಾಡಿದ್ದರು.

ಕಾನೂನು ಎಲ್ಲರಿಗೂ ಒಂದೇ ಆಗಿರುತ್ತದೆ ಎಂದು ಅಮಿತ್ ಶಾ ಕುಸ್ತಿಪಟುಗಳಿಗೆ ಭರವಸೆ ನೀಡಿದ್ದಾರೆ ಎಂದು ಎನ್‌ಡಿಟಿವಿ ವರದಿ ತಿಳಿಸಿದೆ. ಕಾನೂನು ತನ್ನದೇ ಆದ ಕ್ರಮವನ್ನು ತೆಗೆದುಕೊಳ್ಳಲಿದೆ ಎಂದು ಅಮಿತ್ ಶಾ ಭರವಸೆ ನೀಡಿರುವುದಾಗಿ ತಿಳಿದುಬಂದಿದೆ.

ಸಭೆಯು ರಾತ್ರಿ 11 ಗಂಟೆಗೆ ಪ್ರಾರಂಭವಾಯಿತು ಮತ್ತು ಒಂದು ಗಂಟೆಗೂ ಹೆಚ್ಚು ಕಾಲ ನಡೆಯಿತು ಎಂದು ವರದಿಯಾಗಿದೆ. ಮೂಲಗಳ ಪ್ರಕಾರ ಬಜರಂಗ್ ಪುನಿಯಾ, ಸಾಕ್ಷಿ ಮಲಿಕ್, ಸಂಗೀತಾ ಫೋಗಟ್ ಮತ್ತು ಸತ್ಯವರ್ತ್ ಕಡಿಯಾನ್ ಅವರು ಅಮಿತ್ ಶಾ ಅವರನ್ನು ಭೇಟಿ ಮಾಡಿದ್ದಾರೆ ಎಂದು ವರದಿ ತಿಳಿಸಿದೆ.

ಮತ್ತಷ್ಟು ಓದಿ: Wrestlers Protest: ಗೃಹ ಸಚಿವ ಅಮಿತ್​ ಶಾರನ್ನು ಭೇಟಿಯಾದ ಕುಸ್ತಿಪಟುಗಳು

WFI ಮುಖ್ಯಸ್ಥ ಬ್ರಿಜ್ ಭೂಷಣ್ ಶರಣ್ ಸಿಂಗ್ ವಿರುದ್ಧ ನಿಷ್ಪಕ್ಷಪಾತ ತನಿಖೆ ಮತ್ತು ತ್ವರಿತ ಕ್ರಮಕ್ಕೆ ಕುಸ್ತಿಪಟುಗಳು ಒತ್ತಾಯಿಸಿದ್ದಾರೆ ಎಂದು ವರದಿಯಾಗಿದೆ.

ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

source https://tv9kannada.com/national/wresters-protest-completely-wrong-wrestler-sakshi-malik-on-reports-of-withdrawing-from-protest-nyr-594673.html

Leave a Reply

Your email address will not be published. Required fields are marked *