ವರದಿ ಮತ್ತು ಫೋಟೋ ಕೃಪೆ ಸುರೇಶ್ ಪಟ್ಟಣ್, ಮೊ : 98862 95817
ಚಿತ್ರದುರ್ಗ: ಅಕ್ಟೋಬರ್ 23ರಂದು ನಡೆಯಲಿರುವ ಆಗ್ನೇಯ ಪದವೀಧರರ ಕ್ಷೇತ್ರದ ಉಪಚುನಾವಣೆಯ ಹಿನ್ನೆಲೆಯಲ್ಲಿ, ಎನ್‌ಡಿಎ ಮೈತ್ರಿಕೂಟದ ಅಭ್ಯರ್ಥಿ ಕೆ.ಎಂ. ಸುರೇಶ್ ಅವರ ಪರವಾಗಿ ಮಾಜಿ ಸಚಿವ ಸುರೇಶ್ ಕುಮಾರ್ ಅವರು ಚಿತ್ರದುರ್ಗದ ಜಿಲ್ಲಾ ನ್ಯಾಯಾಲಯದ ಆವರಣದಲ್ಲಿರುವ ವಕೀಲರ ಸಂಘದ ಭವನದಲ್ಲಿ ಶುಕ್ರವಾರ ಭರ್ಜರಿ ಮತಯಾಚನೆ ನಡೆಸಿದರು.
ಪ್ರಚಾರ ಸಭೆಯಲ್ಲಿ ಮಾತನಾಡಿದ ಅವರು, ಪದವೀಧರರ ಹಿತರಕ್ಷಣೆ ಮತ್ತು ಕ್ಷೇತ್ರದ ಸರ್ವಾಂಗೀಣ ಅಭಿವೃದ್ಧಿಗಾಗಿ ಎನ್‌ಡಿಎ ಅಭ್ಯರ್ಥಿಯನ್ನು ಬೆಂಬಲಿಸುವಂತೆ ವಕೀಲರು ಹಾಗೂ ಪದವೀಧರರಲ್ಲಿ ಮನವಿ ಮಾಡಿದರು.
ಈ ಸಂದರ್ಭದಲ್ಲಿ ಬಿಜೆಪಿ ಜಿಲ್ಲಾಧ್ಯಕ್ಷ ಕೆ.ಟಿ. ಕುಮಾರಸ್ವಾಮಿ, ಮಾಜಿ ಎಂಎಲ್‌ಸಿ ಡಾ. ಶಿವಯೋಗಿ ಸ್ವಾಮಿ, ರಾಜ್ಯ ವಕೀಲರ ಪ್ರಕೋಷ್ಟದ ಸಂಚಾಲಕ ವಸಂತಕುಮಾರ್, ರಾಜ್ಯ ರೈತ ಮೋರ್ಚಾ ಕಾರ್ಯದರ್ಶಿ ಮಲ್ಲಿಕಾರ್ಜನ್, ಕಾರ್ಯದರ್ಶಿ ರಜನಿ, ವಕೀಲರ ಸಂಘದ ಅಧ್ಯಕ್ಷ ಮಹೇಶ್ವರಪ್ಪ, ಉಪಾಧ್ಯಕ್ಷೆ ಸಾವಿತ್ರಿ, ಕಾರ್ಯದರ್ಶಿ ಜಗದೀಶ್, ಜೆಡಿಎಸ್ ಮುಖಂಡರಾದ ಪ್ರತಾಪ್ ಜೋಗಿ, ಅಶೋಕ ಬೆಳಗಟ್ಟ ಸೇರಿದಂತೆ ಹಲವಾರು ಪ್ರಮುಖರು ಉಪಸ್ಥಿತರಿದ್ದರು.
ನಮ್ಮ ಸಮಗ್ರ ಸುದ್ದಿಗಳಿಗಾಗಿ ಕೆಳಗಿನ Social Media ಪುಟಗಳಿಗೆ Follow / Subscribe ಮಾಡಿ.
🟢 WhatsApp Group
Join WhatsApp Group
🔵 Facebook Page
Follow Facebook Page
⚫ Twitter / X
Follow on X (Twitter)
🟣 Threads
Follow on Threads
Follow on Instagram
🔵 Telegram
Join Telegram Channel
🟢 WhatsApp Channel
Follow WhatsApp Channel
📰 ಸಮಗ್ರ ಸುದ್ದಿ
ನಿಖರತೆಗೆ ಮತ್ತೊಂದು ಹೆಸರು
📢 ಸುದ್ದಿ • ಮಾಹಿತಿ • ಶಿಕ್ಷಣ • ಉದ್ಯೋಗ • ಕರ್ನಾಟಕ • ದೇಶ • ಜಗತ್ತು