
ಬೆಂಗಳೂರು : 2025ರ ಮಾರ್ಚ್ ನಲ್ಲಿ ನಡೆಯುವ ಎಸ್ ಎಸ್ ಎಲ್ ಸಿ ಪರೀಕ್ಷೆ ಒಂದಕ್ಕೆ ಹಾಜರಾಗುವ ರಾಜ್ಯದ ಎಲ್ಲಾ ಶಾಲಾ ವಿದ್ಯಾರ್ಥಿಗಳು ತಮ್ಮ ಹೆಸರು ನೋಂದಾಯಿಸಿಕೊಳ್ಳಲು ನ. 20ರವರೆಗೆ ಮತ್ತು ಶುಲ್ಕ ಪಾವತಿಸಲು ನವಂಬರ್ 30ರವರೆಗೆ ಅವಕಾಶ ನೀಡಲಾಗಿದೆ ಸರಕಾರಿ ಅನುದಾನಿತ ಮತ್ತು ಖಾಸಗಿ ಶಾಲೆಗಳ ಅರ್ಹ ವಿದ್ಯಾರ್ಥಿಗಳು ಖಾಸಗಿ ಮತ್ತು ಪುನರಾವರ್ತಿತ ಅಭ್ಯರ್ಥಿಗಳ ಮಾಹಿತಿಯನ್ನು ಆನ್ಲೈನ್ ಮೂಲಕ ನೊಂದಾಯಿಸಲು ನ. 11 ರವರೆಗೆ ಗಂಡು ನೀಡಲಾಗಿತ್ತು. ಇದೀಗ ಈ ಅವಧಿಯನ್ನು ನ. 20ರವರೆಗೆ ವಿಸ್ತರಿಸಲಾಗಿದೆ ನ. 26 ಮತ್ತು ಬ್ಯಾಂಕ್ ನಲ್ಲಿ ಶುಲ್ಕ ಪಾವತಿಸಲು ನ. 30ರವರೆಗೆ ಕಾಲಾವಕಾಶ ನೀಡಲಾಗಿದೆ ಎಂದು ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯ ನಿರ್ಣಯ ಮಂಡಳಿ ಪ್ರಕಟಣೆಯಲ್ಲಿ ತಿಳಿಸಿದೆ.
