
ಚಿತ್ರದುರ್ಗ, (ಮಾ.26) : ರಾಜ್ಯ ಸರ್ಕಾರಿ ನೌಕರರ ಸಂಘದ ರಾಜ್ಯಾಧ್ಯಕ್ಷ ಸಿ.ಎಸ್. ಷಡಾಕ್ಷರಿರವರ ನಿರ್ದೇಶನದಂತೆ, ತೆರವಾಗಿರುವ ಚಿತ್ರದುರ್ಗ ಜಿಲ್ಲಾ ಶಾಖೆಯ ಜಿಲ್ಲಾಧ್ಯಕ್ಷರ ಹುದ್ದೆಗೆ ಶಿಕ್ಷಣ ಇಲಾಖೆಯ ಕೆ.ಟಿ. ತಿಮ್ಮಾರೆಡ್ಡಿರವರನ್ನು ಸರ್ವಾನುಮತದಿಂದ ಅವಿರೋಧವಾಗಿ ಆಯ್ಕೆ ಮಾಡಲಾಗಿದೆ.
ರಾಜ್ಯ ಸರ್ಕಾರಿ ನೌಕರರ ಸಂಘದ ನೂತನ ಜಿಲ್ಲಾಧ್ಯಕ್ಷರಾಗಿ ಕೆ.ಟಿ. ತಿಮ್ಮಾರೆಡ್ಡಿ ಹಾಗೂ ಜಿಲ್ಲಾ ಕಾರ್ಯದರ್ಶಿಯಾಗಿ ಭೂಮಾಪನ ಇಲಾಖೆಯ ಎಸ್.ಕೆ. ಮಂಜುನಾಥ್ ಅವರನ್ನು ನೇಮಕ ಮಾಡಲಾಗಿದೆ ಮತ್ತು ಅವರಿಗೆ ರಾಜ್ಯ ಸಂಘದ ವತಿಯಿಂದ ಅಭಿನಂದನೆಗಳನ್ನು ಸಲ್ಲಿಸಲಾಗಿದೆ ಎಂದು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
The post ರಾಜ್ಯ ಸರ್ಕಾರಿ ನೌಕರರ ಸಂಘದ ಚಿತ್ರದುರ್ಗ ಜಿಲ್ಲಾಧ್ಯಕ್ಷರಾಗಿ ಕೆ.ಟಿ. ತಿಮ್ಮಾರೆಡ್ಡಿ ಕಾರ್ಯದರ್ಶಿಯಾಗಿ ಎಸ್.ಕೆ. ಮಂಜುನಾಥ್ ಅವಿರೋಧ ಆಯ್ಕೆ first appeared on Kannada News | suddione.
from ಚಿತ್ರದುರ್ಗ – Kannada News | suddione https://ift.tt/GjrST64
via IFTTT
Views: 0
