ಚಿತ್ರದುರ್ಗ, ನ. 24:
ವರದಿ ಮತ್ತು ಫೋಟೋ ಕೃಪೆ ಸುರೇಶ್ ಪಟ್ಟಣ್, ಮೊ : 98862 95817
ನಗರದ ಪ್ರತಿಷ್ಠಿತ ಇಂಡಿಯನ್ ಇಂಟರ್‌ನ್ಯಾಷನಲ್ ಶಾಲೆಯಲ್ಲಿ ಶೈಕ್ಷಣಿಕ ನಿರ್ದೇಶಕರಾಗಿ ಕಾರ್ಯನಿರ್ವಹಿಸುತ್ತಿರುವ ಸಂಪತ್ ಕುಮಾರ್ ಸಿ.ಡಿ. ಅವರಿಗೆ ಬೆಂಗಳೂರಿನ ಐಟಿಓ ಸಂಸ್ಥೆಯ ವತಿಯಿಂದ ‘ಉತ್ತಮ ಪ್ರಾಂಶುಪಾಲ’ ಪ್ರಶಸ್ತಿ ನೀಡಿ ಗೌರವಿಸಲಾಗಿದೆ.
ಶಿಕ್ಷಣ ಕ್ಷೇತ್ರದಲ್ಲಿ ಸಲ್ಲಿಸಿರುವ ಗಣನೀಯ ಸೇವೆ, ವಿದ್ಯಾರ್ಥಿಗಳ ಶೈಕ್ಷಣಿಕ ಪ್ರಗತಿಗೆ ನೀಡಿರುವ ಮಾರ್ಗದರ್ಶನ ಹಾಗೂ ಶಿಕ್ಷಣದ ಗುಣಮಟ್ಟ ಸುಧಾರಣೆಗೆ ಕೈಗೊಂಡಿರುವ ಪ್ರಯತ್ನಗಳನ್ನು ಗುರುತಿಸಿ ಈ ಪ್ರಶಸ್ತಿ ಪ್ರದಾನ ಮಾಡಲಾಗಿದೆ.
ಸಂಪತ್ ಕುಮಾರ್ ಅವರು ಈ ಹಿಂದೆಯೂ ತಮ್ಮ ಶೈಕ್ಷಣಿಕ ಸೇವೆಗಾಗಿ ಹಲವು ಪ್ರತಿಷ್ಠಿತ ಪ್ರಶಸ್ತಿಗಳನ್ನು ಮುಡಿಗೇರಿಸಿಕೊಂಡಿದ್ದಾರೆ. ರೋಟರಿ ಸಂಸ್ಥೆಯಿಂದ ‘ಅತ್ಯುತ್ತಮ ಶಿಕ್ಷಕ’ ಪ್ರಶಸ್ತಿ, ವಿಜಯ ಕರ್ನಾಟಕ ದಿನಪತ್ರಿಕೆಯ ವತಿಯಿಂದ ‘ಜಿಲ್ಲಾ ಅತ್ಯುತ್ತಮ ಮಾರ್ಗದರ್ಶಿ ಶಿಕ್ಷಕ’ ಪ್ರಶಸ್ತಿ, ಕೈವಾರ ತಾತಯ್ಯನಾರಾಯಣ ಗುರು ಸಂಸ್ಥೆಯಿಂದ ‘ರಾಜ್ಯ ಉತ್ತಮ ಶಿಕ್ಷಕ’ ಪ್ರಶಸ್ತಿ ಹಾಗೂ ಮಾನಕ್ ಇನ್‌ಸ್ಪೈರ್ ಅವಾರ್ಡ್‌ನಿಂದ ‘ರಾಷ್ಟ್ರೀಯ ಅತ್ಯುತ್ತಮ ಮಾರ್ಗದರ್ಶಿ ಶಿಕ್ಷಕ’ ಪ್ರಶಸ್ತಿಗಳನ್ನು ಪಡೆದುಕೊಂಡಿದ್ದಾರೆ.
ಶಿಕ್ಷಣ ಕ್ಷೇತ್ರದಲ್ಲಿ ನಿರಂತರವಾಗಿ ಸೇವೆ ಸಲ್ಲಿಸುತ್ತಾ, ವಿದ್ಯಾರ್ಥಿಗಳ ಭವಿಷ್ಯ ರೂಪಿಸುವಲ್ಲಿ ಪ್ರಮುಖ ಪಾತ್ರ ವಹಿಸುತ್ತಿರುವ ಸಂಪತ್ ಕುಮಾರ್ ಸಿ.ಡಿ. ಅವರ ಸಾಧನೆಗೆ ಶಾಲೆಯ ಆಡಳಿತ ಮಂಡಳಿ ಹಾಗೂ ಸಿಬ್ಬಂದಿ ವರ್ಗ ಸಂತಸ ವ್ಯಕ್ತಪಡಿಸಿದೆ.
ಈ ಸಂದರ್ಭದಲ್ಲಿ ಸಂಸ್ಥೆಯ ಆಡಳಿತಾಧಿಕಾರಿ ಶ್ರೀಮತಿ ಚಂದ್ರಕಲಾ ಚಂದ್ರಪ್ಪ, ಮುಖ್ಯ ಕಾರ್ಯನಿರ್ವಹಣಾಧಿಕಾರಿ ರಘುಚಂದನ್, ಶಾಲೆಯ ಡೀನ್ ಅನಂತರಾಮ್, ಪ್ರಾಂಶುಪಾಲರಾದ ಪಿ. ಬಸವರಾಜಯ್ಯ, ಮುಖ್ಯ ಶಿಕ್ಷಕಿ ಜರೀನಾ, ಪಿಆರ್‌ಒ ರವಿಕುಮಾರ್ ಸೇರಿದಂತೆ ಶಾಲೆಯ ಎಲ್ಲಾ ಶಿಕ್ಷಕ ಮತ್ತು ಶಿಕ್ಷಕೇತರ ಸಿಬ್ಬಂದಿ ಅಭಿನಂದನೆ ಸಲ್ಲಿಸಿದ್ದಾರೆ.
ನಮ್ಮ ಸಮಗ್ರ ಸುದ್ದಿಗಳಿಗಾಗಿ ಕೆಳಗಿನ Social Media ಪುಟಗಳಿಗೆ Follow / Subscribe ಮಾಡಿ.
🟢 WhatsApp Group
Join WhatsApp Group
🔵 Facebook Page
Follow Facebook Page
⚫ Twitter / X
Follow on X (Twitter)
🟣 Threads
Follow on Threads
Follow on Instagram
🔵 Telegram
Join Telegram Channel
🟢 WhatsApp Channel
Follow WhatsApp Channel
📰 ಸಮಗ್ರ ಸುದ್ದಿ
ನಿಖರತೆಗೆ ಮತ್ತೊಂದು ಹೆಸರು
📢 ಸುದ್ದಿ • ಮಾಹಿತಿ • ಶಿಕ್ಷಣ • ಉದ್ಯೋಗ • ಕರ್ನಾಟಕ • ದೇಶ • ಜಗತ್ತು