ವರದಿ ಮತ್ತು ಫೋಟೋ ಕೃಪೆ ಸುರೇಶ್ ಪಟ್ಟಣ್, ಮೊ : 98862 95817
ಚಿತ್ರದುರ್ಗ ಮಾ.23 ಚಿತ್ರದುರ್ಗ ನಗರದ ಜಿಲ್ಲಾ ಲಿಂಗಾಯತ ಶಿವಶಿಂಪಿ ಮಹಿಳಾ ಘಟಕದವತಿಯಿಂದ ವಿಶ್ವ ಮಹಿಳಾ ದಿನಾಚರಣೆ ಅಂಗವಾಗಿ ಶಿವಶಿಂಪಿ ಮಹಿಳಾ ಸಂಭ್ರಮ ಕಾರ್ಯಕ್ರಮವನ್ನು ಮಾ. 24ರ ಸೋಮವಾರ ಸಂಜೆ 5 ಗಂಟೆಗೆ ನಗರದ ಶ್ರೀ ನೀಲಕಂಠೇಶ್ವರ ಸಮುದಾಯ
ಭವನದಲ್ಲಿ ಹಮ್ಮಿಕೊಳ್ಳಲಾಗಿದೆ ಎಂದು ಜಿಲ್ಲಾ ಲಿಂಗಾಯತ ಶಿವಶಿಂಪಿ ಮಹಿಳಾ ಘಟಕದ ಕಾರ್ಯಕಾರಿಣಿ ಸಮಿತಿ ತಿಳಿಸಿದೆ.

ಈ ಕಾರ್ಯಕ್ರಮದಲ್ಲಿ ಹೆರಿಗೆ ಮತ್ತು ಸ್ತ್ರೀರೋಗ ತಜ್ಞರಾದ ಶ್ರೀಮತಿ ಡಾ. ಜ್ಯೋತಿ ಶರತ್‍ಕುಮಾರ್ ರವರು ಆಧುನಿಕ ಬದುಕಿನಲ್ಲಿ
ಮಹಿಳೆಯ ಆರೋಗ್ಯದ ಬಗ್ಗೆ ಹಾಗೂ ಶಿಕ್ಷಕಿಯಾದ ಶ್ರೀಮತಿ ಗೀತಾ ಭರಮಸಾಗರ ಇವರು ಪ್ರಸ್ತುತ ಸಮಾಜದಲ್ಲಿ ಆಡಂಬರದ
ವಿವಾಹ ಅಗತ್ಯವೆ? ಎಂಬ ವಿಷಯದ ಬಗ್ಗೆ ಉಪನ್ಯಾಸ ನೀಡಲಿದ್ದಾರೆ.

ಸಮಾರಂಭದ ಅಧ್ಯಕ್ಷತೆಯನ್ನು ಜಿಲ್ಲಾ ಲಿಂಗಾಯತ ಶಿವಶಿಂಪಿ ಮಹಿಳಾ ಘಟಕದ ಜಲ್ಲಾಧ್ಯಕ್ಷರಾದ ಶ್ರೀಮತಿ ಅನಿತಾ ಮುರುಗೇಶ್
ವಹಿಸಲಿದ್ದು, ಕಾರ್ಯದರ್ಶಿಗಳಾದ ಶ್ರೀಮತಿ ಕವಿತಾ ಪಂಪಾಪತಿ ಭಾಗವಹಿಸಲಿದ್ದಾರೆ. ಇದೇ ಸಂದರ್ಭದಲ್ಲಿ ಮಹಿಳಾ ಘಟಕದ
ಪದಾಧಿಕಾರಿಗಳಿಂದ ವಿವಿಧ ಸಾಂಸ್ಕøತಿಕ ಕಾರ್ಯಕ್ರಮ ಹಾಗೂ ವಿವಿಧ ಕ್ರೀಡಾ ಸ್ಪರ್ದೆಯಲ್ಲಿ ವಿಜೇತರಾದವರಿಗೆ ಬಹುಮಾನ
ವಿತರಣಾ ಸಮಾರಂಭ ನಡೆಯಲಿದೆ