SRH vs MI Live Score, IPL 2023: ಮುಂಬೈ ಇಂಡಿಯನ್ಸ್ ಮೊದಲ ವಿಕೆಟ್ ಪತನ

SRH vs MI Live Score, IPL 2023: ಮುಂಬೈ ಇಂಡಿಯನ್ಸ್ ಮೊದಲ ವಿಕೆಟ್ ಪತನ
SRH vs MI Live Score, IPL 2023

IPL 2023 SRH vs MI: ಹೈದರಾಬಾದ್​ನ ರಾಜೀವ್ ಗಾಂಧಿ ಇಂಟರ್ನ್ಯಾಷನಲ್ ಸ್ಟೇಡಿಯಂನಲ್ಲಿ ನಡೆಯುತ್ತಿರುವ ಐಪಿಎಲ್​ನ 25ನೇ ಪಂದ್ಯದಲ್ಲಿ ಸನ್​ರೈಸರ್ಸ್​ ಹೈದರಾಬಾದ್ (Sunrisers Hyderabad) ಹಾಗೂ ಮುಂಬೈ ಇಂಡಿಯನ್ಸ್ (Mumbai Indians) ತಂಡಗಳು ಮುಖಾಮುಖಿಯಾಗಿದೆ. ಈ ಪಂದ್ಯದಲ್ಲಿ ಟಾಸ್ ಗೆದ್ದಿರುವ ಎಸ್​ಆರ್​ಹೆಚ್ ತಂಡದ ನಾಯಕ ಐಡೆನ್ ಮಾರ್ಕ್ರಾಮ್ ಬೌಲಿಂಗ್ ಆಯ್ಕೆ ಮಾಡಿಕೊಂಡಿದ್ದಾರೆ. ಅದರಂತೆ ಮುಂಬೈ ಇಂಡಿಯನ್ಸ್ ಮೊದಲು ಬ್ಯಾಟ್ ಮಾಡಲಿದೆ.

ಉಭಯ ತಂಡಗಳು ಈಗಾಗಲೇ 4 ಪಂದ್ಯಗಳನ್ನು ಆಡಿದ್ದು, ಎರಡೂ ತಂಡಗಳು ತಲಾ 2 ಗೆಲುವು ಸಾಧಿಸಿದೆ. ಹೀಗಾಗಿ ಇಂದಿನ ಪಂದ್ಯದ ಗೆಲುವಿನ ಬಳಿಕ ಪಾಯಿಂಟ್ಸ್​ ಟೇಬಲ್​ನಲ್ಲೂ ಬದಲಾವಣೆ ಕಂಡು ಬರಲಿದೆ. ಏಕೆಂದರೆ ಪ್ರಸ್ತುತ ಅಂಕ ಪಟ್ಟಿಯಲ್ಲಿ ಮುಂಬೈ ಇಂಡಿಯನ್ಸ್ 8ನೇ ಸ್ಥಾನದಲ್ಲಿದ್ದರೆ, ಸನ್​ರೈಸರ್ಸ್ ಹೈದರಾಬಾದ್ 9ನೇ ಸ್ಥಾನದಲ್ಲಿದೆ. ಅತ್ತ 5 ಪಂದ್ಯಗಳಲ್ಲಿ 2 ಜಯ ಸಾಧಿಸಿರುವ ಆರ್​ಸಿಬಿ 7ನೇ ಸ್ಥಾನದಲ್ಲಿದೆ. ಹೀಗಾಗಿ ಇಂದಿನ ಪಂದ್ಯದಲ್ಲಿ ಗೆದ್ದ ತಂಡವು 7ನೇ ಸ್ಥಾನಕ್ಕೇರುವ ಸಾಧ್ಯತೆ ಹೆಚ್ಚಿದೆ.

