ಬಿಜೆಪಿಯ ಹಿರಿಯ ನಾಯಕ ಲಾಲ್ ಕೃಷ್ಣ ಅಡ್ವಾಣಿ ಅವರನ್ನು ನಿನ್ನೆ ಬುಧವಾರ ತಡರಾತ್ರಿ ದೆಹಲಿಯ ಏಮ್ಸ್ ಆಸ್ಪತ್ರೆಗೆ ದಾಖಲಿಸಲಾಗಿದೆ.
![](https://samagrasuddi.co.in/wp-content/uploads/2024/06/image-225-1024x576.png)
ನವದೆಹಲಿ: ಬಿಜೆಪಿಯ ಹಿರಿಯ ನಾಯಕ ಲಾಲ್ ಕೃಷ್ಣ ಅಡ್ವಾಣಿ ಅವರನ್ನು ನಿನ್ನೆ ಬುಧವಾರ ತಡರಾತ್ರಿ ದೆಹಲಿಯ ಏಮ್ಸ್ ಆಸ್ಪತ್ರೆಗೆ ದಾಖಲಿಸಲಾಗಿದೆ. ಸದ್ಯ ಅವರ ಆರೋಗ್ಯ ಸ್ಥಿತಿ ಸ್ಥಿರವಾಗಿದ್ದಾರೆ ಮತ್ತು ನಿಗಾ ಘಟಕದಲ್ಲಿದ್ದಾರೆ ಎಂದಷ್ಟೇ ಸದ್ಯಕ್ಕೆ ಮಾಹಿತಿ ಸಿಕ್ಕಿದೆ.
96 ವರ್ಷದ ಮಾಜಿ ಉಪಪ್ರಧಾನಿ ಅವರನ್ನು ಆಲ್ ಇಂಡಿಯಾ ಇನ್‌ಸ್ಟಿಟ್ಯೂಟ್ ಆಫ್ ಮೆಡಿಕಲ್ ಸೈನ್ಸಸ್ (AIIMS) ನ ಹಳೆಯ ಖಾಸಗಿ ವಾರ್ಡ್‌ನಲ್ಲಿ ದಾಖಲಿಸಲಾಗಿದ್ದು, ಮೂತ್ರಶಾಸ್ತ್ರ ವಿಭಾಗದ ವೈದ್ಯರಿಂದ ಚಿಕಿತ್ಸೆ ಪಡೆಯುತ್ತಿದ್ದಾರೆ. ಅಡ್ವಾಣಿ ಆರೋಗ್ಯ ಸ್ಥಿರವಾಗಿದೆ ಮತ್ತು ಸದ್ಯ ಅಬ್ಸರ್ವೇಷನ್ನಲ್ಲಿದ್ದಾರೆ ಎಂದು ಪ್ರಕಟಣೆ ತಿಳಿಸಿದೆ.
Source : https://www.kannadaprabha.com/nation/2024/Jun/27/lk-advani-admitted-to-aiims-delhi