ಆಗ್ನೇಯ ಪದವೀಧರ ಕ್ಷೇತ್ರ ಚುನಾವಣೆ: ಪ್ರಚಾರಕ್ಕೆ ಚಾಲನೆ ನೀಡಿದ ಕಾಂಗ್ರೆಸ್ ಅಭ್ಯರ್ಥಿ ಶಶಿ ಹುಲಿಕುಂಟೆ ಮಠ್.

ಚಿತ್ರದುರ್ಗ ಆ. 27

ವರದಿ ಮತ್ತು ಫೋಟೋ ಕೃಪೆ ಸುರೇಶ್ ಪಟ್ಟಣ್, ಮೊ : 98862 95817

ಮುಂಬರುವ ಆಗ್ನೇಯ ಪದವೀಧರ ಕ್ಷೇತ್ರದ ಚುನಾವಣೆಯ ಹಿನ್ನಲೆಯಲ್ಲಿ ಕಾಂಗ್ರೆಸ್ ಪಕ್ಷದಿಂದ ಅಭ್ಯರ್ಥಿ ಯಾಗಿ ಆಯ್ಕೆಯಾಗಿರುವ ಶಶಿ ಹುಲಿಕುಂಟೆ ಮಠ್ ರವರು ಗುರುವಾರ ಚಿತ್ರದುರ್ಗ ನಗರದ ಹೊರ ವಲಯದ ಶ್ರೀ ವೆಂಕಟರಮಣ ದೇವಾಲಯದಲ್ಲಿ ಸ್ವಾಮಿಗೆ ಪೂಜೆಯನ್ನು ಸಲ್ಲಿಸುವುದರ ಮೂಲಕ ಚಿತ್ರದುರ್ಗ ಜಿಲ್ಲೆಯಲ್ಲಿ ತಮ್ಮ ಪ್ರಚಾರ ಕಾರ್ಯವನ್ನು ಪ್ರಾರಂಭ ಅಧಿಕೃತವಾಗಿ ಆರಂಭಿಸಿದರು.

ಈ ಸಂದರ್ಭದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಜಿಲ್ಲಾ ಉಸ್ತುವಾರಿ ಸಚಿವ ರಘುಮೂರ್ತಿ ಅವರ ನಿರ್ದೇಶನದಂತೆ ಹಾಗೂ ಸ್ಥಳೀಯ ಶಾಸಕ ವೀರೇಂದ್ರ ಪಪ್ಪಿ ಅವರ ಸಹಕಾರದೊಂದಿಗೆ ಚಿತ್ರದುರ್ಗ ವಿಧಾನಸಭೆ ಕ್ಷೇತ್ರದಲ್ಲಿ ಒಂದು ವಾರದ ಸತತ ಪ್ರವಾಸವನ್ನು ಹಮ್ಮಿಕೊಳ್ಳಲಾಗಿದೆ. ಈ ಪ್ರವಾಸದ ಅವಧಿಯಲ್ಲಿ ಜಿಲ್ಲೆಯ ವಿವಿಧ ಶಾಲಾ-ಕಾಲೇಜುಗಳಿಗೆ ಭೇಟಿ ನೀಡಿ ಮತದಾರರನ್ನು ನೇರವಾಗಿ ಭೇಟಿಯಾಗಲಿದ್ದು, ಮತಯಾಚನೆ ಮಾಡಲಾಗುವುದು ಶಿಕ್ಷಕರಷ್ಟೇ ಅಲ್ಲದೆ, ನೊಂದಾಯಿತ ಪದವೀಧರರನ್ನು ಹೋಬಳಿ ಹಾಗೂ ಪಂಚಾಯಿತಿ ಮಟ್ಟದಲ್ಲಿ ಪಕ್ಷದ ಪ್ರಮುಖ ಮುಖಂಡರೊಂದಿಗೆ ಭೇಟಿ ಮಾಡಲಾಗುವುದು. ಮುಂದಿನ ಏಳು ದಿನಗಳ ಕಾಲ ನಿರಂತರವಾಗಿ ಈ ಪ್ರವಾಸ ಮುಂದುವರಿಯಲಿದೆ ಎಂದು ತಿಳಿಸಿದರು.

