Skip to content
  • Saturday, July 5, 2025
  • About us
  • Contact us
ಸಮಗ್ರ ಸುದ್ದಿ

ಸಮಗ್ರ ಸುದ್ದಿ

ನಿಖರತೆಗೆ ಮತ್ತೊಂದು ಹೆಸರು

  • Home
  • Chitradurga
  • National
  • States
  • Cities
  • Business
  • Entertainment
  • Health
  • Sports
  • Tech
  • General Konwledge
  • Horoscope
  • Home
  • Sports
  • SRH vs RCB: ಆರ್​ಸಿಬಿ ಟಾಸ್ ಗೆದ್ದರೆ ಏನು ಆಯ್ಕೆ ಮಾಡಿಕೊಳ್ಳಬೇಕು?: ಹೈದರಾಬಾದ್ ಪಿಚ್ ಹೇಗಿದೆ?
Sports

SRH vs RCB: ಆರ್​ಸಿಬಿ ಟಾಸ್ ಗೆದ್ದರೆ ಏನು ಆಯ್ಕೆ ಮಾಡಿಕೊಳ್ಳಬೇಕು?: ಹೈದರಾಬಾದ್ ಪಿಚ್ ಹೇಗಿದೆ?

May 18, 2023
samagrasuddi

16ನೇ ಆವೃತ್ತಿಯ ಇಂಡಿಯನ್ ಪ್ರೀಮಿಯರ್ ಲೀಗ್​ನಲ್ಲಿಂದು ಫಾಫ್ ಡುಪ್ಲೆಸಿಸ್ ನಾಯಕತ್ವದ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡ ಈಗಾಗಲೇ ಟೂರ್ನಿಯಿಂದ ಹೊರಬಿದ್ದಿರುವ ಸನ್​ರೈಸರ್ಸ್ ಹೈದರಾಬಾದ್ ತಂಡವನ್ನು ಎದುರಿಸಲಿದೆ.ಹೈದರಾಬಾದ್​ನ ರಾಜಿವ್ ಗಾಂಧಿ ಅಂತರರಾಷ್ಟ್ರೀಯ ಸ್ಟೇಡಿಯಂನಲ್ಲಿ ಈ ಪಂದ್ಯವನ್ನು ಏರ್ಪಡಿಸಲಾಗಿದೆ. ಆರ್​ಸಿಬಿ ಸದ್ಯ 12 ಪಂದ್ಯಗಳಲ್ಲಿ ತಲಾ ಆರು ಗೆಲುವು-ಸೋಲು ಕಂಡು 12 ಅಂಕ ಸಂಪಾದಿಸಿ ಐದನೇ ಸ್ಥಾನದಲ್ಲಿದೆ.ಪ್ಲೇ ಆಫ್ ರೇಸ್​ನಲ್ಲಿ ಉಳಿಯಬೇಕಾದರೆ ಬೆಂಗಳೂರು ಇಂದಿನ ಪಂದ್ಯ ಗೆಲ್ಲಲೇ ಬೇಕಾಗಿದೆ. ಹಿಂದಿನ ಪಂದ್ಯದಲ್ಲಿ ರಾಜಸ್ಥಾನ್ ರಾಯಲ್ಸ್ ವಿರುದ್ಧ ಅದ್ಭುತ ಪ್ರದರ್ಶನ ನೀಡಿ ಗೆದ್ದು ಬೀಗಿತ್ತು. ಬೌಲಿಂಗ್​ನಲ್ಲಿ ಮಾರಕವಾಗಿದ್ದ ಫಾಫ್ ಪಡೆ ಆರ್​ಆರ್ ತಂಡವನ್ನು ಕೇವಲ 59 ರನ್​ಗಳಿಗೆ ಆಲೌಟ್ ಮಾಡಿತ್ತು. ಹೆಚ್ಚು ಕಡಿಮೆ ಜೈಪುರದ ಪಿಚ್​ನಂತೆ ಹೈದರಾಬಾದ್‌ನ ರಾಜೀವ್ ಗಾಂಧಿ ಅಂತಾರಾಷ್ಟ್ರೀಯ ಕ್ರೀಡಾಂಗಣದ ಪಿಚ್‌ ಕೂಡ ಇದೆ. ಇಲ್ಲಿನ ಪಿಚ್ ಬ್ಯಾಟ್ಸ್‌ಮನ್‌ಗಳ ಸ್ನೇಹಿಯಾಗಿದೆ. ದ್ವಿತೀಯ ಇನಿಂಗ್ಸ್‌ನಲ್ಲಿ ಪಿಚ್ ವೇಗ ಹಾಗೂ ಸ್ಪಿನ್ ಬೌಲರ್‌ಗಳಿಗೆ ನೆರವು ನೀಡಲಿದೆ.