ಚಿತ್ರದುರ್ಗ ಸೆ. 23
ವರದಿ ಮತ್ತು ಪೋಟೋ ಸುರೇಶ್ ಪಟ್ಟಣ್
ರಾಷ್ಟ್ರೀಯ ಈಡಿಗ ಮಹಾಮಂಡಳಿ ಕರ್ನಾಟಕ, ಚಿತ್ರದುರ್ಗ ಜಿಲ್ಲಾ ರಾಷ್ಟ್ರೀಯ ಈಡಿಗ, ನಾಮಧಾರಿ, ಬಿಲ್ಲವ, ದಿವರು ಮಹಾಮಂಡಳಿವತಿಯಿಂದ ಸೆ. 27ರ ಶನಿವಾರ ಹಿರಿಯೂರು ತಾಲ್ಲೂಕಿನ ಪಿಲಾಜನಹಳ್ಳಿ ಗ್ರಾಮದಲ್ಲಿ ಸಮುದಾಯದ ಸಾಮಾಜಿಕ, ಆರ್ಥಿಕ, ಶೈಕ್ಷಣಿಕ, ರಾಜಕೀಯ ಸ್ಥಾನಮಾನದ ಬಗ್ಗೆ ಸಮಗ್ರ ಚಿಂತನ ಚರ್ಚೆ ನಿರ್ಣಯಗಳ ಸಭೆ ನಡೆಯಲಿದೆ ಎಂದು ರಾಷ್ಟ್ರೀಯ ಈಡಿಗ ಮಹಾ ಮಂಡಳದ ರಾಜ್ಯಾಧ್ಯಕ್ಷರಾದ ಸಿ.ತಿಪ್ಪೇಸ್ವಾಮಿ ತಿಳಿಸಿದ್ದಾರೆ.

ಸೆ. 27ರ ಶನಿವಾರ ಬೆಳಿಗ್ಗೆ 10.30ರಿಂದ ಸಂಜೆ 5ವರೆಗೆ ನಡೆಯುವ ಈ ಸಭೆಯ ಸಾನಿಧ್ಯವನ್ನು ಬ್ರಹ್ಮ ಶ್ರೀ ನಾರಾಯಣಗುರುಪೀಠದ ಪೀಠಾಧಿಪತಿಗಳಾದ ಶ್ರೀ ಪ್ರಣವಾನಂದ ಸ್ವಾಮಿಜಿಯವರು ವಹಿಸಲಿದ್ದಾರೆ. ಇವರೊಂದಿಗೆ ಬಿ.ಕೆ.ಹರಿಪ್ರಸಾದ್, ಲೋಕಸಭಾ ಸದಸ್ಯರಾದ ಕೋಟ ಶ್ರೀನಿವಾಸ್ ಪೂಜಾರಿ, ವಿಧಾನ ಪರಿಷತ್ ಸದಸ್ಯರಾದ ಮಂಚೇಗೌಡ್ರು. ರಾಷ್ಟ್ರೀಯ ಈಡಿಗ ಮಹಾಮಂಡಳಿ ರಾಷ್ಟ್ರೀಯ ಕಾರ್ಯದರ್ಶಿ. ಶಿವಕುಮಾರ್. ರಾಷ್ಟ್ರೀಯ ಈಡಿಗ ಮಹಾಮಂಡಳಿ ರಾಜ್ಯ ಉಪಾಧ್ಯಕ್ಷರು. ನಾಗರಾಜ್ ನಾಯಕ್ ಸೇರಿದಂತೆ ರಾಜ್ಯದ ವಿವಿಧ ಜಿಲ್ಲೆಗಳಿಂದ ಈಡಿಗ ಸಮುದಾಯದವರು ಭಾಗವಹಿಸಲಿದ್ದಾರೆ.