ಬೀದರ್: ATMಗೆ ಹಣಹಾಕಲು ಬಂದ SBI ಸಿಬ್ಬಂದಿ ಮೇಲೆ ಗುಂಡಿನ ದಾಳಿ, ಓರ್ವ ಸಾವು.

ಎಟಿಎಂಗೆ ಹಣ ಹಾಕಲು ಬಂದ ಸಿಬ್ಬಂದಿ ಮೇಲೆ ದುಷ್ಕರ್ಮಿಗಳು ಕಣ್ಣಿಗೆ ಖಾರದ‌ ಪುಡಿ ಎರಚಿ, ಗುಂಡು ಹಾರಿಸಿ ಹಣದ ಸಮೇತ ಪರಾರಿಯಾಗಿದ್ದಾರೆಂದು ತಿಳಿದುಬಂದಿದೆ. ಗುಂಡಿನ ದಾಳಿ ಪರಿಣಾಮ ಗಾಯಗೊಂಡಿದ್ದ ಎಸ್‌ಬಿಐ ಬ್ಯಾಂಕ್ ಸಿಬ್ಬಂದಿಯೊಬ್ಬರು ಸ್ಥಳದಲ್ಲೇ ಉಸಿರು ಚೆಲ್ಲಿದ್ದಾರೆ.

ಬೀದರ್: ಎಟಿಎಂಗೆ ಹಣ ಹಾಕಲು ಬಂದ ಬ್ಯಾಂಕ್ ಸಿಬ್ಬಂದಿ ಮೇಲೆ ಹಾಡಹಗಲೇ ಗುಂಡಿನ ದಾಳಿ ನಡೆಸಿರುವ ಘಟನೆಯೊಂದು ಬೀದರ್‌ನ ಎಸ್‌ಬಿಐ ಮುಖ್ಯ ಕಚೇರಿ‌ ಮುಂದೆ ಗುರುವಾರ ನಡೆದಿದೆ.

ಎಟಿಎಂಗೆ ಹಣ ಹಾಕಲು ಬಂದ ಸಿಬ್ಬಂದಿ ಮೇಲೆ ದುಷ್ಕರ್ಮಿಗಳು ಕಣ್ಣಿಗೆ ಖಾರದ‌ ಪುಡಿ ಎರಚಿ, ಗುಂಡು ಹಾರಿಸಿ ಹಣದ ಸಮೇತ ಪರಾರಿಯಾಗಿದ್ದಾರೆಂದು ತಿಳಿದುಬಂದಿದೆ. ಗುಂಡಿನ ದಾಳಿ ಪರಿಣಾಮ ಗಾಯಗೊಂಡಿದ್ದ ಎಸ್‌ಬಿಐ ಬ್ಯಾಂಕ್ ಸಿಬ್ಬಂದಿಯೊಬ್ಬರು ಸ್ಥಳದಲ್ಲೇ ಉಸಿರು ಚೆಲ್ಲಿದ್ದಾರೆ.

ಎಸ್​ಬಿಐ ಬ್ಯಾಂಕ್​ ಸಿಬ್ಬಂದಿ ಜಿಎಸ್’ಸಿ ವಾಹನದಲ್ಲಿ ಲಕ್ಷಾಂತರ ಹಣವನ್ನು ತೆಗೆದುಕೊಂಡು ಬಂದಿದ್ದರು. ಇನ್ನೇನು ಎಟಿಎಂಗೆ ಹಣ ಹಾಕಬೇಕು ಎನ್ನುವಷ್ಟರಲ್ಲಿ ಸ್ಥಳಕ್ಕೆ ಬಂದ ದುಷ್ಕರ್ಮಿಗಳು, ಏಕಾಏಕಿ ಐದು ಸುತ್ತಿನ ಗುಂಡಿನ ದಾಳಿ ನಡೆಸಿದ್ದಾರೆ. ಪರಿಣಾಮ ಓರ್ವ ಸ್ಥಳದಲ್ಲೇ ಸಾವನ್ನಪ್ಪಿದ್ದು, ಮತ್ತೋರ್ವ ಸಿಬ್ಬಂದಿಗೆ ಗಂಭೀರ ಗಾಯಗಳಾಗಿವೆ ಎಂದು ವರದಿಗಳಿಂದ ತಿಳಿದುಬಂದಿದೆ.

ಖರೀಮರು ಹಣದ ಪೆಟ್ಟಿಗೆಯನ್ನು ತೆಗೆದುಕೊಂಡು ಹೋಗುತ್ತಿರುವ ದೃಶ್ಯ ಸ್ಥಳೀಯರ ಫೋನ್​ನಲ್ಲಿ ಸೆರೆಯಾಗಿದೆ. ಈ ವಿಚಾರ ತಿಳಿದ ಕೂಡಲೇ ಘಟನಾ ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸುತ್ತಿದ್ದಾರೆ.

Source : https://www.kannadaprabha.com/karnataka/2025/Jan/16/bank-guard-killed-as-robbers-open-fire-at-atm-in-bidar

Leave a Reply

Your email address will not be published. Required fields are marked *