ಚಿತ್ರದುರ್ಗ ಸೆ. 25 : ಸಿದ್ದರಾಮಯ್ಯರವರನ್ನು ಆಧಿಕಾರದಿಂದ ಕೆಳಗಿಳಿಸಲು ಬಿಜೆಪಿ ಪಕ್ಷ ಮುಂದಾಗಿದೆ ಈ ಹಿನ್ನೆಲಯಲ್ಲಿ ಮುಡಾ ಪ್ರಕರಣ ಒಂದು ನೆಪ ಅಷ್ಟೇ. ಬಡವರು ಮತ್ತು ಶೋಷಿತರ ಪರವಾಗಿರುವ ಕಾಂಗ್ರೆಸ್ ಸರ್ಕಾರದ ಯೋಜನೆಗಳನ್ನು ನಿಲ್ಲಿಸಬೇಕೆಂಬುದೇ ಬಿಜೆಪಿ ಮತ್ತು ಜೆಡಿಎಸ್ ಪಕ್ಷಗಳ ಮುಖ್ಯ ಉದ್ದೇಶ. ಆದರೆ ಇವರ ಆಟ ನಡೆಯುವುದಿಲ್ಲ ಎಂದು ನಗರಾಭೀವೃದ್ದಿ ಪ್ರಾಧಿಕಾರದ ಮಾಜಿ ಅಧ್ಯಕ್ಷ ಆರ್.ಕೆ.ಸರ್ದಾರ್ ಬಿಜೆಪಿ ಪಕ್ಷದ ವಿರುದ್ದ ವಾಗ್ದಾಳಿಯನ್ನು ನಡೆಸಿದರು.
ಚಿತ್ರದುರ್ಗ ನಗರದ ಅಂಬೇಡ್ಕರ್ ವೃತ್ತದಲ್ಲಿ ಬುಧವಾರ ಅಹಿಂದ ಒಕ್ಕೂಟದವತಿಯಿಂದ ಸಿದ್ದರಾಮಯ್ಯ ರವರ ಪರವಾಗಿ ಅವರಿಗೆ
ನೈತಿಕವಾಗಿ ಬೆಂಬಲವನ್ನು ನೀಡುವ ಸಲುವಾಗಿ ಇಂದು ಧರಣಿಯನ್ನು ನಡೆಸಿದ ಅಭೀಮಾನಿ, ಹಿತೈಷಿಗಳು, ಅದರಲ್ಲಿ ಭಾಗವಹಿಸಿ
ಮಾತನಾಡಿದ ಅವರು, ಸಿದ್ಧರಾಮಯ್ಯ ಎಂದರೆ ಒಬ್ಬ ವ್ಯಕ್ತಿ ಅಲ್ಲ, ಒಂದು ಸಿದ್ಧಾಂತ. ಆ ಸಿದ್ಧಾಂತ ಬಿಜೆಪಿ ಪಕ್ಷದ ವಿರೋಧಿ ಸಿದ್ಧಾಂತ.
ಹಾಗಾಗಿ ಆ ಸಿದ್ಧಾಂತವನ್ನು ಸೋಲಿಸಬೇಕು ಎಂಬುದು ಬಿಜೆಪಿ ಪಕ್ಷದ ಗುರಿಯಾಗಿದೆ. ಇನ್ನು ಮುಡಾ ಪ್ರಕರಣದಲ್ಲಿ ಸಿದ್ಧರಾಮಯ್ಯ
ಪಾತ್ರವೇನೂ ಇಲ್ಲ ಎಂಬುದು ಸ್ವತಃ ಬಿಜೆಪಿ ನಾಯಕರಿಗೇ ಗೊತ್ತಿದೆ. ಆದರೆ ಅವರು ಶಿಕಾರಿ ಮಾಡಲು ಹೊರಟಿರುವುದು ಸಿದ್ಧರಾಮಯ್ಯ
ಅವರು ಪ್ರತಿಪಾದಿಸುವ, ಪ್ರತಿನಿಧಿಸುವ ಸಿದ್ಧಾಂತವನ್ನು ಎಂದರು.