ಈ ಪಿಚ್​ನಲ್ಲಿ ಟಾಸ್ ಗೆದ್ದ ನಾಯಕ ಮೊದಲು ಬ್ಯಾಟ್ ಮಾಡುವ ನಿರ್ಣಯ ತೆಗೆದುಕೊಂಡರೆ ಉತ್ತಮ. ಈ ಮೈದಾನದಲ್ಲಿ ಆರ್‌ಸಿಬಿ ಹಾಗೂ ಎಸ್‌ಆರ್‌ಹೆಚ್ 10 ಬಾರಿ ಮುಖಾಮುಖಿಯಾಗಿದ್ದು, ಆತಿಥೇಯರು 7 ಪಂದ್ಯಗಳಲ್ಲಿ ಗೆಲುವು ಸಾಧಿಸಿದ್ದರೆ, ಪ್ರವಾಸಿ ತಂಡ ಕೇವಲ 2 ಬಾರಿ ಜಯ ಕಂಡಿದೆಯಷ್ಟೆ.ಉಭಯ ತಂಡಗಳು ಐಪಿಎಲ್ ಇತಿಹಾಸದಲ್ಲಿ ಒಟ್ಟು 22 ಪಂದ್ಯಗಳಲ್ಲಿ ಮುಖಾಮುಖಿ ಆಗಿದೆ. ಇದರಲ್ಲಿ ಸನ್‌ರೈಸರ್ಸ್ ಹೈದರಾಬಾದ್ 12 ಪಂದ್ಯಗಳಲ್ಲಿ ಗೆದ್ದರೆ ಆರ್​ಸಿಬಿ 9 ಪಂದ್ಯದಲ್ಲಷ್ಟೆ ಜಯ ಸಾಧಿಸಿದೆ.ಆರ್​ಸಿಬಿ ಪರ ಬ್ಯಾಟಿಂಗ್​ನಲ್ಲಿ ವಿರಾಟ್ ಕೊಹ್ಲಿ, ಫಾಫ್ ಡುಪ್ಲೆಸಿಸ್ ಹಾಗೂ ಗ್ಲೆನ್ ಮ್ಯಾಕ್ಸ್​ವೆಲ್ ಮಾತ್ರ ಕೊಡುಗೆ ನೀಡುತ್ತಿದ್ದಾರೆ. ಮಹಿಪಾಲ್ ಲುಮ್ರೂರ್ ಮತ್ತೊಮ್ಮೆ ಅಬ್ಬರಿಸಬೇಕಿದೆ. ದಿನೇಶ್ ಕಾರ್ತಿಕ್, ಅನುಜ್ ರಾವತ್ ಕಡೆಯಿಂದ ಇನ್ನಷ್ಟು ರನ್ ಬರಬೇಕು.ಮೊಹಮ್ಮದ್ ಸಿರಾಜ್ ಮತ್ತು ವೇಯ್ನ್ ಪಾರ್ನೆಲ್ ತಂತ್ರದೊಂದಿಗೆ ಬೌಲಿಂಗ್ ಮಾಡುತ್ತಿದ್ದಾರೆ. ಮಿಚೆಲ್ ಬ್ರೆಸ್​ವೆಲ್ ಕೂಡ ಉತ್ತಮ ಬೌಲಿಂಗ್ ಮಾಡುತ್ತಿದ್ದಾರೆ. ಹನಿಂದು ಹಸರಂಗ ಪ್ಲೇಯಿಂಗ್ ಇಲೆವೆನ್​ಗೆ ಕಮ್​ಬ್ಯಾಕ್ ಮಾಡ್ತಾರ ನೋಡಬೇಕು. ಕರ್ಣ್ ಶರ್ಮಾ ಮಾರಕವಾಗಿದ್ದಾರೆ.

source https://tv9kannada.com/photo-gallery/cricket-photos/srh-vs-rcb-pitch-report-if-rcb-win-the-toss-which-should-be-selected-how-is-the-hyderabad-pitch-vb-581247.html

Tags: Bengaluru, Cricket, Hyderabad, IPL, IPL 2023, RCB, samagrasuddi, SRH, TATA IPL 2023, ಸಮಗ್ರ ಸುದ್ದಿ

Post navigation

SRH vs RCB, IPL 2023: ಐಪಿಎಲ್​ನಲ್ಲಿಂದು ಆರ್​ಸಿಬಿ ಪಂದ್ಯ: ಹೈದರಾಬಾದ್ ವಿರುದ್ಧ ಗೆಲ್ಲಲೇ ಬೇಕಿದೆ ಫಾಫ್ ಪಡೆ
IPL Points Table 2023: ಟೂರ್ನಿಯಿಂದ ಹೊರಬೀಳುವ ಭೀತಿಯಲ್ಲಿ ಪಂಜಾಬ್: ಆರೆಂಜ್, ಪರ್ಪಲ್ ಕ್ಯಾಪ್ ಯಾರ ಬಳಿಯಿದೆ?

