ವರದಿ ಮತ್ತು ಫೋಟೋ ಕೃಪೆ ಸುರೇಶ್ ಪಟ್ಟಣ್, ಮೊ : 98862 95817
ಚಿತ್ರದುರ್ಗ ಫೆ. 26 ಕಳೆದ 22 ರಿಂದ ನಗರದ ಕರುವಿನ ಕಟ್ಟೆ ವೃತ್ತದಲ್ಲಿನ ಶ್ರೀ ಸದ್ಗುರು ಕಬೀರಾನಂದಾಶ್ರಮದಲ್ಲಿ ನಡೆಯುತ್ತಿರುವ ಶಿವನಾಮ ಸಪ್ತಾಹದ 95ನೇ ಶಿವರಾತ್ರಿ ಮಹೋತ್ಸವ ಕಾರ್ಯಕ್ರಮದಡಿಯಲ್ಲಿ ಇಂದು ಶ್ರೀ ಶಿವಲಿಂಗಾನಂದ ಶ್ರೀಗಳ ಪಲ್ಲಕ್ಕಿ ಉತ್ಸವ ಹಾಗೂ ಜನಪದ
ಉತ್ಸವ ನಡೆಯಿತು.

ಶ್ರೀ ಕಬೀರಾನಂದಸ್ವಾಮಿ ಕ್ರೀಡಾ ಮತ್ತು ಸಾಂಸ್ಕøತಿಕ ಸಂಘ, ಕನ್ನಡ ಮತ್ತು ಸಂಸ್ಕøತಿ ಇಲಾಖೆ ಬೆಂಗಳೂರು ಇವರ
ಸಹಯೋಗದೊಂದಿಗೆ ಹಮ್ಮಿಕೊಂಡಿದ್ದ ಶ್ರೀಗಳ ಪಲ್ಲಕ್ಕಿ ಹಾಗೂ ಜಾನಪದ ಉತ್ಸವಕ್ಕೆ ನಗರಾಭೀವೃದ್ದಿ ಪ್ರಾಧಿಕಾರದ ಮಾಜಿ
ಸದಸ್ಯರಾದ ಓಂಕಾರ್ ಚಾಲನೆಯನ್ನು ನೀಡಿದರು.
ವಿವಿಧ ರೀತಿಯ ಹೂಗಳಿಂದ ಅಲಂಕೃತವಾದ ಪಲ್ಲಕ್ಕಿಯಲ್ಲಿ ಪೀತಾಂಬರವನ್ನು ತೊಟ್ಟು ತಲೆಗೆ ಪೇಟವನ್ನು ಧರಿಸಿ ಕೈಯಲ್ಲಿ
ರುದ್ರಾಕ್ಷಿಯನ್ನು ಹಿಡಿದು ವಿರಾಜಮನರಾದ ಶ್ರೀ ಶಿವಲಿಂಗಾನಂದÀ ಶ್ರೀಗಳು ದಾರಿಯುದ್ದಕ್ಕೂ ಭಕ್ತಾಧಿಗಳು ದರ್ಶನವನ್ನು
ನೀಡಿದರು. ಮೆರವಣಿಗೆಯಲ್ಲಿ ಮಹಿಳೆಯರು ಕುಂಭಗಳನ್ನು ಹೊತ್ತು ಸಾಗುತ್ತಿದ್ದ ದೃಶ್ಯ ಸಾಮಾನ್ಯವಾಗಿತ್ತು.
