ವರದಿ ಮತ್ತು ಫೋಟೋ ಕೃಪೆ ಸುರೇಶ್ ಪಟ್ಟಣ್, ಮೊ : 98862 95817

ಬಸವ ಜಯಂತಿ ಮತ್ತು ರೇಣುಕ ಜಯಂತಿಯನ್ನು ಒಂದೇ ದಿನ ಮಾಡುವಂತೆ ‘ಅಖಿಲ ಭಾರತ ವೀರಶೈವ ಲಿಂಗಾಯತ ಸಂಸ್ಥೆ’ಯ ರಾಜ್ಯಾಧ್ಯಕ್ಷ ಶ್ರಿ ಶಂಕರ ಬಿದರಿ ಅವರು ಆದೇಶ ಹೊರಡಿಸಿದ್ದನ್ನು ಗಮನಿಸಿದೆವು. ಬಸವ ಜಯಂತಿಯಂದು ರೇಣುಕ ಜಯಂತಿ ಮಾಡುವ ಉದ್ದೇಶವೇನು? ಬಸವಣ್ಣ ಲಿಂಗಾಯತ ಧರ್ಮದ ಗುರು ಎಂದು ರೇಣುಕ ಪರಂಪರೆಯವರು ಒಪ್ಪುವರೇ? ಬಸವಣ್ಣ ಐತಿಹಾಸಿಕ ವ್ಯಕ್ತಿ. ರೇಣುಕರು? ಬಸವಜಯಂತಿಯಂದು ಬಸವಣ್ಣನವರ ವಿಚಾರಗಳು ಜನಮನಕ್ಕೆ ಮುಟ್ಟಬೇಕೇ ಹೊರತು ರೇಣುಕ ಮತ್ತಿತರ ವಿಚಾರಗಳಲ್ಲ. ಬಸವಣ್ಣನವರ ತತ್ವಸಿದ್ಧಾಂತಗಳು ಸಮಾಜಮುಖಿ, ಜೀವಪರ. ಅಲ್ಲಿ ಸಮಾನತೆ ಇದೆ. ಸಕಲ ಜೀವಾತ್ಮರ ಒಳಿತಿದೆ. ಆತ್ಮಕಲ್ಯಾಣದ ಜೊತೆ ಲೋಕಕಲ್ಯಾಣವೂ ಇದೆ. ಇಂತಹ ಸಾಂಸ್ಕೃತಿಕ ನಾಯಕ, ವಿಶ್ವಗುರು, ಲಿಂಗಾಯತ ಧರ್ಮದ ಸಂಸ್ಥಾಪಕ ಬಸವಣ್ಣನವರ ಆಶಯಗಳಿಗೆ ಮೆರಗು ಬರಬೇಕಾದಲ್ಲಿ ಬಸವಜಯಂತಿಯಂದು ಬಸವಣ್ಣನವರ ಭಾವಚಿತ್ರದ ಮೆರವಣಿಗೆ, ಅವರ ಸಂದೇಶಗಳ ಚಿಂತನ ಮಂಥನ ನಾಡಿನಲ್ಲೆಲ್ಲ ಏಪ್ರಿಲ್ ೩೦ ರಂದು ನಡೆಯುವುದು ಸ್ವಾಗತಾರ್ಹ. ಅಂದು ಬೇರೆ ಯಾರ ಜಯಂತಿ ಖಂಡಿತ ಬೇಡ.
– ಶ್ರೀ ಪಂಡಿತಾರಾಧ್ಯ ಶಿವಾಚಾರ್ಯ ಸ್ವಾಮಿಗಳು
ನಮ್ಮ ಸಮಗ್ರ ಸುದ್ದಿಗಳಿಗಾಗಿ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು
WhatsApp Group:https://chat.whatsapp.com/KnDIfiBURQ9G5sLEJLqshk
Facebook page: https://www.facebook.com/samagrasudii
Sharechat: https://sharehat.com/profile/edu514826335?d=n
Twitter: https://twitter.com/SuddiSamagra
Threads: https://www.threads.net/@samagrasuddi.co.in
Instagram: https://www.instagram.com/samagrasuddi.co.in/
Telegram: https://t.me/+E1ubNzdguQ5jN2Y1