ಈ ಕ್ಷೇತ್ರದಲ್ಲಿ ಇದುವರೆಗೆ ಶಿಕ್ಷಕರಿಗೆ ಮತ್ತು ಪದವೀಧರರಿಗೆ ಸೂಕ್ತ ಸಹಕಾರ ಲಭಿಸದಿರುವ ಕುರಿತು ಗಮನ ಸೆಳೆದ ಅಭ್ಯರ್ಥಿ, ತಮ್ಮ ಪಕ್ಷವು ಅಧಿಕಾರದಲ್ಲಿರುವುದರಿಂದ ಮುಂಬರುವ ದಿನಗಳಲ್ಲಿ ಕ್ಷೇತ್ರಕ್ಕೆ ಹಾಗೂ ಮತದಾರರಿಗೆ ಅಗತ್ಯ ಸಹಕಾರ ನೀಡಲಾಗುವುದು ಎಂದು ಭರವಸೆ ನೀಡಿ ಶಿಕ್ಷಕರು ಎದುರಿಸುತ್ತಿರುವ ವಿವಿಧ ಸಮಸ್ಯೆಗಳು ವಿಶೇಷವಾಗಿ ಪ್ರಾಥಮಿಕ, ಪ್ರೌಢಶಾಲೆ, ಕಾಲೇಜು ಹಾಗೂ ಅನುದಾನರಹಿತ ಸಂಸ್ಥೆಗಳ ಶಿಕ್ಷಕರ ಕುಂದುಕೊರತೆಗಳನ್ನು ಪ್ರಾಮಾಣಿಕವಾಗಿ ಬಗೆಹರಿಸಲು ಶ್ರಮಿಸುವುದಾಗಿ ತಿಳಿಸಿದರು.


ಇದರೊಂದಿಗೆ ಯುವ ಪದವೀಧರರನ್ನು ಕಾಡುತ್ತಿರುವ ನಿರುದ್ಯೋಗ ಸಮಸ್ಯೆಗೆ ಸ್ಪಂದಿಸಿ, ಸರ್ಕಾರ ಈಗಾಗಲೇ ರೂಪಿಸುತ್ತಿರುವ ಉದ್ಯೋಗಾವಕಾಶಗಳ ಜೊತೆಗೆ ಮುಂಬರುವ ದಿನಗಳಲ್ಲಿ ಮತ್ತಷ್ಟು ಉದ್ಯೋಗಾವಕಾಶಗಳನ್ನು ಕಲ್ಪಿಸಲು ಹೋರಾಟ ನಡೆಸಲಾಗುವುದು ಎಂದು ಹೇಳಿದರು.

ಪದವೀಧರ ಕ್ಷೇತ್ರದ ಪ್ರತಿನಿಧಿಯಾಗುವುದು ಎಂದರೆ ಕೇವಲ ಅಧಿಕಾರ ಅನುಭವಿಸುವುದಲ್ಲ; ಅದು ಬೌದ್ಧಿಕ ವರ್ಗದ ಸಮಸ್ಯೆಗಳಿಗೆ ಶಾಸನಸಭೆಯಲ್ಲಿ ಧ್ವನಿಯಾಗುವುದು. ಪದವೀಧರರ ಮತ್ತು ಶಿಕ್ಷಕರ ಸಮಸ್ಯೆಗಳಿಗೆ ಕೇವಲ ಭರವಸೆ ನೀಡದೆ, ಸರ್ಕಾರದ ಮಟ್ಟದಲ್ಲಿ ಅವುಗಳನ್ನು ಕಾಯ್ದೆಗಳಾಗಿ ರೂಪಿಸಲು ಪ್ರಾಮಾಣಿಕ ಪ್ರಯತ್ನ ಮಾಡುತ್ತೇನೆ. ನಿರುದ್ಯೋಗ ಪದವೀಧರರಿಗಾಗಿ ಸರ್ಕಾರ ಮತ್ತು ಸರ್ಕಾರೇತರ ವಲಯಗಳಲ್ಲಿ ಸೂಕ್ತ ನ್ಯಾಯ ಒದಗಿಸಲು ಶ್ರಮಿಸುತ್ತೇನೆ. ಪದವೀಧರ ಹಾಗೂ ಶಿಕ್ಷಕರ ಕುಂದುಕೊರತೆಗಳನ್ನು ಪರಿಹರಿಸುವುದು ಮತ್ತು ಕ್ಷೇತ್ರಕ್ಕೆ ಸರ್ಕಾರದ ಹಂತದಲ್ಲಿ ಸೂಕ್ತ ಬೆಂಬಲ ದೊರಕಿಸಿಕೊಡುವುದೇ ಈ ಪ್ರಚಾರ ಪ್ರವಾಸದ ಮುಖ್ಯ
ಉದ್ದೇಶವಾಗಿದೆ. ಎಂದು ಶಶಿ ಹುಲಿಕುಂಟೆ ಮಠ್ ತಿಳಿಸಿದರು.

