ಕಲಬುರಗಿ: ಹೃದಯಾಘಾತದಿಂದ ವಿರಕ್ತ ಮಠದ ಶ್ರೀ ಸಿದ್ದರಾಮ ಮಹಾಸ್ವಾಮಿಗಳು ವಿಧಿವಶ.

ಹೃದಯಾಘಾತವಾದ ಹಿನ್ನೆಲೆಯಲ್ಲಿ ವಿರಕ್ತ ಮಠದ ಶ್ರೀ ಸಿದ್ದರಾಮ ಮಹಾಸ್ವಾಮಿ (35) ವಿಧಿವಶರಾಗಿದ್ದಾರೆ.

ಕಲಬುರಗಿ: ಹೃದಯಾಘಾತವಾದ ಹಿನ್ನೆಲೆಯಲ್ಲಿ ವಿರಕ್ತ ಮಠದ ಶ್ರೀ ಸಿದ್ದರಾಮ ಮಹಾಸ್ವಾಮಿ (35) ವಿಧಿವಶರಾಗಿದ್ದಾರೆ. ಕಲಬುರಗಿ ಜಿಲ್ಲೆ ಕಾಳಗಿ ತಾಲೂಕಿನ ರಟಕಲ್ ಗ್ರಾಮದಲ್ಲಿರುವ ವಿರಕ್ತ ಮಠದ್ದಲ್ಲಿ ಇಂದು ಮುಂಜಾನೆ ತೀವ್ರ ಹೃದಯಾಘಾತದಿಂದ ಮಹಾಸ್ವಾಮಿಗಳು ಇಹಲೋಕ ತ್ಯಜಿಸಿದ್ದಾರೆ. ಇಂದು ಸಂಜೆ 5 ಗಂಟೆಗೆ ರಟಕಲ್ ಗ್ರಾಮದಲ್ಲಿ ಧಾರ್ಮಿಕ ವಿಧಿ-ವಿಧಾನದ ಪ್ರಕಾರ ಶ್ರೀಗಳ ಅಂತ್ಯಕ್ರಿಯೆ ನಡೆಯಲಿದೆ. ಭಾನುವಾರ ರಟಕಲ್ ಗ್ರಾಮದಲ್ಲಿ ನಡೆದ ವಚನ ಸಂಗಮ ಕಾರ್ಯಕ್ರಮದಲ್ಲಿ ಶ್ರೀಗಳು ಭಾಗಿಯಾಗಿದ್ದರು.

Source : https://www.kannadaprabha.com/karnataka/2024/Jul/08/kalaburagi-virakta-mutt-seer-passed-away

Views: 1

Leave a Reply

Your email address will not be published. Required fields are marked *