

16ನೇ ಆವೃತ್ತಿಯ ಇಂಡಿಯನ್ ಪ್ರೀಮಿಯರ್ ಲೀಗ್ನಲ್ಲಿ (IPL 2023) ಇಂದು ಮಹತ್ವದ ಪಂದ್ಯ ನಡೆಯುತ್ತಿದೆ. ಹೈದರಾಬಾದ್ನ ರಾಜಿವ್ ಗಾಂಧಿ ಅಂತರರಾಷ್ಟ್ರೀಯ ಸ್ಟೇಡಿಯಂನಲ್ಲಿ ಆ್ಯಡಂ ಮರ್ಕ್ರಮ್ ನಾಯಕತ್ವದ ಸನ್ರೈಸರ್ಸ್ ಹೈದರಾಬಾದ್ ತಂಡ ಡೇವಿಡ್ ವಾರ್ನರ್ (David Warner) ನೇತೃತ್ವದ ಡೆಲ್ಲಿ ಕ್ಯಾಪಿಟಲ್ಸ್ (SRH vs DC) ಅನ್ನು ಎದುರಿಸುತ್ತಿದೆ. ಉಭಯ ತಂಡಗಳಿಗೆ ಗೆಲುವು ಅನಿವಾರ್ಯವಾಗಿದ್ದು ಡೆಲ್ಲಿ ಆಡಿದ ಆರು ಪಂದ್ಯಗಳ ಪೈಕಿ ಒಂದರಲ್ಲಷ್ಟೇ ಗೆದ್ದು ಕೊನೆಯ ಸ್ಥಾನದಲ್ಲಿದೆ. ಎಸ್ಆರ್ಹೆಚ್ ಆಡಿದ 6 ಪಂದ್ಯಗಳಲ್ಲಿ ಎರಡರಲ್ಲಿ ಗೆಲುವು ಸಾಧಿಸಿ ಒಂಬತ್ತನೇ ಸ್ಥಾನದಲ್ಲಿದೆ.
Views: 0