ಚಿತ್ರದುರ್ಗ ಜು. 04
ವರದಿ ಮತ್ತು ಫೋಟೋ ಕೃಪೆ ಸುರೇಶ್ ಪಟ್ಟಣ್, ಮೊ : 98862 95817
ನಗರದ ಇಂಡಿಯನ್ ಇಂಟರ್ ನ್ಯಾಷನಲ್ ಶಾಲೆಯಲ್ಲಿ 2026 ನೇ ಸಾಲಿನ ಶಾಲಾ ಸಂಸತ್ತಿನ ಚುನಾವಣೆ ನಡೆಸಲಾಯಿತು. ಶಾಲೆಯಲ್ಲಿ ವಿದ್ಯಾರ್ಥಿಗಳು ವಿವಿಧ ಹುದ್ದೆಗಳಿಗೆ ನಾಮಪತ್ರ ಸಲ್ಲಿಕೆ, ನಾಮಪತ್ರಗಳ ಪರಿಶೀಲನೆ, ಮತದಾನ ಮುಂತಾದ ಚುನಾವಣೆ ಹಂತಗಳನ್ನು ವಿದ್ಯಾರ್ಥಿಗಳಿಗೆ ಅರ್ಥವಾಗುವಂತೆ ಪ್ರಾಯೋಗಿಕವಾಗಿ ಪರಿಚಯಿಸಲಾಯಿತು.
ವಿದ್ಯಾರ್ಥಿಗಳು ಮತದಾನ ಮಾಡುವ ಸಂದರ್ಭದಲ್ಲಿ ಶಾಲಾ ಐಡಿ ಕಾರ್ಡ್ ಗುರುತಿನ ಚೀಟಿಯಾಗಿ ಬಳಸಲಾಯಿತು. ನಮ್ಮ ಸಂವಿಧಾನದ ಪ್ರಕಾರ ಚುನಾವಣೆ ಯಾವ ರೀತಿ ನಡೆಯುತ್ತದೆ ಎಂಬುದನ್ನು ಶಾಲಾ ಹಂತದಲ್ಲಿ ಮಕ್ಕಳಿಗೆ ಪರಿಚಯ ಮಾಡಿಕೊಡಲಾಯಿತು.
ಈ ಸಂದರ್ಭದಲ್ಲಿ ಸಂಸ್ಥೆಯ ಆಡಳಿತಾಧಿಕಾರಿಗಳಾದ ಶ್ರೀಮತಿ ಚಂದ್ರಕಲಾ ಚಂದ್ರಪ್ಪ, ಮುಖ್ಯ ಕಾರ್ಯ ನಿರ್ವಣಾಧಿಕಾರಿಯವರಾದ ರಘುಚಂದನ್, ಶಾಲೆಯ ಡೀನ್ ಅನಂತರಾಮ್, ಶೈಕ್ಷಣಿಕ ನಿರ್ದೇಶಕರಾದ ಸಂಪತ್ ಕುಮಾರ್ ಸಿ ಡಿ, ಪ್ರಾoಶುಪಾಲರಾದ ಪಿ.ಬಸವರಾಜಯ್ಯ, ಮುಖ್ಯ ಶಿಕ್ಷಕರಾದ ಜಾರೀನಾ, ಪಿ ಆರ್ ಓ ರವಿಕುಮಾರ್ ಮತ್ತು ಎಲ್ಲಾ ಶಿಕ್ಷಕ ಮತ್ತು ಶಿಕ್ಷಕೇತರ ವರ್ಗದವರು ಹಾಜರಿದ್ದರು
Follow the ಸಮಗ್ರ ಸುದ್ದಿ Telegram Channel: https://t.me/SamagraSuddi
ಸಮಗ್ರ ಸುದ್ದಿ channel on WhatsApp: