IPL 2025: ಟಾಸ್ ಸೋತು ಮೊದಲು ಬ್ಯಾಟಿಂಗ್ ಮಾಡಿದ ಡೆಲ್ಲಿ ಕ್ಯಾಪಿಟಲ್ಸ್ ಎಸ್‌ಆರ್‌ಹೆಚ್ ನಾಯಕ ಪ್ಯಾಟ್ ಕಮಿನ್ಸ್ ದಾಳಿ ಎದುರಿಸಲಾಗದೆ ಪರದಾಡಿತು.

ಐಪಿಎಲ್ 2025ನೇ (IPL 2025) ಸಾಲಿನ 55ನೇ ಪಂದ್ಯದಲ್ಲಿ ಡೆಲ್ಲಿ ಕ್ಯಾಪಿಟಲ್ಸ್ (DC) ಹಾಗೂ ಸನ್‌ರೈಸರ್ಸ್ ಹೈದರಾಬಾದ್ (SRH) ತಂಡಗಳು ಹೈದರಾಬಾದ್‌ನ ರಾಜೀವ್ ಗಾಂಧಿ ಅಂತಾರಾಷ್ಟ್ರೀಯ ಕ್ರೀಡಾಂಗಣದಲ್ಲಿ ಮುಖಾಮುಖಿಯಾಗಿದ್ದವು. ಈ ಪಂದ್ಯದಲ್ಲಿ ಟಾಸ್ ಸೋತು ಮೊದಲು ಬ್ಯಾಟಿಂಗ್ ಮಾಡಿದ ಡೆಲ್ಲಿ ಕ್ಯಾಪಿಟಲ್ಸ್ ಎಸ್‌ಆರ್‌ಹೆಚ್ ನಾಯಕ ಪ್ಯಾಟ್ ಕಮಿನ್ಸ್ (Pat Cummins) ದಾಳಿ ಎದುರಿಸಲಾಗದೆ ಪರದಾಡಿತು. ಅಂತಿಮವಾಗಿ ಡಿಸಿ ನಿಗದಿತ 20 ಓವರ್‌ಗಳಲ್ಲಿ 7 ವಿಕೆಟ್ ಕಳೆದುಕೊಂಡು 134 ರನ್ ಗಳಿಸಲಷ್ಟೇ ಶಕ್ತವಾಯಿತು.
ಪವರ್‌ಪ್ಲೇನಲ್ಲಿ ಪ್ರಮುಖ ವಿಕೆಟ್ ಪತನ
ಟಾಸ್ ಸೋತು ಮೊದಲು ಬ್ಯಾಟಿಂಗ್ ಮಾಡಿದ ಡೆಲ್ಲಿ ಕ್ಯಾಪಿಟಲ್ಸ್ ಪರವಾಗಿ ಯಾವುದೇ ಬ್ಯಾಟರ್ ಕೂಡ ಕ್ರೀಸ್ ಕಚ್ಚಿ ಆಡುವಲ್ಲಿ ವಿಫಲರಾದರು. ಪ್ಯಟ್ ಕಮಿನ್ಸ್ ಬೌಲಿಂಗ್ ದಾಳಿ ಎದುರಿಸಲಾಗದೆ ಒಬ್ಬರ ಹಿಂದೆ ಒಬ್ಬರಂತೆ ಡೆಲ್ಲಿ ಬ್ಯಾಟರ್ಸ್‌ಗಳು ಪೆವಿಲಿಯನ್ ಪರೇಡ್ ನಡೆಸಿದರು. ಮೊದಲು 7 ಓವರ್‌ಗಳಲ್ಲಿ ಪ್ರಮುಖ 5 ವಿಕಟ್ ಕಳೆದುಕೊಂಡು ಒಂದು ಹಂತದಲ್ಲಿ 100 ರನ್ ಗಳಿಸುವುದು ಕಷ್ಟ ಎಂಬ ಸ್ಥಿತಿಗೆ ಡೆಲ್ಲಿ ಕ್ಯಾಪಿಟಲ್ಸ್ ಬಂದು ತಲುಪಿತು.
ಆದ್ರೆ, 8ನೇ ವಿಕೆಟ್‌ಗೆ ಜೊತೆಯಾದ ತ್ರಿಸ್ಟನ್ ಸ್ಟಬ್ಸ್ ಹಾಗೂ ಅಶುತೋಷ್ ಶರ್ಮಾ 66 ರನ್‌ಗಳ ಜೊತೆಯಾಟ ಆಡುವ ಮೂಲಕ ಡೆಲ್ಲಿಯ ಹಠಾತ್ ಕುಸಿತವನ್ನು ತಡೆದವರು. ಅಂತಿಮವಾಗಿ ಡೆಲ್ಲಿ ಕ್ಯಾಪಿಟಲ್ಸ್ ನಿಗದಿತ 20 ಓವರ್‌ಗಳಲ್ಲಿ 7 ವಿಕೆಟ್ ಕಳೆದುಕೊಂಡು 133 ರನ್ ಕಲೆಹಾಕಿತು. ಆ ಮೂಲಕ ಎಸ್‌ಆರ್‌ಹೆಚ್ ತಂಡಕ್ಕೆ 134 ರನ್‌ಗಳ ಗುರಿ ನೀಡಿತು.