Leave a Reply Cancel reply

Your email address will not be published. Required fields are marked *

Recent Comments

  1. Kaveri Sonkamble on SBI ನೇಮಕಾತಿ; ಸರ್ಕಲ್​ ಬೇಸ್ಡ್​​ ಆಫೀಸರ್​ ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನMay 31, 2025

    Kaveri Sonkamble

  2. Vani m on SBI Recruitment 2025: SBI ಬ್ಯಾಂಕಿನಲ್ಲಿ 2964 ಹುದ್ದೆಗಳಿಗೆ ನೇಮಕಾತಿ; ಪದವೀಧರರು ಕೂಡಲೇ ಅರ್ಜಿ ಸಲ್ಲಿಸಿMay 13, 2025

    I am complete b. Com in experience of work

  3. Sushma Basayya Hiremath on ಅಗ್ನಿವೀರ್​ ನೇಮಕಾತಿ: ರಾಜ್ಯದ 14 ಜಿಲ್ಲೆಗಳ ಅಭ್ಯರ್ಥಿಗಳಿಗೆ ಮಾತ್ರ ಅರ್ಜಿ ಸಲ್ಲಿಸಲು ಅವಕಾಶ.April 9, 2025

    Sushma Basayya Hiremath

  4. samagrasuddi on ಮೈಸೂರು| ಶಾರದ ವಿಲಾಸ ಶಿಕ್ಷಣ ಮಹಾವಿದ್ಯಾಲಯ ಸಭಾಂಗಣದಲ್ಲಿ ವಿಶ್ವ ಜಲ ದಿನ ಕಾರ್ಯಕ್ರಮ.March 24, 2025

    Tq

  5. Darshan K M on ಮೈಸೂರು| ಶಾರದ ವಿಲಾಸ ಶಿಕ್ಷಣ ಮಹಾವಿದ್ಯಾಲಯ ಸಭಾಂಗಣದಲ್ಲಿ ವಿಶ್ವ ಜಲ ದಿನ ಕಾರ್ಯಕ್ರಮ.March 24, 2025

    Meaning full program..✨❤️

CITIES

Cities

🏫 ಕರ್ನಾಟಕದ 4,134 ಸರ್ಕಾರಿ ಶಾಲೆಗಳಲ್ಲಿ ಇಂಗ್ಲಿಷ್ ಮೀಡಿಯಂ ತರಗತಿಗಳಿಗೆ ಅವಕಾಶ

July 4, 2025
samagrasuddi

📅 ದಿನಾಂಕ: 4 ಜುಲೈ 2025✍️ ಸಮಗ್ರ ಸುದ್ದಿ ವಿಶೇಷ ✅ ಮಹತ್ವದ ನಿರ್ಧಾರ: ಕರ್ನಾಟಕ ಸರ್ಕಾರವು 2025–26ನೇ ಶೈಕ್ಷಣಿಕ ವರ್ಷದಿಂದ ರಾಜ್ಯದ 4,134 ಸರ್ಕಾರಿ ಪ್ರಾಥಮಿಕ ಶಾಲೆಗಳಲ್ಲಿ ಇಂಗ್ಲಿಷ್ ಮೀಡಿಯಂ ತರಗತಿಗಳನ್ನು ಪ್ರಾರಂಭಿಸಲು ಸಿದ್ಧತೆ ಮಾಡಿಕೊಂಡಿದೆ. ವಿದ್ಯಾರ್ಥಿಗಳಿಗೆ ಇಂದಿನ ಸ್ಪರ್ಧಾತ್ಮಕ…

Cities

ಕರ್ನಾಟಕದ ಪ್ರಮುಖ ಐತಿಹಾಸಿಕ ತಾಣಗಳು

July 4, 2025
samagrasuddi
Cities

ದಾವಣಗೆರೆ ಜಿಲ್ಲೆಯ ಮಾರುತಿ ಹೆಚ್ ಗೆ 2025ರ ಇಂಟರ್ ನ್ಯಾಷನಲ್ ಐಕಾನ್ ಪ್ರಶಸ್ತಿ ಪ್ರದಾನ.

