ಕರ್ನಾಟಕದಲ್ಲಿ 175 ಹುದ್ದೆಗಳನ್ನು ನಿಗದಿ ಮಾಡಲಾಗಿದ್ದು, ಪದವಿ ಪೂರ್ಣಗೊಳಿಸಿರುವ ಅಭ್ಯರ್ಥಿಗಳು ಅರ್ಜಿ ಭರ್ತಿ ಮಾಡಬಹುದಾಗಿದೆ.

ಭಾರತೀಯ ಸ್ಟೇಟ್ ಬ್ಯಾಂಕ್ನಲ್ಲಿ ಖಾಲಿ ಇರುವ ಒಟ್ಟು 6160 ಅಪ್ರೆಂಟಿಸ್ ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನಿಸಲಾಗಿದೆ. ರಾಜ್ಯವಾರು ಕೆಲವು ಹುದ್ದೆಗಳನ್ನು ಮೀಸಲಾಗಿರಿಸಲಾಗಿದೆ.
ಇದರ ಅನುಸಾರ ಕರ್ನಾಟಕಕ್ಕೆ ಒಟ್ಟು 175 ಹುದ್ದೆ ಮೀಸಲಾಗಿದೆ. ಅಪ್ರೆಂಟಿಸ್ ಆಯಕ್ಟ್ 1961 ಅನುಸಾರ ಈ ಹುದ್ದೆಗಳ ಭರ್ತಿನಡೆಯಲಿದ್ದು, ಒಂದು ವರ್ಷದ ಅವಧಿಗೆ ಈ ಹುದ್ದೆಗೆ ತಾತ್ಕಾಲಿಕವಾಗಿ ಈ ನೇಮಕಾತಿ ನಡೆಯಲಿದೆ. ಅಭ್ಯರ್ಥಿಗಳು ಕನ್ನಡ ಭಾಷೆಯಲ್ಲೂ ಪರೀಕ್ಷೆ ಎದುರಿಸಬಹುದಾಗಿದೆ.ಅಧಿಸೂಚನೆ
ಹುದ್ದೆ ವಿವರ: ಎಸ್ಬಿಐನಿಂದ ಕರೆಯಲಾದ 6,160 ಅಪ್ರೆಂಟ್ ಹುದ್ದೆಗಳ ಭರ್ತಿಯಲ್ಲಿ ಕರ್ನಾಟಕದ ವಿವಿಧ ಜಿಲ್ಲೆಗಳಲ್ಲಿ 175 ಸ್ಥಾನಗಳ ಭರ್ತಿ ನಡೆಯಲಿದೆ. ರಾಜ್ಯದ ಪ್ರತಿ ರಾಜ್ಯಗಳಲ್ಲೂ ನಿರ್ದಿಷ್ಟ ಸಂಖ್ಯೆಯ ಹುದ್ದೆ ಭರ್ತಿ ನಡೆಸಲಾಗುವುದು
ವಿದ್ಯಾರ್ಹತೆ: ಈ ಹುದ್ದೆಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಯಾವುದೆ ವಿಷಯದಲ್ಲಿ ಪದವಿಯನ್ನು ಹೊಂದಿರಬೇಕು.
ವಯೋಮಿತಿ: ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಕನಿಷ್ಠ 20 ವರ್ಷದಿಂದ ಗರಿಷ್ಠ ವಯೋಮಿತಿ 28 ವರ್ಷ ಆಗಿದೆ. ಇನ್ನು ಪರಿಶಿಷ್ಟ ಜಾತಿ, ಪಂಗಡ, ಹಿಂದುಳಿದ ಅಭ್ಯರ್ಥಿಗಳಿಗೆ ಎಸ್ಬಿಐ ನಿಯಮ ಅನುಸಾರ ಮೀಸಲಾತಿ ನೀಡಲಾಗುವುದು.
