ಅನಾರೋಗ್ಯದಿಂದ ಆಸ್ಪತ್ರೆಗೆ ದಾಖಲಾದ ಸೋನಿಯಾ ಗಾಂಧಿ

ನವದೆಹಲಿ: ಎಐಸಿಸಿ ಮಾಜಿ ಅಧ್ಯಕ್ಷೆ ಸೋನಿಯಾ ಗಾಂಧಿ ಅವರು ಅನಾರೋಗ್ಯದಿಂದ ಆಸ್ಪತ್ರ್ಗೆ ದಾಖಲಾಗಿದ್ದಾರೆ. ವಯೋಸಹಜ ಕಾಯಿಲೆಯಿಂದ ಆಸ್ಪತ್ರೆಗೆ ದಾಖಲಾಗಿದ್ದು, ಚಿಕಿತ್ಸೆ ಪಡೆಯುತ್ತಿದ್ದಾರೆ. ಪ್ರಿಯಾಂಕ ಗಾಂಧಿ ಅವರೇ ತಾಯಿಯನ್ನು ಕರೆದುಕೊಂಡು, ಗಂಗಾ ರಾಮ್ ಆಸ್ಪತ್ರೆಗೆ ದಾಖಲಿಸಿದ್ದಾರೆ.

ರೆಗ್ಯೂಲರ್ ಚೆಕಪ್ ಗಾಗಿ ದಾಖಲಾಗಿದ್ದಾರೆ ಎಂದು ವೈದ್ಯರು ತಿಳಿಸಿದ್ದಾರೆ. ಈ ಸಂಬಂಧ ಸಿದ್ದರಾಮಯ್ಯ ಕೂಡ ಟ್ವೀಟ್ ಮಾಡಿದ್ದು, ಶೀಘ್ರ ಗುಣಮುಖರಾಗಲಿ ಎಂದು ಹಾರೈಸಿದ್ದಾರೆ. ರಾಹುಲ್ ಗಾಂಧಿ ನಿನ್ನೆಯಷ್ಟೇ ತಮ್ಮ ಭಾರತ್ ಜೋಡೋ ಯಾತ್ರೆಯನ್ನು ಪುನಃ ಆರಂಭಿಸಿದ್ದರು. ಇಂದು ತಾಯಿಯವರಿಗೆ ಅನಾರೋಗ್ಯ ಕಾಣಿಸಿಕೊಂಡಿದೆ.

The post ಅನಾರೋಗ್ಯದಿಂದ ಆಸ್ಪತ್ರೆಗೆ ದಾಖಲಾದ ಸೋನಿಯಾ ಗಾಂಧಿ first appeared on Kannada News | suddione.

from ರಾಷ್ಟ್ರೀಯ ಸುದ್ದಿ – Kannada News | suddione https://ift.tt/BLugd3G
via IFTTT

Leave a Reply

Your email address will not be published. Required fields are marked *