ಬಿಜೆಪಿಯವರಿಗೆ ಯಾರು ಮುಖ್ಯಮಂತ್ರಿಯಾದರೂ ಬೇಸರವಿಲ್ಲ, ಆದರೆ ಸಿದ್ಧರಾಮಯ್ಯ ಮುಖ್ಯಮಂತ್ರಿಯಾಗಿ ರಬಾರದು. ಯಾಕೆಂದರೆ
ಮುಖ್ಯವಾಗಿ ಸಿದ್ದರಾಮಯ್ಯ ಭ್ರಷ್ಟಾಚಾರಿಯಲ್ಲ, ಅವರಿಗೆ ಭ್ರಷ್ಟಾಚಾರದ ಪಟ್ಟ ಕಟ್ಟಿ ಮೂಲೆಗೆ ತಳ್ಳಿದರೆ ಬಿಜೆಪಿಯವರಿಗೆ ಮುಂದಿನ
ಹಂತದ ತಂತ್ರ ಕುತಂತ್ರಗಳು ಸಲೀಸಾಗುತ್ತವೆ. ಸಿದ್ಧರಾಮಯ್ಯ ಕ್ರಿಯಾಶೀಲರಾಗಿ ಇರುವವರೆಗೆ ಕರ್ನಾಟಕದಲ್ಲಿ ಬಿಜೆಪಿಯ ಆಟಗಳು
ನಡೆಯೋದಿಲ್ಲ. ಮುಂದಿನ ವಿಧಾನಸಭೆ ಚುನಾವಣೆಯಲ್ಲೂ ಬಿಜೆಪಿ ಸ್ವಂತ ಶಕ್ತಿಯಿಂದ ಅಧಿಕಾರಕ್ಕೆ ಬರುವುದು ಸಾಧ್ಯವಿಲ್ಲ ಎಂದು
ಅರಿತಿರುವ ಬಿಜೆಪಿ ಅವರನ್ನು ವ್ಯವಸ್ಥಿತವಾಗಿ ಮುಗಿಸಲು ಹೋರಟಿದೆ ಆದರೆ ಇದು ಯಾವ ಆಟವೂ ನಡೆಯುವುದಿಲ್ಲ ಎಂದಿದ್ದಾರೆ.
ಅಹಿಂದ ಒಕ್ಕೂಟದ ಅಧ್ಯಕ್ಷರಾದ ಸಿ.ಟಿ.ಕೃಷ್ಣಮೂರ್ತಿ ಮಾತನಾಡಿ, ಘನ ಉಚ್ಛ ನ್ಯಾಯಾಲಯ ನೀಡಿರುವ ತೀರ್ಪು ರಾಜ್ಯಪಾಲರು
ಪ್ರಾಸಿಕ್ಯೂಶನ್‍ಗೆ ಅನುಮತಿ ನೀಡಬಹುದು ಎಂಬುದನ್ನು ಹೇಳಿದೆ ಅಷ್ಟೇ, ವಿನಃ ಮೂಡಾ ವಿಷಯದಲ್ಲಿ ಮುಖ್ಯಮಂತ್ರಿಗಳಾದ
ಸಿದ್ದರಾಮಯ್ಯ ಅವರ ಪಾತ್ರದ ಬಗ್ಗೆ ನೀಡಿದ ತೀರ್ಪಲ್ಲ! ಇದನ್ನು ನಾಡಿನ ಜನರು ಅರ್ಥ ಮಾಡಿಕೊಂಡಿದ್ದಾರೆ.ಈ ರಾಜಕೀಯ
ಹೋರಾಟದಲ್ಲಿ ರಾಜ್ಯದ ಜನ ನಮ್ಮ ಸಿದ್ದರಾಮಯ್ಯ ನವರ ಹಿಂದೆ ಇದ್ದಾರೆ. ಏಳು ಕೋಟಿ ಜನರ ಆಶೀರ್ವಾದವೇ ಸಿದ್ದರಾಮಯ್ಯ ನವರಿಗೆ
ಶ್ರೀರಕ್ಷೆ. ಕಾನೂನು ಮತ್ತು ಸಂವಿಧಾನದಲ್ಲಿ ಕಾಂಗ್ರೆಸ್ ಪಕ್ಷಕ್ಕೆ ನಂಬಿಕೆ ಇದೆ. ಈ ಹೋರಾಟದಲ್ಲಿ ಅಂತಿಮವಾಗಿ ಸತ್ಯಕ್ಕೆ ಜಯ ಸಿಗಲಿದೆ.
