SBI Recruitment for Junior Associates: ಜ್ಯೂನಿಯರ್ ಅಸೋಸಿಯೇಟ್ (ಕಸ್ಟಮರ್ ಸಪೋರ್ಟ್ ಮತ್ತು ಸೇಲ್ಸ್) ಹುದ್ದೆಗಳ ಭರ್ತಿಗೆ ಎಸ್‌ಬಿಐ ಅರ್ಜಿ ಆಹ್ವಾನಿಸಿದೆ.
ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾ (ಎಸ್‌ಬಿಐ) ಕ್ಲರಿಕಲ್ ಗ್ರೇಡ್ ಹುದ್ದೆಗಳ ನೇಮಕಾತಿಗೆ ಅಧಿಸೂಚನೆ ಪ್ರಕಟಿಸಿದೆ.
ಗ್ರಾಹಕರ ಬೆಂಬಲ ಮತ್ತು ಸೇವೆಯಲ್ಲಿ ಕಿರಿಯ ಸಹಾಯಕರ ಹುದ್ದೆಗಳ ಭರ್ತಿ ನಡೆಯಲಿದೆ. 8,283 ಹುದ್ದೆಗಳಿದ್ದು, ಕರ್ನಾಟಕಕ್ಕೆ 450 ಹುದ್ದೆಗಳನ್ನು ಮೀಸಲಿರಿಸಲಾಗಿದೆ.ಅಧಿಸೂಚನೆ
ವಿದ್ಯಾರ್ಹತೆ: ಅಭ್ಯರ್ಥಿಗಳು ಅಧಿಕೃತ ಮಂಡಳಿ ಅಥವಾ ಮಾನ್ಯತೆ ಪಡೆದ ವಿಶ್ವವಿದ್ಯಾಲಯದಿಂದ ಪದವಿ ಪೂರ್ಣಗೊಳಿಸಿರಬೇಕು.
ವಯೋಮಿತಿ: ಕನಿಷ್ಠ ವಯೋಮಿತಿ 20 ವರ್ಷ. ಗರಿಷ್ಠ 28 ವರ್ಷ. ಹಿಂದುಳಿದ ಅಭ್ಯರ್ಥಿಗಳಿಗೆ 3 ವರ್ಷ ಮತ್ತು ಪರಿಶಿಷ್ಟ ಜಾತಿ ಮತ್ತು ಪಂಗಡ ಅಭ್ಯರ್ಥಿಗಳಿಗೆ 5 ವರ್ಷ ಹಾಗೂ ವಿಶೇಷಚೇತನ ಅಭ್ಯರ್ಥಿಗಳಿಗೆ 10 ವರ್ಷ ವಯೋಮಿತಿ ಸಡಿಲಿಕೆ ಇದೆ.
ಅರ್ಜಿ ಸಲ್ಲಿಕೆ: ಅಭ್ಯರ್ಥಿಗಳು ಆನ್ಲೈನ್ ಮೂಲಕ ಅರ್ಜಿ ಸಲ್ಲಿಕೆ ಮಾಡಬಹುದು. ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡ, ಇಎಸ್ಎಂ ಅಭ್ಯರ್ಥಿಗಳಿಗೆ ಶುಲ್ಕ ವಿನಾಯಿತಿ ಮಾಡಲಾಗಿದೆ. ಇತರೆ ಮತ್ತು ಸಾಮಾನ್ಯ ವರ್ಗದ ಅಭ್ಯರ್ಥಿಗಳು 750 ರೂ ಅರ್ಜಿ ಶುಲ್ಕ ಭರಿಸಬೇಕು.
ಆಯ್ಕೆ ಪ್ರಕ್ರಿಯೆ: ಪ್ರಿಲಿಮನರಿ ಪರೀಕ್ಷೆ, ಮೇನ್ಸ್ ಮತ್ತು ಸಂದರ್ಶನ ಮೂಲಕ ಆಯ್ಕೆ.
ನವೆಂಬರ್ 17ರಿಂದ ಅರ್ಜಿ ಸಲ್ಲಿಕೆ ಆರಂಭವಾಗಿದ್ದು, ಅರ್ಜಿ ಸಲ್ಲಿಕೆಗೆ ಕಡೆಯ ದಿನಾಂಕ ಡಿಸೆಂಬರ್ 7 ಆಗಿದೆ. ಪ್ರಿಲಿಮ್ಸ್ ಪರೀಕ್ಷೆಗಳು 2024ರ ಜನವರಿ ಮತ್ತು ಮೇನ್ಸ್ ಪರೀಕ್ಷೆಗಳು ಫೆಬ್ರವರಿಯಲ್ಲಿ ನಡೆಯಬಹುದು ಎಂದು ತಾತ್ಕಾಲಿಕ ದಿನಾಂಕವನ್ನು ಅಧಿಸೂಚನೆಯಲ್ಲಿ ಪ್ರಕಟಿಸಲಾಗಿದೆ. ಅಧಿಕೃತ ಅಧಿಸೂಚನೆ, ಇತರೆ ಮಾಹಿತಿಗೆ ಅಭ್ಯರ್ಥಿಗಳು sbi.co.in ಭೇಟಿ ನೀಡಿ.
ನಮ್ಮ ಸಮಗ್ರ ಸುದ್ದಿಗಳಿಗಾಗಿ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು
WhatsApp Group : https://chat.whatsapp.com/KnDIfiBURQ9G5sLEJLqshk
Facebook page: https://www.facebook.com/samagrasudii
Sharechat: https://sharechat.com/profile/edu514826335?d=n
Twitter: https://twitter.com/SuddiSamagra
Threads: https://www.threads.net/@samagrasuddi.co.in
Instagram: https://www.instagram.com/samagrasuddi.co.in/
Telegram: https://t.me/+E1ubNzdguQ5jN2Y1