SSLC Exam: ಇಂದಿನಿಂದ ರಾಜ್ಯಾದ್ಯಂತ ಎಸ್​ಎಸ್​ಎಲ್​ಸಿ ಪರೀಕ್ಷೆ ಆರಂಭ

ಒಟ್ಟು 8,69,968 ವಿದ್ಯಾರ್ಥಿಗಳು ಪರೀಕ್ಷೆಗೆ ನೋಂದಣಿ ಮಾಡಿಕೊಂಡಿದ್ದಾರೆ. ಒಟ್ಟು ವಿದ್ಯಾರ್ಥಿಗಳ ನೋಂದಣಿಯಲ್ಲಿ 8,10,368 ರೆಗ್ಯುಲರ್ ವಿದ್ಯಾರ್ಥಿಗಳಾಗಿದ್ದಾರೆ. 18,225 ಖಾಸಗಿ ವಿದ್ಯಾರ್ಥಿಗಳು ಪರೀಕ್ಷೆಗೆ ನೋಂದಣಿ ಮಾಡಿಕೊಂಡಿದ್ರೆ, 41,375 ಪುನರಾವರ್ತಿತ ವಿದ್ಯಾರ್ಥಿಗಳಿದ್ದಾರೆ. ಒಟ್ಟು ವಿದ್ಯಾರ್ಥಿಗಳ ಪೈಕಿ 4,41,910 ಬಾಲಕರು ಮತ್ತು 4,28,058 ಬಾಲಕಿಯರು ಪರೀಕ್ಷೆಯನ್ನು ಬರೆಯುತ್ತಿದ್ದಾರೆ.ಏಳು ಮಾಧ್ಯಮಗಳಲ್ಲಿ ಪರೀಕ್ಷೆ ಬರೆಯಲು ಅವಕಾಶ.

ಈ ಬಾರಿ 5,424 ವಿಭಿನ್ನ ಸಾಮರ್ಥ್ಯವುಳ್ಳ ವಿದ್ಯಾರ್ಥಿಗಳು ಪರೀಕ್ಷೆಗೆ ನೋಂದಾಯಿಸಿಕೊಂಡಿದ್ದಾರೆ. ವಿದ್ಯಾರ್ಥಿಗಳು ಕನ್ನಡ, ಆಂಗ್ಲ, ಹಿಂದಿ, ತೆಲುಗು, ತಮಿಳು, ಉರ್ದು ಮತ್ತು ಮರಾಠಿ ಸೇರಿ ಒಟ್ಟು ಏಳು ಮಾಧ್ಯಮಗಳಲ್ಲಿ ಪರೀಕ್ಷೆ ಬರೆಯಲು ಅವಕಾಶ ಕಲ್ಪಿಸಲಾಗಿದೆ.

ಪರೀಕ್ಷಾ ಕೇಂದ್ರಗಳಲ್ಲಿ ಪರೀಕ್ಷಾ ಅಧಿಕಾರಿ, ಸಿಬ್ಬಂದಿ ಹಾಗೂ ಪರೀಕ್ಷಾರ್ಥಿಗಳಿಗೆ ಕಡ್ಡಾಯವಾಗಿ ಮೊಬೈಲ್‍ ಫೋನ್ ನಿಷೇಧಿಸಲಾಗಿದೆ. ಪರೀಕ್ಷಾ ಕೇಂದ್ರಗಳ ಸುತ್ತಾಮುತ್ತ 200 ಮೀಟರ್ ಪ್ರದೇಶವನ್ನು ನಿಷೇಧಿತ ಪ್ರದೇಶವೆಂದು ಘೋಷಣೆ ಮಾಡಲಾಗಿದೆ.

ಪರೀಕ್ಷಾ ಕೇಂದ್ರಗಳಲ್ಲಿ ಸಿಸಿಟಿವಿ ಕಣ್ಣು

ಪ್ರತಿ ಪರೀಕ್ಷಾ ಕೇಂದ್ರಗಳಿಗೆ ಅಗತ್ಯ ಪೊಲೀಸ್ ಭದ್ರತೆಯನ್ನು ಒದಗಿಸಲಾಗುತ್ತದೆ. ಎಲ್ಲ ಪರೀಕ್ಷಾ ಕೇಂದ್ರಗಳಲ್ಲಿ ಸಿಸಿಟಿವಿ ಕ್ಯಾಮರಾಗಳನ್ನು ಅಳವಡಿಕೆ ಮಾಡಲಾಗಿದೆ. ಸಿಸಿಟಿವಿ ಕ್ಯಾಮರಾ ಮೂಲಕ ಪರೀಕ್ಷಾ ಅವ್ಯವಹಾರಗಳ ಬಗ್ಗೆ ನಿಗಾ ಇರಿಸಲಾಗುತ್ತದೆ.