ಇದು ನರೇಂದ್ರ ಮೋದಿ ಅವರ ನೇತೃತ್ವದ ಬಿಜೆಪಿ ಸರ್ಕಾರದ ಸೇಡಿನ ರಾಜಕೀಯದ ವಿರುದ್ಧದ ಹೋರಾಟ. ಬಿಜೆಪಿ, ಜೆಡಿಎಸ್‍ನ ಈ
ಸೇಡಿನ ರಾಜಕೀಯದ ವಿರುದ್ಧ ನಮ್ಮ ನ್ಯಾಯಾಂಗದ ಹೋರಾಟ ಮುಂದುವರಿಯಲಿದೆ ಎಂದರು.
ಅಹಿಂದ ಮುಖಂಡ ಬಿ.ಟಿ.ಜಗದೀಶ್ ಮಾತನಾಡಿ, ನಮ್ಮ ಪಕ್ಷದ ಎಲ್ಲ ಶಾಸಕರು, ನಾಯಕರು ಮತ್ತು ಕಾರ್ಯಕರ್ತರು ಹಾಗೂ ಕಾಂಗ್ರೆಸ್
ಹೈಕಮಾಂಡ್ ಸಿದ್ದರಾಮಯ್ಯನವರ ಪರವಾಗಿ ಭದ್ರವಾಗಿ ನಿಂತಿದ್ದು, ಕಾನೂನಿನ ಹೋರಾಟ ಮುಂದುವರಿಸುವಂತೆ ಉತ್ತೇಜನ
ನೀಡಿದ್ದಾರೆ.ಸಿದ್ದರಾಮಯ್ಯನವರು ಬಡವರ ಪರವಾಗಿದ್ದಾರೆ ಮತ್ತು ಸಾಮಾಜಿಕ ನ್ಯಾಯಕ್ಕಾಗಿ ಹೋರಾಟ ನಡೆಸುತ್ತಿದ್ದಾರೆ. ಎನ್ನುವ
ಕಾರಣಕ್ಕಾಗಿ ಸಿದ್ದರಾಮಯ್ಯ ನವರ ವಿರುದ್ದ ಬಿಜೆಪಿ, ಜೆಡಿಎಸ್ ರಾಜಕೀಯ ಪ್ರತಿಕಾರಕ್ಕೆ ಇಳಿದಿದೆ. ಮುಡಾ ಪ್ರಕರಣ ಒಂದು ನೆಪ ಅಷ್ಟೇ.
ಬಡವರು ಮತ್ತು ಶೋಷಿತರ ಪರವಾಗಿರುವ ನಮ್ಮ ಸರ್ಕಾರದ ಯೋಜನೆಗಳನ್ನು ನಿಲ್ಲಿಸಬೇಕೆಂಬುದೇ ಬಿಜೆಪಿ ಮತ್ತು ಜೆಡಿಎಸ್ ಪಕ್ಷಗಳ
ಮುಖ್ಯ ಉದ್ದೇಶ.