ಈ ಉತ್ಸವದಲ್ಲಿ ವೀರಗಾಸೆ, ಕೀಲು ಕುದುರೆ, ತಮಟೆ, ಜಾಂಜ್ ನೃತ್ಯ, ಕಿನ್ನರ ಜೋಗಿ, ಚಂಡೆ, ಲಂಬಾಣಿ ನೃತ್ಯ, ಖಾಸಬೇಡರ ಪಡೆ,
ಡೊಳ್ಳು ಕುಣಿತ, ಕೋಲಾಟ, ಭಜನೆ, ತಟ್ಟೆರಾಯ, ಶಾರದಾ ಬ್ರಾಸ್ ಬ್ಯಾಂಡ್, ಕಹಳೆ, ಉರಿಮೆ, ಗೂರವಪ್ಪ, ಛತ್ರಿ ಚಾಮರ
ಸೇರಿದಂತೆ ವಿವಿಧ ಜಾನಪದ ಕಲಾ ತಂಡಗಳು ಈ ಉತ್ಸವದಲ್ಲಿ ಭಾಗವಹಿಸಿ ತಮ್ಮ ಪ್ರತಿಭೆಯನ್ನು ಪ್ರದರ್ಶನ ಮಾಡಿದರು.
ಇದರೊಂದಿಗೆ ಆದಿಚುಂಚನಗಿರಿ ಶಿಕ್ಷಣ ಟ್ರಸ್ಟ್‍ನ ಜ್ಞಾನ ವಿಕಾಸ ಪಾಲಿಟೆಕ್ನಿಕ್ ಕಾಲೇಜಿನ ಸಿಬ್ಬಂದಿ, ಶ್ರೀ ಸದ್ಗುರು
ಕಬೀರಾನಂದಸ್ವಾಮಿ ನರ್ಸಿಂಗ್ ಕಾಲೇಜು, ಪ್ರಥಮ ದರ್ಜೆ ಕಾಲೇಜು ಬಿ.ಇಡಿ. ಪಿಯು ಕಾಲೇಜು ಆಂಗ್ಲ ಶಾಲೆಯ ವಿದ್ಯಾರ್ಥಿಗಳು
ಉತ್ಸವದಲ್ಲಿ ಪಾಲ್ಗೊಂಡಿದ್ದರು. ಶ್ರೀ ಕಬೀರಾನಂದ ಸ್ವಾಮಿ ಆಂಗ್ಲ ಮತ್ತು ಮಾಧ್ಯಮ ಪ್ರಾಥಮಿಕ ಶಾಲೆಯ ವಿದ್ಯಾರ್ಥಿಗಳು ದೇಶದ
ವಿವಿಧ ರಾಜ್ಯದ ಉಡುಗೆಯನ್ನು ತೊಡುವುದರ ಮೂಲಕ ಭಾವೈಕ್ಯತೆಯನ್ನು ಮೆರೆದಿದ್ಧಾರೆ, ಇದೇ ರೀತಿ ಮತ್ತೊಂದು ಶಾಲೆಯ
ಮಕ್ಕಳು ರಾಜ್ಯದ ವಿವಿಧ ಜಿಲ್ಲೆಯ ಸಾಂಸ್ಕøತಿಕ ಉಡುಗೆಯನ್ನು ಧರಿಸುವುದರ ಮೂಲಕ ಮೆರವಣಿಗೆಯಲ್ಲಿ ಭಾಗವಹಿಸಿದ್ದರು.
ಉತ್ಸವವೂ ನಗರದ ಕಬೀರಾನಂದಾಶ್ರಮದಿಂದ ಪ್ರಾರಂಭವಾಗಿ ದೊಡ್ಡ ಗರಡಿ ರಸ್ತೆ, ದೊಡ್ಡಪೇಟೆ, ಮೈಸೂರ್ ಕಫೆ, ದೊಡ್ಡಪೇಟೆ,
ಚಿಕ್ಕಪೇಟೆ, ಆನೆಬಾಗಿಲು, ಸಂತೇಪೇಟೆ ವೃತ್ತ, ಮೈಸೂರ್ ಬ್ಯಾಂಕ್ ವೃತ್ತ, ಪಾಶ್ರ್ವನಾಥ್ ಸ್ಕೂಲ್ ಮುಂಬಾಗ, ಶಾರದ ಬ್ರಾಸ್
ಬ್ಯಾಂಡ್ ಮನೆ ಮುಂಭಾಗ, ರಂಗಯ್ಯನ ಬಾಗಿಲು, ಉಜ್ಜಯಿನಿ ಮಠ, ಕರುವಿನಕಟ್ಟೆ ವೃತ್ತಯಿಂದ ಶ್ರೀಮಠವನ್ನು ತಲುಪಿತು.
