ಜನವರಿ 16 ಮತ್ತು 17ರಂದು ಕುರಿ ಮತ್ತು ಮೇಕೆ ಸಾಕಾಣಿಕೆ ತರಬೇತಿ

ಮಾಹಿತಿ ಮತ್ತು ಫೋಟೋ ಕೃಪೆ
ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ, ಚಿತ್ರದುರ್ಗ

ಚಿತ್ರದುರ್ಗ,(ಜ.13) :  ದಾವಣಗೆರೆ ಪಶುಪಾಲನಾ ಮತ್ತು ಪಶು ವೈದ್ಯಕೀಯ ಸೇವಾ ಇಲಾಖೆಯ ವತಿಯಿಂದ ಇದೇ ಜನವರಿ 16 ಮತ್ತು 17 ರಂದು ದಾವಣಗೆರೆ ನಗರದ ಪಿ.ಬಿ.ರಸ್ತೆಯ ಅರುಣ ಚಿತ್ರ ಮಂದಿರದ ಎದುರಿನ ಪಶು ಆಸ್ಪತ್ರೆ ಆವರಣದಲ್ಲಿರುವ ಪಶುಪಾಲನಾ ಮತ್ತು ಪಶುವೈದ್ಯಕೀಯ ತರಬೇತಿ ಕೇಂದ್ರದಲ್ಲಿ ರೈತರಿಗೆ ಕುರಿ ಮತ್ತು ಮೇಕೆ ಸಾಕಾಣಿಕೆ ತರಬೇತಿ ಹಮ್ಮಿಕೊಳ್ಳಲಾಗಿದೆ.

ಆಸಕ್ತರು ಆಧಾರ್ ಕಾರ್ಡ್, ಎರಡು  ಪಾಸ್ ಪೋರ್ಟ್ ಸೈಜ್ ಪೋಟೋ ಮತ್ತು ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದವರು ಜಾತಿ ಪ್ರಮಾಣ ಪತ್ರದ ಜೆರಾಕ್ಸ್ ಪ್ರತಿಗಳೊಂದಿಗೆ ತರಬೇತಿಗೆ ಹಾಜರಾಗಬೇಕು.

ಹೆಚ್ಚಿನ ಮಾಹಿತಿಗಾಗಿ ದೂರವಾಣಿ ಸಂಖ್ಯೆ 08192-233787 ಗೆ ಸಂಪರ್ಕಿಸಬಹುದು ಎಂದು ದಾವಣಗೆರೆ ಪಶುಪಾಲನಾ ಮತ್ತು ಪಶುವೈದ್ಯಕೀಯ ತರಬೇತಿ ಕೇಂದ್ರದ ಮುಖ್ಯ ಪಶು ವೈದ್ಯಾಧಿಕಾರಿಗಳು ತಿಳಿಸಿದ್ದಾರೆ.

The post ಜನವರಿ 16 ಮತ್ತು 17ರಂದು ಕುರಿ ಮತ್ತು ಮೇಕೆ ಸಾಕಾಣಿಕೆ ತರಬೇತಿ first appeared on Kannada News | suddione.

from ಚಿತ್ರದುರ್ಗ – Kannada News | suddione https://ift.tt/9X4BDzt
via IFTTT

Leave a Reply

Your email address will not be published. Required fields are marked *