ಬೆಂಗಳೂರು: ದ್ವಿತೀಯ ಪಿಯುಸಿ ಪರೀಕ್ಷೆ-1ರ ಫಲಿತಾಂಶವನ್ನು ( 2nd PUC Examination-1 Result ) ಇಂದು ಬೆಳಗ್ಗೆ 10 ಗಂಟೆಗೆ ಪ್ರಕಟಿಸುವುದಾಗಿ ಶಾಲಾ ಶಿಕ್ಷಣ ಇಲಾಖೆ ( School Education Department ) ತಿಳಿಸಿದೆ. ರಿಸಲ್ಟ್ ಹೇಗೆ ನೋಡಬೇಕು ಅನ್ನೋ ಬಗ್ಗೆ ಮುಂದೆ ಓದಿ.
![](https://samagrasuddi.co.in/wp-content/uploads/2024/04/image-73.png)
ಈ ಕುರಿತಂತೆ ಪತ್ರಿಕಾ ಪ್ರಕಟಣೆಯಲ್ಲಿ ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯ ನಿರ್ಣಯ ಮಂಡಳಿಯ ಅಧ್ಯಕ್ಷರು ಮಾಹಿತಿ ನೀಡಿದ್ದು, ಮಾರ್ಚ್ 2024ರ ದ್ವಿತೀಯ ಪಿಯುಸಿ ಪರೀಕ್ಷೆ- ನ್ನು ದಿನಾಂಕ:01/03/2024 ರಿಂದ 22/03/2024 ರವರೆಗೆ ನಡೆಸಲಾಯಿತು ಎಂದಿದೆ.
ಎಲ್ಲಾ ವಿಷಯಗಳ ಉತ್ತರ ಪತ್ರಿಕೆಗಳ ಮೌಲ್ಯಮಾಪನ ಕಾರ್ಯವು ಮುಕ್ತಾಯವಾಗಿರುತ್ತದೆ. ದ್ವಿತೀಯ ಪಿಯುಸಿ ಪರೀಕ್ಷೆ-1ರ ಫಲಿತಾಂಶ ಪ್ರಕಟಿಸುವ ಸಂಬಂಧ ದಿನಾಂಕ: 10/04/2024 ರಂದು ಬೆಳಿಗ್ಗೆ 10:00 ಗಂಟೆಗೆ ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯ ನಿರ್ಣಯ ಮಂಡಲಿಯಲ್ಲಿ ಸುದ್ದಿಗೋಷ್ಠಿಯನ್ನು ಕರೆಯಲಾಗಿದೆ ಎಂದು ಹೇಳಿದ್ದಾರೆ.
ನಾಳೆ ಬೆಳಿಗ್ಗೆ 10 ಗಂಟೆಗೆ ದ್ವಿತೀಯ ಪಿಯುಸಿ ಪರೀಕ್ಷೆ-1ರ ಫಲಿತಾಂಶವನ್ನು ಪ್ರಕಟಿಸಲಾಗುತ್ತದೆ. ಆ ಬಳಿಕ ವಿದ್ಯಾರ್ಥಿಗಳು ಫಲಿತಾಂಶವನ್ನುhttps://karresults.nic.inಜಾಲತಾಣದಲ್ಲಿ ದಿನಾಂಕ:10/04/2024ರ ಬೆಳಿಗ್ಗೆ 11:00 ಗಂಟೆಯ ನಂತರ ವೀಕ್ಷಿಸಬಹುದಾಗಿದೆ ಎಂದು ತಿಳಿಸಿದ್ದಾರೆ.
ದ್ವಿತೀಯ ಪಿಯುಸಿ ಫಲಿತಾಂಶ ಚೆಕ್ ಮಾಡುವ ಸರಳ ವಿಧಾನ
– ಮೊದಲಿಗೆ ವೆಬ್‌ಸೈಟ್ ಲಿಂಕ್ karresults.nic.in ಗೆ ಭೇಟಿ ನೀಡಿ
– ಓಪನ್ ಆದ ಪುಟದಲ್ಲಿ ‘2nd PUC Exam 1 Results’ ಎಂದಿರುವ ಲಿಂಕ್ ಕ್ಲಿಕ್ ಮಾಡಿ.
– ಮತ್ತೊಂದು ಹೊಸ ಪುಟ ತೆರೆಯುತ್ತದೆ. ಇಲ್ಲಿ ದ್ವಿತೀಯ ಪಿಯುಸಿ ರಿಜಿಸ್ಟರ್ ನಂಬರ್ ಜತೆ ಯಾವ ವಿಭಾಗವೆಂದು ಅಂದರೆ ವಿಜ್ಞಾನ, ವಾಣಿಜ್ಯ ಮತ್ತು ಕಲೆ ಆಯ್ಕೆ ಮಾಡಿಕೊಳ್ಳಿ.
– ರಿಜಿಸ್ಟರ್ ನಂಬರ್ ಟೈಪಿಸಿ. ನಂತರ ‘Submit’ಎಂಬಲ್ಲಿ ಕ್ಲಿಕ್ ಮಾಡಿ.
– ಕ್ಲಿಕ್ ಮಾಡಿದಾಗ ನಿಮಗೆ ಫಲಿತಾಂಶವು ಸ್ಕ್ರೀನ್ ಮೇಲೆ ಕಾಣಿಸುತ್ತದೆ.
– ರಿಸಲ್ಟ್ ಶೀಟ್ ಅನ್ನು ಮುಂದಿನ ರೆಫರೆನ್ಸ್‌ಗಾಗಿ ಪ್ರಿಂಟ್ ತೆಗೆದುಕೊಳ್ಳಿ.
ನಮ್ಮ ಸಮಗ್ರ ಸುದ್ದಿಗಳಿಗಾಗಿ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು
WhatsApp Group: https://chat.whatsapp.com/KnDIfiBURQ9G5sLEJLqshk
Facebook page: https://www.facebook.com/samagrasudii
Sharechat: https://sharehat.com/profile/edu514826335?d=n
Twitter: https://twitter.com/SuddiSamagra
Threads: https://www.threads.net/@samagrasuddi.co.in
Instagram: https://www.instagram.com/samagrasuddi.co.in/
Telegram: https://t.me/+E1ubNzdguQ5jN2Y1