Side effects of sugar cane juice : ನಿಮಗೆ ಈ ಆರೋಗ್ಯ ಸಮಸ್ಯೆಗಳಿದ್ದರೆ ತಪ್ಪಿಯೂ ಸೇವಿಸಬಾರದು ಕಬ್ಬಿನ ಹಾಲು

Sugarcane Juice Side Effects : ಬೇಸಿಗೆ ಪ್ರಾರಂಭವಾದ ತಕ್ಷಣ, ಕಬ್ಬಿನ ರಸ ಅಥವಾ  ಕಬ್ಬಿನ ಹಾಲು ಮಾರುಕಟ್ಟೆಗೆ ಲಗ್ಗೆ ಇಡುತ್ತದೆ. ಇದು ಕುಡಿಯಲು ರುಚಿಕರವಾಗಿರುವುದು ಮಾತ್ರವಲ್ಲ, ಆರೋಗ್ಯಕ್ಕೂ ತುಂಬಾ ಪ್ರಯೋಜನಕಾರಿಯಾಗಿದೆ. ಕಾರ್ಬೋಹೈಡ್ರೇಟ್‌ಗಳು, ಕ್ಯಾಲ್ಸಿಯಂ, ಕಬ್ಬಿಣ, ಸತು, ಮೆಗ್ನೀಸಿಯಮ್ ಮತ್ತು ಪೊಟ್ಯಾಸಿಯಮ್‌ನಂತಹ ಅನೇಕ ಪೋಷಕಾಂಶಗಳನ್ನು ಇದು ಒಳಗೊಂಡಿದೆ. ಇದು ದೇಹವನ್ನು ತಂಪಾಗಿಸಿ ದೇಹದಲ್ಲಿ ನೀರಿನ ಅಂಶವನ್ನು ಕಾಪಾಡುತ್ತದೆ. ಈ ಮೂಲಕ ಅನೇಕ ರೋಗಗಳನ್ನು ಗುಣಪಡಿಸುತ್ತದೆ. ಇದು ಜೀರ್ಣಕ್ರಿಯೆ, ಮೂಳೆಗಳ ಆರೋಗ್ಯ ಮತ್ತು ಮೂತ್ರಪಿಂಡಗಳನ್ನು ಆರೋಗ್ಯಕರವಾಗಿಡಲು ಸಹಾಯ ಮಾಡುತ್ತದೆ. ಇಷ್ಟೆಲ್ಲಾ ಪ್ರಯೋಜನಗಳಿದ್ದರೂ ಪ್ರತಿಯೊಬ್ಬರೂ ಕಬ್ಬಿನ ಹಾಲನ್ನು ಸೇವಿಸುವಂತಿಲ್ಲ. ಕಬ್ಬಿನ ರಸ ಅಥವಾ ಕಬ್ಬಿನ ಹಾಲು ಕೆಲವರಿಗೆ ಹಾನಿಕಾರಕವಾಗಿದೆ.

ಅಧಿಕ ರಕ್ತದ ಸಕ್ಕರೆಯ ಸಂದರ್ಭದಲ್ಲಿ ಕಬ್ಬಿನ ರಸವನ್ನು ಕುಡಿಯಬಾರದು. :
ಮಧುಮೇಹ ಇದ್ದಾಗ ಕಬ್ಬಿನ ರಸವನ್ನು ಸೇವಿಸಬಾರದು. ಇದು ಕಡಿಮೆ ಗ್ಲೈಸೆಮಿಕ್ ಸೂಚ್ಯಂಕ ಮತ್ತು ಹೆಚ್ಚಿನ ಗ್ಲೈಸೆಮಿಕ್ ಲೋಡ್ ಅನ್ನು ಹೊಂದಿದೆ. ಈ ಕಾರಣದಿಂದಾಗಿ ಇದು ರಕ್ತದಲ್ಲಿನ ಸಕ್ಕರೆಯ ಮೇಲೆ ಪರಿಣಾಮ ಬೀರುತ್ತದೆ. ಕಬ್ಬಿನ ರಸವು ಹೆಚ್ಚಿನ ಪ್ರಮಾಣದ ಸಕ್ಕರೆಯನ್ನು ಹೊಂದಿರುತ್ತದೆ. 240 ಮಿಲಿ ಕಬ್ಬಿನ ರಸವು ಸುಮಾರು 50 ಗ್ರಾಂ ಸಕ್ಕರೆಯನ್ನು ಹೊಂದಿರುತ್ತದೆ. ಇದು 12 ಟೀ ಚಮಚಗಳಿಗೆ ಸಮಾನವಾಗಿರುತ್ತದೆ.ಇದನ್ನು ಸೇವಿಸುವುದರಿಂದ