ಸನ್‌ರೈಸರ್ಸ್ ಹೈದರಾಬಾದ್ ತಂಡ: ಹ್ಯಾರಿ ಬ್ರೂಕ್, ಮಯಾಂಕ್ ಅಗರ್ವಾಲ್, ರಾಹುಲ್ ತ್ರಿಪಾಠಿ, ಐಡೆನ್ ಮಾರ್ಕ್ರಾಮ್(ನಾಯಕ), ಅಭಿಷೇಕ್ ಶರ್ಮಾ, ಹೆನ್ರಿಕ್ ಕ್ಲಾಸೆನ್(ವಿಕೆಟ್ ಕೀಪರ್), ಮಾರ್ಕೊ ಯಾನ್ಸೆನ್, ಭುವನೇಶ್ವರ್ ಕುಮಾರ್, ಮಯಾಂಕ್ ಮಾರ್ಕಂಡೆ, ಉಮ್ರಾನ್ ಮಲಿಕ್, ಟಿ ನಟರಾಜನ್, ವಾಷಿಂಗ್ಟನ್ ಸುಂದರ್, ಅಬ್ದುಲ್ ಸಮದ್, ಮಯಾಂಕ್ ಡಾಗರ್, ವಿವ್ರಾಂತ್ ಶರ್ಮಾ, ಗ್ಲೆನ್ ಫಿಲಿಪ್ಸ್, ಉಪೇಂದ್ರ ಯಾದವ್, ಅನ್ಮೋಲ್‌ಪ್ರೀತ್ ಸಿಂಗ್, ಆದಿಲ್ ರಶೀದ್, ಅಕೇಲ್ ಹೊಸೈನ್, ಸಮರ್ಥ್ ವ್ಯಾಸ್, ಕಾರ್ತಿಕ್ ತ್ಯಾಗಿ, ಸನ್ವಿರ್ ಸಿಂಗ್, ಫಜಲ್ಹಕ್ ಫಾರೂಕಿ, ನಿತೀಶ್ ರೆಡ್ಡಿ

ಮುಂಬೈ ಇಂಡಿಯನ್ಸ್ ತಂಡ: ರೋಹಿತ್ ಶರ್ಮಾ(ನಾಯಕ), ಇಶಾನ್ ಕಿಶನ್(ವಿಕೆಟ್ ಕೀಪರ್), ಸೂರ್ಯಕುಮಾರ್ ಯಾದವ್, ತಿಲಕ್ ವರ್ಮಾ, ಟಿಮ್ ಡೇವಿಡ್, ನೆಹಾಲ್ ವಧೇರಾ, ಕ್ಯಾಮೆರಾನ್ ಗ್ರೀನ್, ಅರ್ಜುನ್ ತೆಂಡೂಲ್ಕರ್, ಹೃತಿಕ್ ಶೋಕೀನ್, ಡುವಾನ್ ಯಾನ್ಸೆನ್, ಪಿಯೂಷ್ ಚಾವ್ಲಾ, ರಿಲೆ ಮೆರೆಡಿತ್, ರಮಣದೀಪ್ ಸಿಂಗ್, ವಿಷ್ಣು ವಿನೋದ್, ಕುಮಾರ್ ಕಾರ್ತಿಕೇಯ, ಅರ್ಷದ್ ಖಾನ್, ಜೇಸನ್ ಬೆಹ್ರೆಂಡಾರ್ಫ್, ಸಂದೀಪ್ ವಾರಿಯರ್, ಜೋಫ್ರಾ ಆರ್ಚರ್, ಶಮ್ಸ್ ಮುಲಾನಿ, ಆಕಾಶ್ ಮಧ್ವಲ್, ಟ್ರಿಸ್ಟಾನ್ ಸ್ಟಬ್ಸ್, ಡೆವಾಲ್ಡ್ ಬ್ರೆವಿಸ್, ರಾಘವ್ ಗೋಯಲ್.

 

 

source https://tv9kannada.com/sports/cricket-news/sunrisers-hyderabad-vs-mumbai-indians-live-score-ipl-2023-match-scorecard-online-at-rajiv-gandhi-international-stadium-hyderabad-in-kannada-zp-au50-558766.html

Leave a Reply

Your email address will not be published. Required fields are marked *