ನಿರ್ದೇಶಕರು ಮತ್ತು ಸಹನಿರ್ದೇಶಕರ ವೃಂದದ ಅಧಿಕಾರಿಗಳನ್ನು ಜಿಲ್ಲಾ ಮೇಲುಸ್ತುವಾರಿ ಅಧಿಕಾರಿಗಳನ್ನಾಗಿ ನೇಮಕ ಮಾಡಲಾಗಿದೆ. ಇಲಾಖೆಯ ವಿವಿಧ ಹಂತದ ಅಧಿಕಾರಿಗಳನ್ನು ಪರೀಕ್ಷಾ ಕೇಂದ್ರಗಳಿಗೆ ಸ್ಥಾನಿಕ ಜಾಗೃತ ದಳದಅಧಿಕಾರಿಗಳನ್ನಾಗಿ ನೇಮಿಸಲಾಗಿದೆ.

ಪರೀಕ್ಷೆ ಬರೆಯುವ ವಿದ್ಯಾರ್ಥಿಗಳಿಗೆ ಬಿಸಿಯೂಟ

SSLC ಪರೀಕ್ಷಾ ಕೇಂದ್ರಗಳಲ್ಲಿ ಪರೀಕ್ಷಾ ಕಾರ್ಯಕ್ಕೆ ಯಾವುದೇ ಅಡಚಣೆಯಾಗದಂತೆ ಬಿಸಿಯೂಟದ ವ್ಯವಸ್ಥೆ ಕಲ್ಪಿಸಲಾಗಿದೆ. ಪರೀಕ್ಷೆ ಬರೆಯುವ ಎಲ್ಲಾ ವಿದ್ಯಾರ್ಥಿಗಳಿಗೆ ಮಧ್ಯಾಹ್ನ ಬಿಸಿಯೂಟ ವಿತರಣೆಗೆ ಸಿದ್ಧತೆ ಮಾಡಿಕೊಳ್ಳಲಾಗಿದೆ.

ಎಸ್‌ಎಸ್‌ಎಲ್‌ಸಿ ಪರೀಕ್ಷಾ ವೇಳಾಪಟ್ಟಿ

ಮೊದಲ ದಿನ: ಮಾರ್ಚ್ 25, 2024

ಕನ್ನಡ, ತೆಲುಗು, ಹಿಂದಿ, ಮರಾಠಿ, ತಮಿಳು, ಉರ್ದು, ಇಂಗ್ಲಿಷ್, ಇಂಗ್ಲಿಷ್ (ಎನ್​​​​ಸಿಇಆರ್​​ಟಿ), ಸಂಸ್ಕೃತ (ಪ್ರಥಮ ಭಾಷೆ)

27-3-2024: ಸಮಾಜ ವಿಜ್ಞಾನ

30-03-2024: ವಿಜ್ಞಾನ

02-04-2024: ಗಣಿತ

03-04-2024: ಅರ್ಥಶಾಸ್ತ್ರ (ಕೋರ್ ಸಬ್ಜೆಕ್ಟ್‌)

04-04-2024: ಕನ್ನಡ, ತೆಲುಗು, ಹಿಂದಿ, ಮರಾಠಿ, ತಮಿಳು, ಉರ್ದು, ಇಂಗ್ಲಿಷ್, ಇಂಗ್ಲಿಷ್ (ಎನ್‌ಸಿಇಆರ್‌ಟಿ), ಸಂಸ್ಕೃತ (ತೃತೀಯ ಭಾಷೆ)

06-04-2024: ಇಂಗ್ಲಿಷ್, ಕನ್ನಡ (ದ್ವಿತೀಯ ಭಾಷೆ)

Source :https://m.dailyhunt.in/news/india/kannada/news18kannada-epaper-nwseika/sslc+exam+indinindha+raajyaadyanta+es+es+el+si+parikshe+aarambha-newsid-n594519098?listname=topicsList&topic=for%20you&index=2&topicIndex=0&mode=pwa&action=click

ನಮ್ಮ ಸಮಗ್ರ ಸುದ್ದಿಗಳಿಗಾಗಿ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು 

WhatsApp Group: https://chat.whatsapp.com/KnDIfiBURQ9G5sLEJLqshk

Facebook page: https://www.facebook.com/samagrasudii

Sharechat: https://sharehat.com/profile/edu514826335?d=n

Twitter: https://twitter.com/SuddiSamagra

Threads: https://www.threads.net/@samagrasuddi.co.in

Instagram: https://www.instagram.com/samagrasuddi.co.in/

Telegram: https://t.me/+E1ubNzdguQ5jN2Y1

Leave a Reply

Your email address will not be published. Required fields are marked *