ಚಿತ್ರದುರ್ಗ, ಜು. 13:
ವರದಿ ಮತ್ತು ಫೋಟೋ ಕೃಪೆ ವೇದಮೂರ್ತಿ ಭೀಮಸಮುದ್ರ ಮೊ : 8088076203
ಭೀಮಸಮುದ್ರ ಗ್ರಾಮ ಪಂಚಾಯಿತಿ ವತಿಯಿಂದ ಮತದಾರರ ಪಟ್ಟಿಯ ವಿಶೇಷ ಸಂಗ್ರಹ ಪರಿಷ್ಕರಣೆ ಕಾರ್ಯಕ್ರಮದ ಅಂಗವಾಗಿ ಗ್ರಾಮದಲ್ಲಿ ಮನೆ-ಮನೆ ಭೇಟಿ ನಡೆಸಿ ಮತದಾರರ ಮಾಹಿತಿಯನ್ನು ಪರಿಶೀಲಿಸಲಾಯಿತು.
ಈ ಸಂದರ್ಭದಲ್ಲಿ ಮಾಜಿ ಕೇಂದ್ರ ಸಚಿವ ಜಿ. ಎಂ. ಸಿದ್ದೇಶ್ವರ ಅವರ ನಿವಾಸಕ್ಕೂ ಭೇಟಿ ನೀಡಿ ಮತದಾರರ ಪಟ್ಟಿಯ ಪರಿಷ್ಕರಣೆ ಕಾರ್ಯ ಕೈಗೊಳ್ಳಲಾಯಿತು.
ಈ ವೇಳೆ ಮಾತನಾಡಿದ ಜಿ.ಎಂ. ಸಿದ್ದೇಶ್ವರ ಅವರು, ವಲಸಿಗರನ್ನು ಮತದಾರರ ಪಟ್ಟಿಯಿಂದ ಕೈಬಿಡುವಂತೆ ಹಾಗೂ ಗ್ರಾಮದಲ್ಲಿ ಮೃತಪಟ್ಟಿರುವವರು, ಮದುವೆಯಾಗಿ ಬೇರೆಡೆಗೆ ತೆರಳಿರುವ ಮಹಿಳೆಯರು ಮತ್ತು ಗ್ರಾಮದಿಂದ ಶಾಶ್ವತವಾಗಿ ಸ್ಥಳಾಂತರಗೊಂಡಿರುವ ಸಾರ್ವಜನಿಕರ ಮಾಹಿತಿಯನ್ನು ಸಮಗ್ರವಾಗಿ ಪರಿಶೀಲಿಸಿ ನಿಖರವಾದ ಮತದಾರರ ಪಟ್ಟಿಯನ್ನು ಸಿದ್ಧಪಡಿಸುವಂತೆ ಬಿ.ಎಲ್.ಒ.ಗಳಿಗೆ ಸೂಚಿಸಿದರು.
ಗ್ರಾಮ ಪಂಚಾಯಿತಿ ಪಿಡಿಒ ರೂಪಶ್ರೀ ಮಾತನಾಡಿ, ಭೀಮಸಮುದ್ರ ಗ್ರಾಮ ಪಂಚಾಯಿತಿಗೆ ವ್ಯಾಪ್ತಿಯ ಬೆಟ್ಟದ ನಾಗೇನಹಳ್ಳಿ, ವಿ. ಪಾಳ್ಯ, ನಲ್ಲಿಕಟ್ಟೆ, ಮಳಲಿ, ಭೀಮಸಮುದ್ರ ಹಾಗೂ ತುರೆಬೈಲು ಗ್ರಾಮಗಳಲ್ಲಿ ಬಿ.ಎಲ್.ಒ.ಗಳು ಮನೆ-ಮನೆಗೆ ಭೇಟಿ ನೀಡಲಿದ್ದು, ಸಾರ್ವಜನಿಕರು ಅಗತ್ಯ ದಾಖಲೆಗಳು ಹಾಗೂ ಸರಿಯಾದ ಮಾಹಿತಿಯನ್ನು ನೀಡಿ ಸಹಕರಿಸುವಂತೆ ಮನವಿ ಮಾಡಿದರು.
ಕಾರ್ಯಕ್ರಮದಲ್ಲಿ ಗಾಯತ್ರಿ ಸಿದ್ದೇಶ್ವರ, ಅಂಗನವಾಡಿ ಶಿಕ್ಷಕಿ ಆಶಾ, ಶಿಕ್ಷಕ ರಾಮು ಹಾಗೂ ಗ್ರಾಮ ಪಂಚಾಯಿತಿ ಸಿಬ್ಬಂದಿಗಳಾದ ಶ್ರೀನಿವಾಸ್, ಮಂಜುನಾಥ್, ರಮೇಶ್, ಸಂದೀಪ್ ಸೇರಿದಂತೆ ಹಲವರು ಉಪಸ್ಥಿತರಿದ್ದರು.
Follow the ಸಮಗ್ರ ಸುದ್ದಿ Telegram Channel: https://t.me/SamagraSuddi
ಸಮಗ್ರ ಸುದ್ದಿ channel on WhatsApp: https://whatsapp.com/channel/0029VbDbOsBD8SE2H0L3d40j