July 4, 2025
samagrasuddi
Cities

“ಉತ್ತರ ಕರ್ನಾಟಕದಲ್ಲಿ ಭಾರೀ ಮಳೆಯ ಮುನ್ಸೂಚನೆ – ರೈತರಿಗೆ ಮುನ್ನೆಚ್ಚರಿಕೆ ಅಗತ್ಯ!”

July 4, 2025
samagrasuddi
Cities Health

ಚಿಂತೆ ಬೇಡ, ಹೃದಯ ಸೇಫ್! — ಹಾಸನ ಜಿಲ್ಲೆಯಲ್ಲಿನ ಹೃದಯಾಘಾತ ಪ್ರಕರಣಗಳಿಗೆ ತಡೆಗಟ್ಟಲು ಸರ್ಕಾರದಿಂದ ಕ್ರಮ

July 2, 2025
samagrasuddi

You may Missed

Health

ತಿಂಗಳುಗಟ್ಟಲೆ ಕ್ಯಾರೆಟ್ ತಾಜಾವಾಗಿರಲು ಈ ಸಲಹೆಯನ್ನು ಅನುಸರಿಸಿ! “carrot”

July 5, 2025
samagrasuddi
Health

“ಕರ್ನಾಟಕದಲ್ಲಿ COVID-19 ಪ್ರಕರಣಗಳಲ್ಲಿ ಮತ್ತೆ ಹೆಚ್ಚಳ – ಆರೋಗ್ಯ ಇಲಾಖೆ ಎಚ್ಚರಿಕೆ”

July 4, 2025
samagrasuddi
Health

🌿 ತುಳಸಿಯ ಸೌಂದರ್ಯ ಮತ್ತು ಆರೋಗ್ಯ ಮಹತ್ವ

July 4, 2025
samagrasuddi
Health

ಪ್ರತಿನಿತ್ಯ ಈ 3 ಹಣ್ಣುಗಳ ಸೇವನೆಯಿಂದ ಮುಖದ ಸೊಕ್ಕು ಮಾಯ, ಚರ್ಮದ ಹೊಳಪು ಪಳ ಪಳ! | “Facial Wrinkles”

July 3, 2025
samagrasuddi
July 2025
M T W T F S S
 123456
78910111213
14151617181920
21222324252627
28293031  
« Jun    
  • ನೀರಜ್ ಚೋಪ್ರಾ ಪ್ರಧಾನದ ಆಕರ್ಷಣೆ: ಬೆಂಗ್ಳೂರಿನ ಕಂಠೀರವ ಕ್ರೀಡಾಂಗಣದಲ್ಲಿ ಇಂದು ಎನ್ ಸಿ ಕ್ಲಾಸಿಕ್ ಸ್ಪರ್ಧೆ
  • 📝 ಎಸ್‌ಎಸ್‌ಎಲ್‌ಸಿ ಬ್ಲೂಪ್ರಿಂಟ್‌ನಲ್ಲಿ ಎಲ್ಲಾ ಮಾದರಿ ಅಂಕಗಳ ಪ್ರಶ್ನೆ
  • “WCL 2025”: ಯುವರಾಜ್ ಸಿಂಗ್ ನಾಯಕತ್ವದಲ್ಲಿ ಟೀಂ ಇಂಡಿಯಾ ಕಣಕ್ಕೆ; ಮೊದಲ ಎದುರಾಳಿ ಪಾಕಿಸ್ತಾನ.
  • ಭಾರತ – ಇಂಗ್ಲೆಂಡ್ 2ನೇ ಟೆಸ್ಟ್‌: ಆಕಾಶ್‌ – ಸಿರಾಜ್‌ ದಾಳಿಗೆ ಕುಸಿದ ಆಂಗ್ಲರು – ಇಬ್ಬರೂ ವೇಗಿಗಳು ಕಬಳಿಸಿದ ವಿಕೆಟ್ ಎಷ್ಟು?
  • ತಿಂಗಳುಗಟ್ಟಲೆ ಕ್ಯಾರೆಟ್ ತಾಜಾವಾಗಿರಲು ಈ ಸಲಹೆಯನ್ನು ಅನುಸರಿಸಿ! “carrot”
Copyright © 2025 ಸಮಗ್ರ ಸುದ್ದಿ
Contact us
Theme by: Theme Horse
Proudly Powered by: WordPress