ಡೆಲ್ಲಿ ಕ್ಯಾಪಿಟಲ್ಸ್ ತಂಡದ ಪರವಾಗಿ ಕೊನೆಯಲ್ಲಿ ಅಬ್ಬರಿಸಿದ ತ್ರಿಸ್ಟನ್ ಸ್ಟಬ್ಸ್ ಅಜೇಯ 41 ಹಾಗೂ ಅಶುತೋಷ್ ಶರ್ಮಾ ಸ್ಪೋಟಕ 41 ರನ್ ಸಿಡಿಸುವ ಮೂಲಕ ತಂಡದ ಮೊತ್ತವನ್ನು 130ರ ಗಡಿ ಮುಟ್ಟಿಸಿದರು.
ಮಿಂಚಿನ ಬೌಲಿಂಗ್ ದಾಳಿ
ಸನ್‌ರೈಸರ್ಸ್ ಹೈದರಾಬಾದ್ ಪರ ಮಿಂಚಿನ ಬೌಲಿಂಗ್ ದಾಳಿ ನಡೆಸಿದ ಪ್ಯಾಟ್ ಕಮಿನ್ಸ್ 3 ವಿಕೆಟ್ ಪಡೆದು ಮಿಂಚಿದರು. ಇವರಿಗೆ ಉತ್ತಮ ಸಾಥ್ ನೀಡಿದ ಜಯದೇವ್ ಉನಾದ್ಕತ್, ಹರ್ಷಲ್ ಪಟೆಲ್ ಹಾಗೂ ಈಶಾನ್ ಮಲಿಂಗಾ ತಲಾ ಒಂದು ವಿಕೆಟ್ ಪಡೆದು ಮಿಂಚಿದರು.
ಸನ್‌ರೈಸರ್ಸ್ ಹೈದರಾಬಾದ್ (ಪ್ಲೇಯಿಂಗ್ XI): ಅಭಿಷೇಕ್ ಶರ್ಮಾ, ಇಶಾನ್ ಕಿಶನ್ (ವಿಕೀ), ಹೆನ್ರಿಚ್ ಕ್ಲಾಸೆನ್, ಅನಿಕೇತ್ ವರ್ಮಾ, ಸಚಿನ್ ಬೇಬಿ, ಅಭಿನವ್ ಮನೋಹರ್, ಪ್ಯಾಟ್ ಕಮ್ಮಿನ್ಸ್ (ನಾಯಕ), ಹರ್ಷಲ್ ಪಟೇಲ್, ಜಯದೇವ್ ಉನದ್ಕತ್, ಜೀಶನ್ ಅನ್ಸಾರಿ, ಇಶಾನ್ ಮಾಲಿಂಗ.
ಡೆಲ್ಲಿ ಕ್ಯಾಪಿಟಲ್ಸ್ (ಪ್ಲೇಯಿಂಗ್ XI): ಫಾಫ್ ಡು ಪ್ಲೆಸಿಸ್, ಅಭಿಷೇಕ್ ಪೊರೆಲ್, ಕರುಣ್ ನಾಯರ್, ಕೆಎಲ್ ರಾಹುಲ್(ವಿಕೀ), ಅಕ್ಷರ್ ಪಟೇಲ್(ನಾಯಕ), ಟ್ರಿಸ್ಟಾನ್ ಸ್ಟಬ್ಸ್, ವಿಪ್ರಜ್ ನಿಗಮ್, ಮಿಚೆಲ್ ಸ್ಟಾರ್ಕ್, ದುಷ್ಮಂತ ಚಮೀರಾ, ಕುಲದೀಪ್ ಯಾದವ್, ಟಿ ನಟರಾಜನ್.
News 18 Kannada
ನಮ್ಮ ಸಮಗ್ರ ಸುದ್ದಿಗಳಿಗಾಗಿ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು
WhatsApp Group:https://chat.whatsapp.com/KnDIfiBURQ9G5sLEJLqshk
Facebook page: https://www.facebook.com/samagrasudii
Sharechat: https://sharehat.com/profile/edu514826335?d=n
Twitter: https://twitter.com/SuddiSamagra
Threads: https://www.threads.net/@samagrasuddi.co.in
Instagram: https://www.instagram.com/samagrasuddi.co.in/
Telegram: https://t.me/+E1ubNzdguQ5jN2Y1
Views: 0