ಈ ಸಂದರ್ಭದಲ್ಲಿ ಜಿಲ್ಲಾ ಕಾಂಗ್ರೆಸ್ ಸಮಿತಿಯ ಅಧ್ಯಕ್ಷರಾದ ತಾಜ್ ಪೀರ್, ಪ್ರಧಾನ ಕಾರ್ಯದರ್ಶಿ ಸಂಪತ್ ಕುಮಾರ್, ಶಾಸಕರ ಸಹೋದರರಾದ ಕೆ.ಸಿ.ನಾಗರಾಜ್ ಜಿಲ್ಲಾ ಗ್ಯಾರೆಂಟಿ ಪ್ರಾಧಿಕಾರದ ಅಧ್ಯಕ್ಷರಾದ ಶಿವಣ್ಣ ಗಂಜಿಗಟ್ಟೆ, ಪ್ರಾಥಮಿಕ ಶಾಲಾ ಸಂಘದ ಅಧ್ಯಕ್ಷರಾದ ಮಹಾಂತೇಶ್, ಫ್ರೌಢಶಾಲಾ ಅಧ್ಯಾಪಕರುಗಳ ಸಂಘದ ಮಾಜಿ ಅಧ್ಯಕ್ಷರಾದ ರಾಜೇಶ್, ಫ್ರೌಢಶಾಲಾ ಶಿಕ್ಷಕರ ಸಂಘದ ಅಧ್ಯಕ್ಷರಾದ ಶಿವಣ್ಣ, ಎನ್.ಜಿ.ಓ. ಖಂಜಾಚಿ ಮಲ್ಲಿಕಾರ್ಜನ್, ಕಾರ್ಯದರ್ಶಿ ಶ್ರೀನಿವಾಸ್, ನಾಗರಾಜ್, ತಾಲ್ಲೂಕು ಸಹಾ ಶಿಕ್ಷಕರ ಸಂಘದ ಅಧ್ಯಕ್ಷ ನಿಜಲಿಂಗಪ್ಪ, ಲೇಖಕ ಆನಂದಕುಮಾರ್, ಬಹುಗುಣ, ಲಿಂಗಾಯತ ನೌಕರರ ಕ್ಷೇಮಾಭೀವೃದ್ದಿ ಸಂಘದ
ಅಧ್ಯಕ್ಷ ವಿರೇಶ್ ಸೇರಿದಂತೆ ಅಭೀಮಾನಿಗಳು ಹಿತೈಷಿಗಳು ಉಪಸ್ಥಿತರಿದ್ದರು.

ನಮ್ಮ ಸಮಗ್ರ ಸುದ್ದಿಗಳಿಗಾಗಿ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು WhatsApp Group:https://chat.whatsapp.com/KnDIfiBURQ9G5sLEJLqshk

Facebook page: https://www.facebook.com/samagrasudii

Sharechat: https://sharehat.com/profile/edu514826335?d=n

Twitter: https://twitter.com/SuddiSamagra

Threads: https://www.threads.net/@samagrasuddi.co.in

Instagram: https://www.instagram.com/samagrasuddi.co.in/

Telegram: https://t.me/+E1ubNzdguQ5jN2Y1

Whats App Channel: https://whatsapp.com/channel/0029VbDbOsBD8SE2H0L3d40j

Leave a Reply

Your email address will not be published. Required fields are marked *