ಚಿತ್ರದುರ್ಗ ಆ. 28
ವರದಿ ಮತ್ತು ಪೋಟೋ ಸುರೇಶ್ ಪಟ್ಟಣ್
ಕರ್ನಾಟಕ ಪ್ರದೇಶ ಯುವ ಕಾಂಗ್ರೆಸ್, ಕಾನೂನು ಘಟಕ`ದ ರಾಜ್ಯ ಕಾರ್ಯದರ್ಶಿಯಾಗಿ ಚಿತ್ರದುರ್ಗದ ಶಶಾಂಕ ನಿರಂಜನರವರನ್ನು ನೇಮಕವಾಗಿರುವುದಾಗಿ ರಾಜ್ಯ ಕಾನೂನು ಘಟಕದ ಅಧ್ಯಕ್ಷರಾದ ಶ್ರೀಧರ್ ಜಾಧವ್ ತಿಳಿಸಿದ್ದಾರೆ.
ನನ್ನನ್ನು ರಾಜ್ಯ ಕಾರ್ಯದರ್ಶಿಯಾಗಿ ನೇಮಕ ಮಾಡಿರುವುದು ಅತ್ಯಂತ ಗೌರವದ ವಿಷಯವಾಗಿದೆ. ನಾನು ಈ ಜವಾಬ್ದಾರಿಯನ್ನು ಅತ್ಯಂತ ಬದ್ಧತೆ ಮತ್ತು ನಿಷ್ಠೆಯಿಂದ ಸ್ವೀಕರಿಸುತ್ತಿದ್ದು, ಕಾಂಗ್ರೆಸ್ ಪಕ್ಷಕ್ಕಾಗಿ, ಸಾಮಾಜಿಕ ನ್ಯಾಯಕ್ಕಾಗಿ, ಹಾಗು ಪ್ರಜಾಸತ್ತಾತ್ಮಕ ವ್ಯವಸ್ಥೆಗಾಗಿನಿರಂತರವಾಗಿ ಶ್ರಮಿಸುತ್ತೇನೆ ಎಂಬುದಾಗಿ ಭರವಸೆ ನೀಡುತ್ತೇನೆ. ನಮ್ಮ ಭಾರತೀಯ ಯುವ ಕಾಂಗ್ರೆಸ್ ಸಂಘಟನೆಯ ದೃಷ್ಟಿಕೋನವನ್ನು ಸದಾ ಉಳಿಸಿಕೊಂಡು ಹೋಗುತ್ತೇನೆ ಎಂದು ತಿಳಿಸಿದ್ದು ನನ್ನ ನೇಮಕಕ್ಕೆ ಕಾರಣರಾದ ಕರ್ನಾಟಕ ಪ್ರದೇಶ ಯುವ ಕಾಂಗ್ರೆಸ್ ಅಧ್ಯಕ್ಷರಾದ ಹೆಚ್.ಎಸ್. ಮಂಜುನಾಥ್ ಹಾಗೂ ರಾಜ್ಯ ಕಾನೂನು ಘಟಕದ ಅಧ್ಯಕ್ಷರಾದ ಶ್ರೀಧರ್ ಜಾಧವ್ ಅವರು ನನ್ನ ಮೇಲೆ ವಿಶ್ವಾಸ ತೋರಿಸಿದ್ದಕ್ಕೆ ಹೃತ್ಪೂರ್ವಕ ಕೃತಜ್ಞತೆಗಳನ್ನು ಸಲ್ಲಿಸುತ್ತೇನೆ ಎಂದು ಶಶಾಂಕ ನಿರಂಜನ ತಿಳಿಸಿದ್ದಾರೆ.
Views: 14