ವೇತನ: ಒಂದು ವರ್ಷದ ಅಪ್ರೆಂಟಿಸ್ ಅವಧಿಯಲ್ಲಿ ಮಾಸಿಕ 15 ಸಾವಿರ ರೂ ಗೌರವ ವೇತನ ನೀಡಲಾಗುವುದು. ಅಪ್ರೆಂಟಿಸ್ಗಳು ಬ್ಯಾಂಕ್ನ ಇನ್ನಿತರ ಅಲೋಯೆನ್ಸ್ ಮತ್ತು ಪ್ರಯೋಜನಕ್ಕೆ ಒಳಪಟ್ಟಿರುವುದಿಲ್ಲ
ಅರ್ಜಿ ಸಲ್ಲಿಕೆ: ಅಭ್ಯರ್ಥಿಗಳು ಈ ಹುದ್ದೆಗೆ ಆನ್ಲೈನ್ ಮೂಲಕ ಅರ್ಜಿ ಸಲ್ಲಿಕೆ ಮಾಡಬಹುದಾಗಿದೆ. ಸಾಮಾನ್ಯ, ಇಡಬ್ಲ್ಯೂಸಿ, ಒಬಿಸಿ ಅಭ್ಯರ್ಥಿಗಳಿಗೆ 300 ರೂ, ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡ ಮತ್ತು ಹಿಂದುಳಿದ ಅಭ್ಯರ್ಥಿಗಳಿಗೆ ಶುಲ್ಕ ವಿನಾಯಿತಿ ನೀಡಲಾಗಿದೆ.
ಆಯ್ಕೆ ಪ್ರಕ್ರಿಯೆ: ಈ ಹುದ್ದೆಗಳಿಗೆ ಅಭ್ಯರ್ಥಿಗಳನ್ನು ಆನ್ಲೈನ್ ಲಿಖಿತ ಪರೀಕ್ಷೆ ನಡೆಸುವ ಮೂಲಕ ಆಯ್ಕೆ ಮಾಡಲಾಗುವುದು. ಇದೆ ವೇಳೆ ಅಭ್ಯರ್ಥಿಗಳ ಸ್ಥಳೀಯ ಭಾಷಾ ಪರೀಕ್ಷೆಯನ್ನು ನಡೆಸಲಾಗುವುದು. ನಂತರ ದಾಖಲಾತಿ ಪರಿಶೀಲನೆ ಮತ್ತು ವೈದ್ಯಕೀಯ ತಪಾಸಣೆ ನಡೆಸಲಾಗುವುದು.
ಕರ್ನಾಟಕದ ಪರೀಕ್ಷಾ ಕೇಂದ್ರ: ಬೆಂಗಳೂರು, ಬೆಳಗಾಂ, ಕಲ್ಬುರ್ಗಿ, ಹುಬ್ಬಳ್ಳಿ ಧಾರವಾಡ, ಮಂಗಳೂರು, ಮೈಸೂರು, ಶಿವಮೊಗ್ಗ, ಉಡುಪಿ ಜಿಲ್ಲೆಗಳಲ್ಲಿ ಅಭ್ಯರ್ಥಿಗಳು ಪರೀಕ್ಷೆಗೆ ಹಾಜರಾಗಬಹುದಾಗಿದೆ.
ಈ ಹುದ್ದೆಗೆ ಅಭ್ಯರ್ಥಿಗಳು ಸೆಪ್ಟೆಂಬರ್ 1ರಿಂದ ಅರ್ಜಿ ಸಲ್ಲಿಕೆ ಮಾಡಬಹುದಾಗಿದ್ದು, ಅರ್ಜಿ ಸಲ್ಲಿಸಲು ಕಡೆಯ ದಿನಾಂಕ ಸೆಪ್ಟೆಂಬರ್ 21 ಆಗಿದೆ.
ಈ ಹುದ್ದೆ ಕುರಿತು ಹೆಚ್ಚಿನ ಮಾಹಿತಿ ಮತ್ತು ಅಧಿಕೃತ ಅಧಿಸೂಚನೆ ವೀಕ್ಷಣೆಗೆ sbi.co.in ಜಾಲತಾಣಕ್ಕೆ ಭೇಟಿ ನೀಡಬಹುದಾಗಿದೆ.
ಸಮಗ್ರ ಸುದ್ದಿಗಳಿಗಾಗಿ WhatsApp Group ಸೇರಿ: https://chat.whatsapp.com/KnDIfiBURQ9G5sLEJLqshk
ನಮ್ಮ Facebook page: https://www.facebook.com/samagrasudii
Views: 0