Shreyas Iyer : ಶಸ್ತ್ರಚಿಕಿತ್ಸೆಗೆ ಒಳಗಾಗಲಿರುವ ಶ್ರೇಯಸ್ ಅಯ್ಯರ್​: ವರದಿ

ಭಾರತ-ಆಸ್ಟ್ರೇಲಿಯಾ ನಡುವಣ ಬಾರ್ಡರ್-ಗವಾಸ್ಕರ್ ಟೆಸ್ಟ್ ಸರಣಿಯ ಕೊನೆಯ ಪಂದ್ಯದ ವೇಳೆ ಬೆನ್ನು ನೋವಿಗೆ ಒಳಗಾಗಿದ್ದ ಟೀಮ್ ಇಂಡಿಯಾ ಆಟಗಾರ ಶ್ರೇಯಸ್ ಅಯ್ಯರ್ ಶಸ್ತ್ರಚಿಕಿತ್ಸೆಗೆ ಒಳಗಾಗಲಿದ್ದಾರೆ. ಇದರಿಂದಾಗಿ ಅವರು ಮುಂಬರುವ ಇಂಡಿಯನ್ ಪ್ರೀಮಿಯರ್ ಲೀಗ್​ನ ಎಲ್ಲಾ ಪಂದ್ಯಗಳನ್ನು ತಪ್ಪಿಸಿಕೊಳ್ಳಲಿದ್ದಾರೆ ಎಂದು ವರದಿಯಾಗಿದೆ.ಇದಕ್ಕೂ ಮುನ್ನ ಬೆನ್ನು ನೋವಿನ ಸಮಸ್ಯೆಯಿಂದ ಬಳಲುತ್ತಿರುವ ಅಯ್ಯರ್ ಐಪಿಎಲ್​ನ ಮೊದಲಾರ್ಧದ ಪಂದ್ಯಗಳಿಗೆ ಅಲಭ್ಯರಾಗಲಿದ್ದಾರೆ ಎನ್ನಲಾಗಿತ್ತು. ಆದರೀಗ ಬೆನ್ನು ನೋವಿನ ಸಮಸ್ಯೆಗೆ ಶಾಶ್ವತ ಪರಿಹಾರ ಕಾಣಲು ಶಸ್ತ್ರಚಿಕಿತ್ಸೆಗೆ ಒಳಗಾಗಲು ನಿರ್ಧರಿಸಿದ್ದಾರೆ.ಇನ್ನು ಶ್ರೇಯಸ್ ಅಯ್ಯರ್ ಶಸ್ತ್ರಚಿಕಿತ್ಸೆಗೆ ಒಳಗಾದರೆ ಮುಂದಿನ ನಾಲ್ಕೈದು ತಿಂಗಳ ಕಾಲ ಅವರು ಮೈದಾನದಿಂದ ಹೊರಗುಳಿಯುವ ಸಾಧ್ಯತೆಯಿದೆ. ಇದರಿಂದ ಐಪಿಎಲ್ ಮಾತ್ರವಲ್ಲೇ ವಿಶ್ವ ಟೆಸ್ಟ್ ಚಾಂಪಿಯನ್​ ಫೈನಲ್ ಪಂದ್ಯವನ್ನೂ ಕೂಡ ಟೀಮ್ ಇಂಡಿಯಾ ಆಟಗಾರ ತಪ್ಪಿಸಿಕೊಳ್ಳಲಿದ್ದಾರೆ.ಅಯ್ಯರ್ ಐಪಿಎಲ್​ನಿಂದ ಹೊರಗುಳಿಯುತ್ತಿರುವ ಸುದ್ದಿಯ ಬೆನ್ನಲ್ಲೇ ಇದೀಗ ಕೆಕೆಆರ್ ತಂಡದ ಹೊಸ ನಾಯಕ ಯಾರೆಂಬ ಚರ್ಚೆಗಳು ಶುರವಾಗಿದೆ. ಈ ಪಟ್ಟಿಯಲ್ಲಿ ಸುನಿಲ್ ನರೈನ್ , ಆಂಡ್ರೆ ರಸೆಲ್, ನಿತೀಶ್ ರಾಣಾ ಹಾಗೂ ರಿಂಕು ಸಿಂಗ್​ ಹೆಸರುಗಳು ಕೇಳಿ ಬಂದಿವೆ. ಇದಾಗ್ಯೂ ಅಂತಿಮವಾಗಿ ಕೊಲ್ಕತ್ತಾ ನೈಟ್ ರೈಡರ್ಸ್ ಫ್ರಾಂಚೈಸಿ ಯಾರಿಗೆ ಮಣೆ ಹಾಕಲಿದೆ ಕಾದು ನೋಡಬೇಕಿದೆ.ಕೋಲ್ಕತ್ತಾ ನೈಟ್ ರೈಡರ್ಸ್ ತಂಡ ಹೀಗಿದೆ: ನಿತೀಶ್ ರಾಣಾ, ರಹಮಾನುಲ್ಲಾ ಗುರ್ಬಾಜ್, ವೆಂಕಟೇಶ್ ಅಯ್ಯರ್, ಆಂಡ್ರೆ ರಸೆಲ್, ಸುನಿಲ್ ನರೈನ್, ಶಾರ್ದೂಲ್ ಠಾಕೂರ್, ಲಾಕಿ ಫರ್ಗುಸನ್, ಉಮೇಶ್ ಯಾದವ್, ಟಿಮ್ ಸೌಥಿ, ವರುಣ್ ಚಕ್ರವರ್ತಿ, ಅನುಕೂಲ್ ರಾಯ್, ರಿಂಕು ಸಿಂಗ್, ಶಕೀಬ್ ಅಲ್ ಹಸನ್, ಮನ್ದೀಪ್ ಸಿಂಗ್, ಲಿಟ್ಟನ್ ದಾಸ್, ಕುಲ್ವಂತ್ ಖೆಜ್ರೋಲಿಯಾ, ಡೇವಿಡ್ ವೀಝ, ಸುಯಶ್ ಶರ್ಮಾ, ವೈಭವ್ ಅರೋರಾ, ಎನ್. ಜಗದೀಸನ್, ಶ್ರೇಯಸ್ ಅಯ್ಯರ್ (ಗಾಯಾಳು).

source https://tv9kannada.com/photo-gallery/cricket-photos/ipl-2023-shreyas-iyer-to-undergo-surgery-likely-to-miss-ipl-2023-and-wtc-final-kannada-news-zp-au50-540720.html

Views: 0

Leave a Reply

Your email address will not be published. Required fields are marked *