ಗ್ರಾಮೀಣ ಶಿಕ್ಷಣಕ್ಕೆ ಕೀರ್ತಿ ತಂದ ಡಾ. ಬಿ.ಟಿ. ಲೋಲಾಕ್ಷಮ್ಮಗೆ ಸಾವಿತ್ರಿಬಾಯಿ ಫುಲೆ ದಕ್ಷಿಣ ಭಾರತದ ಅತ್ಯುತ್ತಮ ಶಿಕ್ಷಕಿ ಗೌರವ.
ವರದಿ ಮತ್ತು ಫೋಟೋ ಕೃಪೆ ಸುರೇಶ್ ಪಟ್ಟಣ್, ಮೊ : 98862 95817
ಚಿತದುರ್ಗ ಜ. 5
ಆಂಧ್ರಪ್ರದೇಶದ ಗುರು ಚೈತನ್ಯ ಉಪಾಧ್ಯಾಯರ ಸಂಘದ ವತಿಯಿಂದ ಇತ್ತೀಚಿಗೆ ವಿಜಯವಾಡದಲ್ಲಿ ನಡೆದ ಪ್ರಶಸ್ತಿ ಪ್ರದಾನ ಕಾರ್ಯಕ್ರಮದಲ್ಲಿ ಸಾವಿತ್ರಿಬಾಯಿ ಫುಲೆ ದಕ್ಷಿಣ ಭಾರತದ ಅತ್ಯುತ್ತಮ ಶಿಕ್ಷಕಿ ಪ್ರಶಸ್ತಿಯನ್ನು ಚಿತ್ರದುರ್ಗ ತಾಲ್ಲೂಕಿನ ಸರ್ಕಾರಿ ಹಿರಿಯ ಪ್ರಾಥಮಿಕ ಪಾಠಶಾಲೆ ದಂಡಿನಕುರುಬರಹಟ್ಟಿ ಗ್ರಾಮದ ಸರ್ಕಾರಿ ಹಿರಿಯ ಪ್ರಾಥಮಿಕ ಪಾಠಶಾಲೆಯ ಮುಖ್ಯ ಶಿಕ್ಷಕಿಡಾ.ಬಿ.ಟಿಲೋಲಾಕ್ಷಮ್ಮ ರವರಿಗೆ ಪ್ರಧಾನ ಮಾಡಲಾಯಿತು.
ಚಿತ್ರದುರ್ಗ ಜಿಲ್ಲೆ ಹಾಗೂ ರಾಜ್ಯಕ್ಕೆ ಕೀರ್ತಿ ತಂದಿದ್ದಾರೆ. ಡಾ ಬಿ.ಟಿ. ಲೋಲಾಕ್ಷಮ್ಮ ಅವರು ಚಿತ್ರದುರ್ಗ ತಾಲೂಕಿನ ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ಪ್ರಥಮ ಮಹಿಳಾ ಅಧ್ಯಕ್ಷರಾಗಿ ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಸಂಘದ ರಾಜ್ಯ ಪರಿಷತ್ ಸದಸ್ಯರಾಗಿ ಶಿಕ್ಷಕರ ಪರವಾಗಿ ಸದಾ ಧ್ವನಿ ಎತ್ತಿ ಎಲ್ಲಾ ಶಿಕ್ಷಕರ ಪರ ಸಂಘಟನೆಯಲ್ಲಿ ಮುಂಚೂಣಿಯಾಗಿ ಕಾರ್ಯನಿರ್ವಹಿಸಿ ಶಿಕ್ಷಕರ ಏಳಿಗೆಗಾಗಿ ಶ್ರಮಿಸಿದ್ದಾರೆ. ಸತತ 28 ವರ್ಷಗಳಿಂದ ಗ್ರಾಮೀಣ ಪ್ರದೇಶದ ಶಿಕ್ಷಕಿಯಾಗಿ ಮುಖ್ಯ ಶಿಕ್ಷಕಿಯಾಗಿ ರಾಜ್ಯಮಟ್ಟದ ಸಂಪನ್ಮೂಲ ವ್ಯಕ್ತಿಯಾಗಿ ಪಠ್ಯ ಪುಸ್ತಕಗಳ ಪರಿಷ್ಕರಣ ಸಮಿತಿಯಲ್ಲಿ ಸಕ್ರಿಯವಾಗಿ ತಮ್ಮನ್ನು ತಾವು ತೊಡಗಿಸಿಕೊಂಡಿದ್ದಾರೆ. ಇವರು ಕೇವಲ ಶಿಕ್ಷಕಿಯಷ್ಟೇ ಅಲ್ಲ ಸಾಹಿತಿಯಾಗಿ, ಗಾಂಧಿ ತತ್ವಗಳ ಚಿಂತಕರಾಗಿ ರಾಜ್ಯ ಮಟ್ಟದ ಕ್ರೀಡಾಪಟುವಾಗಿ ಜಾನಪದ ಕಲಾವಿದರಾಗಿ ರಾಜ್ಯಮಟ್ಟದ ವಿರಸ್ ಸ್ಪರ್ಧೆಯಲ್ಲಿ ಭಾಗವಹಿಸಿ ಬಹುಮಾನ ಪಡೆದಿದ್ದಾರೆ.
