
ರಿಯಾದ್ : ದೇಶದಲ್ಲಿ ಕೆಲಸ ಮಾಡುವ ಅಥವಾ ಪ್ರವಾಸಕ್ಕೆ ಬರುವ ಮುಸ್ಲಿಮೇತರ ರಾಜ ತಾಂತ್ರಿಕ ಸಿಬ್ಬಂದಿ ಹಾಗೂ ಪ್ರವಾಸಿಗರಿಗೆ ಸೌದಿ ಅರೇಬಿಯಾದಲ್ಲಿ ಇದೇ ಮೊದಲ ಬಾರಿಗೆ ಮಧ್ಯದಂಗಡಿ ತೆರೆಯಲು ಸಿದ್ಧತೆ ನಡೆದಿದೆ ಎಂದು ಸ್ಥಳೀಯ ಮಾಧ್ಯಮಗಳು ವರದಿ ಮಾಡಿವೆ.
ದೇಶದಲ್ಲಿ ವಾಣಿಜ್ಯ ಹಾಗೂ ಪ್ರವಾಸೋದ್ಯಮಕ್ಕೆ ಉತ್ತೇಜನ ನೀಡುವ ನಿಟ್ಟಿನಲ್ಲಿ ಮುಸ್ಲಿಮತರ ರಾಜ ತಾಂತ್ರಿಕ ಸಿಬ್ಬಂದಿ ಹಾಗೂ ಪ್ರವಾಸಿಗರಿಗೆ ಸೀಮಿತವಾಗಿ ಮಧ್ಯಪಾನ ಸೇವೆ ನೀಡುವ ರೆಸ್ಟೋರೆಂಟ್ ತೆರೆಯಲು ಸೌದಿ ರಾಜಕುಮಾರ ಮಹಮ್ಮದ್ ಬಿನ್ ಸಲ್ಮಾನ್ ಸರಕಾರ ನಿರ್ಧಾರ ಕೈಗೊಂಡಿದೆ.
2030ರ ವೇಳೆಗೆ ದೇಶದ ಅರ್ಥವ್ಯವಸ್ಥೆಯನ್ನು ಮತ್ತಷ್ಟು ಸದೃಢಗೊಳಿಸಲು ಮದ್ಯ ಮಳಿಗೆ ತೆರೆಯಲು ತೀರ್ಮಾನಿಸಲಾಗಿದೆ.
ಮದ್ಯಪಾನ ಬಯಸುವ ಗ್ರಾಹಕರು ಮೊಬೈಲ್ ಆಪ್ ಮೂಲಕ ನೊಂದಾಯಿಸಿಕೊಳ್ಳಬೇಕು ವಿದೇಶಾಂಗ ಇಲಾಖೆಯಿಂದ ಕ್ಲಿಯರೆನ್ಸ್ ಕೋಡ್ ಪಡೆದು ಮದ್ಯ ಖರೀದಿಯ ಮಾಸಿಕ ಕೋಟ ಸೂಚಿಸಿದರೆ ಸೌದಿ ಪ್ರವಾಸದಲ್ಲಿದ್ದಾಗ ಮದ್ಯ ಸೇವನೆಗೆ ಅವಕಾಶ ಸಿಗಲಿದೆ.
ನಮ್ಮ ಸಮಗ್ರ ಸುದ್ದಿಗಳಿಗಾಗಿ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು
WhatsApp Group: https://chat.whatsapp.com/KnDIfiBURQ9G5sLEJLqshk
Facebook page: https://www.facebook.com/samagrasudii
Sharechat: https://sharehat.com/profile/edu514826335?d=n
Twitter: https://twitter.com/SuddiSamagra
Threads: https://www.threads.net/@samagrasuddi.co.in
Instagram: https://www.instagram.com/samagrasuddi.co.in/
Telegram: https://t.me/+E1ubNzdguQ5jN2Y1