 ದುರ್ಬಲ ಜೀರ್ಣಾಂಗ ವ್ಯವಸ್ಥೆಯನ್ನು ಹೊಂದಿರುವವರು : 
ದುರ್ಬಲ ಜೀರ್ಣಾಂಗ ವ್ಯವಸ್ಥೆ ಇರುವವರು ಕಬ್ಬಿನ ರಸವನ್ನು ಸೇವಿಸಬಾರದು.  ಇದರಲ್ಲಿರುವ ಪೋಲಿಕೋಸನಾಲ್ ಜೀರ್ಣಾಂಗ ವ್ಯವಸ್ಥೆಯ ಮೇಲೆ ಕೆಟ್ಟ ಪರಿಣಾಮ ಬೀರುತ್ತದೆ. ಇದರಿಂದ ಹೊಟ್ಟೆನೋವು, ವಾಂತಿ, ಭೇದಿ ಮುಂತಾದ ಹಲವು ಸಮಸ್ಯೆಗಳು ಎದುರಾಗುತ್ತವೆ. 

ಬೊಜ್ಜಿನ ಸಮಸ್ಯೆ : 
ಸ್ಥೂಲಕಾಯತೆಯಿಂದ ಬಳಲುತ್ತಿರುವವರು ಕಬ್ಬಿನ ರಸವನ್ನು ಸೇವಿಸದಿದ್ದರೆ ಒಳ್ಳೆಯದು. ಇದು ಹೆಚ್ಚಿನ ಕ್ಯಾಲೋರಿ ಅಂಶವನ್ನು ಹೊಂದಿದೆ. ಹಾಗಾಗಿ ಇದನ್ನು ಸೇವಿಸುವುದರಿಂದ ನಿಮ್ಮ ತೂಕ ಹೆಚ್ಚಾಗಬಹುದು. ಅಲ್ಲದೆ, ಇದು ಹೆಚ್ಚಿನ ಪ್ರಮಾಣದ ಸಕ್ಕರೆಯನ್ನು ಹೊಂದಿರುವುದರಿಂದ ದೇಹದ ಕೊಬ್ಬನ್ನು ಹೆಚ್ಚಿಸುತ್ತದೆ.  ತೂಕವನ್ನು ಕಳೆದುಕೊಳ್ಳಲು ಪ್ರಯತ್ನಿಸುತ್ತಿದ್ದರೆ ತಪ್ಪಿಯೂ ಕಬ್ಬಿಣ ಹಾಲನ್ನು ಸೇವಿಸಬಾರದು. 

ರಕ್ತದಲ್ಲಿನ ಸಕ್ಕರೆಯನ್ನು ತ್ವರಿತವಾಗಿ ಹೆಚ್ಚಿಸಬಹುದು. 

ಶೀತ ಮತ್ತು ಕೆಮ್ಮು ಇದ್ದಾಗ : 
ನೆಗಡಿ ಇದ್ದರೂ ಕಬ್ಬಿನ ರಸವನ್ನು ಕುಡಿಯಬಾರದು. ಇದರ ಸೇವನೆಯಿಂದ ನೆಗಡಿ ಮತ್ತು ಕೆಮ್ಮಿನ ಸಮಸ್ಯೆ ಹೆಚ್ಚಾಗಬಹುದು. ಇದರ ಸೇವನೆಯಿಂದ ಗಂಟಲು ನೋವು ಮತ್ತು ತಲೆನೋವು ಕೂಡಾ ಉಂಟಾಗುತ್ತದೆ.

ನಿದ್ರಾಹೀನತೆಯ ಸಮಸ್ಯೆ : 
ನೀವು ನಿದ್ರಾಹೀನತೆಯ ಸಮಸ್ಯೆಯಿಂದ ಬಳಲುತ್ತಿದ್ದರೆ, ಕಬ್ಬಿನ ರಸವನ್ನು ಕುಡಿಯಬಾರದು. ಅದರಲ್ಲಿರುವ ಪೋಲಿಕೋಸನಾಲ್ ನಿದ್ರೆಯ ಮೇಲೆ ನಕಾರಾತ್ಮಕ ಪರಿಣಾಮ ಬೀರುತ್ತದೆ. ಈ ಕಾರಣದಿಂದಾಗಿ ನೀವು ನಿದ್ರಾಹೀನತೆ ಮತ್ತು ಒತ್ತಡದ ಸಮಸ್ಯೆಗಳನ್ನು ಎದುರಿಸಬೇಕಾಗಬಹುದು. 

ನಮ್ಮ ಸಮಗ್ರ ಸುದ್ದಿಗಳಿಗಾಗಿ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು 

WhatsApp Group: https://chat.whatsapp.com/KnDIfiBURQ9G5sLEJLqshk

Facebook page: https://www.facebook.com/samagrasudii

Sharechat: https://sharehat.com/profile/edu514826335?d=n

Twitter: https://twitter.com/SuddiSamagra

Threads: https://www.threads.net/@samagrasuddi.co.in

Instagram: https://www.instagram.com/samagrasuddi.co.in/

Telegram: https://t.me/+E1ubNzdguQ5jN2Y1

Leave a Reply

Your email address will not be published. Required fields are marked *