ದಾರಿಯುದ್ದಕ್ಕೂ ಶ್ರೀಗಳ ಭಕ್ತಾಧಿಗಳು ಸ್ವಾಮಿಗಳ ದರ್ಶನವನ್ನು ಪಡೆಯುವ ಸಲುವಾಗಿ ರಸ್ತೆ ಬದಿಯಲ್ಲಿ ಸಾಲುಗಟ್ಟಿ ನಿಂತಿದ್ದು,
ಶ್ರೀಗಳಿಗೆ ಫಲ ಮತ್ತು ಹಾರ ಹಾಗೂ ಕಾಣಿಕೆಯನ್ನು ನೀಡುವುದರ ಮೂಲಕ ದರ್ಶನಾರ್ಶೀವಾದವನ್ನು ಪಡೆದರು.
ಈ ಸಂದರ್ಭದಲ್ಲಿ ಮುಖಂಡರಾದ ಗೋಪಾಲಸ್ವಾಮಿ ನಾಯ್ಕ್, ಪ್ರಶಾಂತ್, ನಾಗರಾಜ್ ಸಂಗಂ, ರಮೇಶ್, ಸತೀಶ್, ರುದ್ರೇಶ್
ಪ್ರಭಂಜನ್, ಪೈಲ್ವಾನ್ ತಿಪ್ಪೇಸ್ವಾಮಿ, ನಿರಂಜನಮೂರ್ತಿ, ಗಣಪತಿಶಾಸ್ತ್ರಿ, ತಿಪ್ಪೇಸ್ವಾಮಿ, ಯೋಗಿಶ್ ಮಂಜುನಾಥ್ ಗುಪ್ತ
ಸೇರಿದಂತೆ ಇತರರು ಭಾಗವಹಿಸಿದ್ದರು.
ಫೆ. 27ರ ಬೆಳಿಗ್ಗೆ ಬ್ರಾಹ್ಮೀ ಮಹೋರ್ತದಲ್ಲಿ ಶಿವನಹಿಮ್ನಾ ಸ್ತೂತ್ರ ವಿಭೂತಿ ಸ್ನಾನದೊಂದಿಗೆ ಸಪ್ತಾಹ ಸಮಾಪ್ತಿಯಾಗಲಿದೆ, ಸಂಜೆ
5.30ರಿಂದ ಸನ್ಯಾಸಿ ವಿಧಿಯಂತೆ ಕೌದಿ ಪೂಜೆ ಕಾರ್ಯಕ್ರಮ ನಡೆಯಲಿದೆ. ಈ ಕಾರ್ಯಕ್ರಮದ ದಿವ್ಯ ಸಾನಿಧ್ಯವನ್ನು
ಕುಂಬಳಗೋಡಿನ ಎಸಿಎಂ ಮಠದ ಬಿಜಿಎಸ್ ಗ್ರೂಪ್‍ನ ವ್ಯವಸ್ಥಾಪಕ ನಿದೇಶಕರಾದ ಪ್ರಕಾಶನಾಥ್ ಶ್ರೀಗಳು, ನಾಗಲಕೋಟೆಯ
ಸದ್ಗುರು ಶ್ರದ್ದಾನಂದ ಆಶ್ರಮದ ಶ್ರೀ ಕೈಲಾಸಪತಿನಾಥ್ ಶ್ರೀಗಳು, ಭಾಗವಹಿಸಲಿದ್ದಾರೆ.