SSC Recruitment 2023: 1876 ಸಬ್ ಇನ್ಸ್ಪಕ್ಟರ್ ಹುದ್ದೆಗಳಿಗೆ ಅರ್ಜಿ ಆಹ್ವಾನ

SSC CPO SI Recruitment 2023: ಈಗಾಗಲೇ ಆನ್ಲೈನ್ ಅರ್ಜಿ ಪ್ರಕ್ರಿಯೆ ಪ್ರಾರಂಭವಾಗಿದ್ದು, ಆಗಸ್ಟ್ 15 ಅರ್ಜಿ ಸಲ್ಲಿಸಲು ಕೊನೆಯ ದಿನಾಂಕವಾಗಿದೆ. ಹೆಚ್ಚಿನ ಮಾಹಿತಿಗೆ ಅಧಿಕೃತ ಅಧಿಸೂಚನೆಯನ್ನು ಪರಿಶೀಲಿಸಬಹುದು.

SSC CPO SI Recruitment 2023: ಸ್ಟಾಫ್ ಸೆಲೆಕ್ಷನ್ ಕಮಿಷನ್ (SSC) ದೆಹಲಿ ಪೊಲೀಸ್ ಮತ್ತು ಕೇಂದ್ರ ಸಶಸ್ತ್ರ ಪೊಲೀಸ್ ಪಡೆಗಳಲ್ಲಿ (CAPF) ಸಬ್ ಇನ್ಸ್ಪೆಕ್ಟರ್ ನೇಮಕಾತಿಗೆ ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ಆಸಕ್ತ ಅಭ್ಯರ್ಥಿಗಳು SSCಯ ಪ್ರಧಾನ ಕಚೇರಿಯ ಅಧಿಕೃತ ವೆಬ್‍ಸೈಟ್ https://ssc.nic.in. ನಲ್ಲಿ ಅರ್ಜಿ ಸಲ್ಲಿಸಬಹುದಾಗಿದೆ.

ಈಗಾಗಲೇ ಆನ್ಲೈನ್ ಅರ್ಜಿ ಪ್ರಕ್ರಿಯೆ ಪ್ರಾರಂಭವಾಗಿದ್ದು, ಆಗಸ್ಟ್ 15 ಅರ್ಜಿ ಸಲ್ಲಿಸಲು ಕೊನೆಯ ದಿನಾಂಕವಾಗಿದೆ. ಹೆಚ್ಚಿನ ಮಾಹಿತಿಗೆ ಅಧಿಕೃತ ಅಧಿಸೂಚನೆಯನ್ನು ಪರಿಶೀಲಿಸಬಹುದು.

SSC ಸಬ್ ಇನ್ಸ್ಪೆಕ್ಟರ್ ಹುದ್ದೆಗಳ ವಿವರ

ಒಟ್ಟು ಹುದ್ದೆಗಳು: 1,876

ದೆಹಲಿ ಪೊಲೀಸ್- ಸಬ್ ಇನ್ಸ್ಪೆಕ್ಟರ್ (Exe.) -109 (ಪುರುಷ) ಹುದ್ದೆಗಳು

ದೆಹಲಿ ಪೊಲೀಸ್‍ – ಸಬ್ ಇನ್ಸ್ಪೆಕ್ಟರ್ (Exe.) – 53 (ಮಹಿಳೆ)  ಹುದ್ದೆಗಳು

CAPFನಲ್ಲಿ ಸಬ್ ಇನ್ಸ್ಪೆಕ್ಟರ್ (GD) – 1,714 ಹುದ್ದೆಗಳು

ಶೈಕ್ಷಣಿಕ ಅರ್ಹತೆ: ಅಭ್ಯರ್ಥಿಗಳು ಮಾನ್ಯತೆ ಪಡೆದ ವಿಶ್ವವಿದ್ಯಾಲಯದಿಂದ ಪದವಿ ಅಥವಾ ತತ್ಸಮಾನ ವಿದ್ಯಾರ್ಹತೆಯನ್ನು ಹೊಂದಿರಬೇಕು. ಪದವಿ ಅಥವಾ ತತ್ಸಮಾನ ಪರೀಕ್ಷೆಯಲ್ಲಿ ಹಾಜರಾದ ಅಭ್ಯರ್ಥಿಗಳು ಸಹ ಅರ್ಜಿ ಸಲ್ಲಿಸಬಹುದು.

ವಯೋಮಿತಿ: ಆಗಸ್ಟ್ 1, 2023ಕ್ಕೆ ಅನ್ವಯವಾಗುವಂತೆ ಅಭ್ಯರ್ಥಿಯ ವಯಸ್ಸು 20 ವರ್ಷಕ್ಕಿಂತ ಮೇಲ್ಪಟ್ಟಿರಬೇಕು ಮತ್ತು 25 ವರ್ಷಕ್ಕಿಂತ ಕಡಿಮೆ ವಯಸ್ಸಿನವರಾಗಿರಬೇಕು. ನಿಯಮಗಳ ಪ್ರಕಾರ ವಯೋಮಿತಿ ಸಡಿಲಿಕೆ ಇರುತ್ತದೆ.

ಅರ್ಜಿ ಶುಲ್ಕ: ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು 100 ರೂ. ಪಾವತಿಸಿ ಅರ್ಜಿ ಸಲ್ಲಿಸಬಹುದು. ಆಸಕ್ತ ಅಭ್ಯರ್ಥಿಗಳು SSCಯ ಪ್ರಧಾನ ಕಚೇರಿಯ ಅಧಿಕೃತ ವೆಬ್‍ಸೈಟ್ https://ssc.nic.in ನಲ್ಲಿ ಅರ್ಜಿ ಸಲ್ಲಿಸಬಹುದು.

ಅರ್ಜಿ ಸಲ್ಲಿಸುವುದು ಹೇಗೆ?

ಅಭ್ಯರ್ಥಿಗಳು ಅಧಿಕೃತ SSC ವೆಬ್‍ಸೈಟ್‍ಗೆ ಭೇಟಿ ನೀಡಬೇಕು.  

ನಿಮ್ಮ ಹೆಸರನ್ನು ನೋಂದಾಯಿಸಿ ಮತ್ತು ಲಾಗಿನ್ ಮಾಡಿ

ಅರ್ಜಿ ನಮೂನೆಯನ್ನು ಭರ್ತಿ ಮಾಡಿ.

ಅಗತ್ಯವಿರುವ ಎಲ್ಲಾ ದಾಖಲೆಗಳನ್ನು ಅಪ್‍ಲೋಡ್ ಮಾಡಿ.

ಅರ್ಜಿ ಶುಲ್ಕ ಪಾವತಿಸಿ.

ಕೊನೆಯದಾಗಿ ನಿಮ್ಮ ಸಲ್ಲಿಕೆಯ ಸ್ವೀಕೃತಿ ಪ್ರತಿ(acknowledgement copy)ಯನ್ನು ಡೌನ್‍ಲೋಡ್ ಮಾಡಿಕೊಳ್ಳಿರಿ.

Source : https://zeenews.india.com/kannada/career/ssc-recruitment-2023-apply-for-over-1876-vacancies-for-sub-inspector-posts-147521

Leave a Reply

Your email address will not be published. Required fields are marked *