ತಮ್ಮ ಶಾಲೆಯನ್ನು ಮಾದರಿ ಶಾಲೆಯಾಗಿ ರೂಪಿಸುವಲ್ಲಿ ಮಹತ್ತರ ಪಾತ್ರವನ್ನು ವಹಿಸಿದ್ದಾರೆ ವಿದ್ಯಾರ್ಥಿಗಳ ಶೈಕ್ಷಣಿಕ ಅಭಿವೃದ್ಧಿಗಾಗಿ ವಿದ್ಯಾರ್ಥಿ ಕಲ್ಯಾಣ ನಿಧಿ ಸ್ಥಾಪಿಸಿ ವಿದ್ಯಾರ್ಥಿ ವೇತನವನ್ನು ಪ್ರತಿ ವರ್ಷ ನೀಡುತ್ತಿ ದ್ದಾರೆ ಹೆಣ್ಣು ಮಕ್ಕಳಿಗಾಗಿ ಓಬವ್ವ ಪಡೆ ಸ್ಥಾಪಿಸಿ ನೊಂದವರ ಧ್ವನಿಯಾಗಿ ಸಮಸ್ಯೆಯನ್ನು ಪರಿಹರಿಸುವಲ್ಲಿ ದಿಟ್ಟಪಾತ್ರವಹಿಸಿದ್ದಾರೆ. ಕಲಾವಿಭಾಗದ ವಿದ್ಯಾರ್ಥಿ ಯಾಗಿದ್ದರು ಕರ್ನಾಟಕ ರಾಜ್ಯ ವೈಜ್ಞಾನಿಕ ಸಂಶೋಧನಾ ಪರಿಷತ್ ಜಿಲ್ಲಾಧ್ಯಕ್ಷರಾಗಿ ವೈಜ್ಞಾನಿಕ ಮನೋ ಭಾವನೆ ಮೂಡಿಸುತ್ತಿದ್ದಾರೆ.
ಇವರು ರಾಜ್ಯಶಾಸ್ತ್ರದ ಪದವಿಯಲ್ಲಿ ಪಿಎಚ್‍ಡಿ ಪಡೆದು ಡಾಕ್ಟರೇಟ್ ಪಡೆದು ಶಿಕ್ಷಕರಿಗೆ ಮಾದರಿಯಾಗಿದ್ದಾರೆ ಹೀಗೆ ವಿವಿಧ ಕ್ಷೇತ್ರದಲ್ಲಿ ತಮ್ಮನ್ನು ತಾವು ತೊಡಗಿಸಿ ಕೊಂಡು ಆದರ್ಶ ಶಿಕ್ಷಕಿಯಾಗಿ ಸೇವೆ ಸಲ್ಲಿಸಿರುವ ಹಿನ್ನೆಲೆಯಲ್ಲಿ ಇವರ ಸಾಧನೆಯನ್ನ ಗುರುತಿಸಿದ ಆಂಧ್ರಪ್ರದೇಶದ ಗುರು ಚೈತನ್ಯ ಉಪಾಧ್ಯಾಯರ ಸಂಘ ಇವರಿಗೆ ಸಾವಿತ್ರಿಬಾಯಿ ಪುಲೆ ದಕ್ಷಿಣ ಭಾರತದ ಅತ್ಯುತ್ತಮ ಶಿಕ್ಷಕಿ ಪ್ರಶಸ್ತಿ ನೀಡಿ ಗೌರವಿಸಿದೆ.