ಸಿದ್ದರಾಮಯ್ಯನವರ ರಾಜೀನಾಮೆ ಕೇಳುತ್ತಿರುವ ಇದೇ ನಾಯಕರು ನಾನು ರಾಜ್ಯದ ಬಡವರು, ಶೋಷಿತರ ಪರವಾಗಿ ಜಾರಿಗೆ ತಂದಿದ್ದ
ಯೋಜನೆಗಳನ್ನು ವಿರೋಧಿಸಿದವರೇ ಆಗಿದ್ದಾರೆ. ರಾಜಭವನವನ್ನು ದುರ್ಬಳಕೆ ಮಾಡಿಕೊಂಡು ಸಿದ್ದರಾಮಯ್ಯನವರ ವಿರುದ್ಧ ಸುಳ್ಳು
ಆರೋಪಗಳನ್ನು ಮಾಡುವ ಮೂಲಕ ನಮ್ಮ ಸರ್ಕಾರವನ್ನು ಅಸ್ಥಿರಗೊಳಿಸುವ ಹುನ್ನಾರ ನಡೆಸಿದ್ದಾರೆ. ರಾಜಭವನದ ದುರ್ಬಳಕೆ ಮೂಲಕ
ವಿರೋಧ ಪಕ್ಷಗಳ ಸರ್ಕಾರವನ್ನು ಹಣಿಯುವ ಸಂಚನ್ನು ನರೇಂದ್ರ ಮೋದಿ ನೇತೃತ್ವದ ಕೇಂದ್ರ ಸರ್ಕಾರ ದೇಶಾದ್ಯಂತ ನಡೆಸುತ್ತಿದೆ.
ಸಿದ್ದರಾಮಯ್ಯನವರ ಪ್ರಕರಣದಲ್ಲಿಯೂ ಬಿಜೆಪಿ ಮತ್ತು ಜೆಡಿಎಸ್ ಇದೇ ರೀತಿ ಮುಖಭಂಗ ಅನುಭವಿಸುವುದು ಖಂಡಿತ.ನಮಗೆ ದೇಶದ
ಸುಪ್ರೀಂ ಕೋರ್ಟ್‍ನಲ್ಲಿ ನ್ಯಾಯ ಸಿಗಲಿದೆ. ನ್ಯಾಯ ಸತ್ಯದ ಮೇಲೆ ನಮಗೆ ನಂಬಿಕೆ ಇದೆ ಎಂದರು.
ಈ ಧರಣಿಯಲ್ಲಿ ನಗರಸಭೆಯ ಕರ್ನಾಟಕ ಶೋಷಿತ ಸಮುದಾಯಗಳ ಮಹಾ ಒಕ್ಕೂಟದ ಜಿಲ್ಲಾ ಪ್ರಧಾನ ಕಾರ್ಯದರ್ಶಿ ಹೆಚ್.ಮಂಜಪ್ಪ,
ಜಿಲ್ಲಾ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಡಿ.ಎನ್.ಮೈಲಾರಪ್ಪ, ಉಪಾಧ್ಯಕ್ಷ ಎಸ್.ಎನ್.ರವಿಕುಮಾರ್, ಪರಿಶಿಷ್ಟ ವರ್ಗ ವಿಭಾಗದ ಅಧ್ಯಕ್ಷ
ಮಂಜುನಾಥ್, ಎಸ್ಸಿ. ವಿಭಾಗದ ಉಪಾಧ್ಯಕ್ಷ ಡಿ.ಕುಮಾರ್ ಪಿಳ್ಳೆಕೆರನಹಳ್ಳಿ, ಮಹಿಳಾ ಕಾಂಗ್ರೆಸ್ ಅಧ್ಯಕ್ಷೆ ಶ್ರೀಮತಿ ಗೀತನಂದಿನಿಗೌಡ,
ಮೃತ್ಯುಂಜಯ, ಮಾಳೇಶ್, ನಿವೃತ್ತ ಡಿವೈಎಸ್ಪಿ. ಅಬ್ದುಲ್‍ರೆಹಮಾನ್, ಸೈಯದ್‍ಖುದ್ದೂಸ್, ಮುದಸಿರ್ ನವಾಜ್, ಪ್ರಕಾಶ್‍ರಾಮನಾಯ್ಕ,
ಅಶೋಕ್‍ನಾಯ್ಡು, ಸುರೇಶ್‍ಬಾಬು, ರಘು, ವಸೀಂ ಬಡಾಮಕಾನ್, ಮೆಹಬೂಬ್‍ಖಾನ್, ನಗರ ಕಾಂಗ್ರೆಸ್ ಉಪಾಧ್ಯಕ್ಷ ಲೋಕೇಶ್ ಇನ್ನು
ಅನೇಕರು ಧರಣಿಯಲ್ಲಿ ಪಾಲ್ಗೊಂಡಿದ್ದರು.