ಹಿರಿಯ ಮುತ್ಸದ್ದಿ ಎಚ್. ಹನುಮಂತಪ್ಪ ನಿಧನಕ್ಕೆ ಕುಮಾರ್ ಗೌಡ ಜಿ.ಎಸ್

ಪೋಟೋ ಮತ್ತು ವರದಿ ಸುರೇಶ್ ಪಟ್ಟಣ್

​ಚಿತ್ರದುರ್ಗ: ಮಾಜಿ ರಾಜ್ಯಸಭಾ ಸದಸ್ಯರು, ದಲಿತ ಸಂಘರ್ಷ ಸಮಿತಿಯ ಹಿರಿಯ ಧುರೀಣರು ಹಾಗೂ ಪ್ರಸಿದ್ಧ ರಾಜಕೀಯ ಮುತ್ಸದ್ದಿ, ನೀರಾವರಿ ಹೋರಾಟಗಾರರಾಗಿದ್ದ, ಎಚ್. ಹನುಮಂತಪ್ಪ ಅವರ ನಿಧನಕ್ಕೆ ಕೆಪಿಸಿಸಿ ಪ್ರಚಾರ ಸಮಿತಿಯ ಮುಖ್ಯ ಸಂಯೋಜಕರು ಹಾಗೂ ವಿಜಯನಗರ ಜಿಲ್ಲಾ ಉಸ್ತುವಾರಿಗಳಾದ ಕುಮಾರ್ ಗೌಡ ಜಿ.ಎಸ್. ಅವರು ತೀವ್ರ ಸಂತಾಪ ವ್ಯಕ್ತಪಡಿಸಿದ್ದಾರೆ.

ಎಚ್. ಹನುಮಂತಪ್ಪ ಅವರು ಸಂಸತ್ತಿನಲ್ಲಿ ಕರ್ನಾಟಕ ಹಾಗೂ ಶೋಷಿತ ಸಮುದಾಯಗಳ ಧ್ವನಿಯಾಗಿ ಸುದೀರ್ಘ ಕಾಲ ಸೇವೆ ಸಲ್ಲಿಸಿದವರು. ಚಿತ್ರದುರ್ಗ ಜಿಲ್ಲೆಯ ಅಭಿವೃದ್ಧಿ ಹಾಗೂ ಸಾಮಾಜಿಕ ನ್ಯಾಯ ಹಾಗೂ ಭದ್ರಾ ಮೇಲ್ದಂಡೆ ಹೋರಾಟಗಳಲ್ಲಿ ಅವರ ಕೊಡುಗೆ ಅಪಾರ. ಅವರ ನಿಧನದಿಂದಾಗಿ ನಾಡು ಒಬ್ಬ ಮುತ್ಸದ್ದಿ ರಾಜಕಾರಣಿ ಹಾಗೂ ಆದರ್ಶ ಮಾರ್ಗದರ್ಶಕರನ್ನು ಕಳೆದುಕೊಂಡಂತಾಗಿದೆ” ಎಂದು ವಿಷಾದಿಸಿದ್ದಾರೆ.
​”ಭಗವಂತನು ಮೃತರ ಆತ್ಮಕ್ಕೆ ಚಿರಶಾಂತಿಯನ್ನು ಕರುಣಿಸಲಿ ಮತ್ತು ಅವರ ಅಗಲಿಕೆಯ ದುಃಖವನ್ನು ಭರಿಸುವ ಶಕ್ತಿಯನ್ನು ಅವರ ಕುಟುಂಬ ವರ್ಗ ಹಾಗೂ ಅಭಿಮಾನಿಗಳಿಗೆ ನೀಡಲಿ” ಕುಮಾರ್ ಗೌಡ ಜಿ.ಎಸ್. ಅವರು ತಮ್ಮ ಶೋಕ ಸಂದೇಶದಲ್ಲಿ ಪ್ರಾರ್ಥಿಸಿದ್ದಾರೆ.

Leave a Reply

Your email address will not be published. Required fields are marked *