SSLC Result 2024: ಎಸ್‌ಎಸ್‌ಎಲ್‌ಸಿ ‌ಉತ್ತರ ಪತ್ರಿಕೆ ಮರು ಮೌಲ್ಯಮಾಪನ, ಮರುಎಣಿಕೆಗೆ ಅರ್ಜಿ ಸಲ್ಲಿಸಲು ಆನ್‌ಲೈನ್‌ನಲ್ಲಷ್ಟೆ ಅವಕಾಶ.

ಬೆಂಗಳೂರು: ರಾಜ್ಯಾದ್ಯಂತ ನಡೆದ ಎಸ್‌ಎಸ್‌ಎಲ್‌ಸಿ ಪರೀಕ್ಷೆಯ (SSLC Result 2024) ಫಲಿತಾಂಶವು ಮೇ 9ರಂದು ಪ್ರಕಟಿಸಲಾಗಿದೆ. ಇದೀಗ ಪರೀಕ್ಷೆಯ ಉತ್ತರ ಪತ್ರಿಕೆಗಳ ಪ್ರತಿಗಳನ್ನು ವಿದ್ಯಾರ್ಥಿಗಳು ಪಡೆಯಬಹುದಾಗಿದೆ. ಸ್ಕ್ಯಾನ್‌ ಪ್ರತಿ, ಮರು ಎಣಿಕೆ ಮತ್ತು ಮರುಮೌಲ್ಯಮಾಪನಕ್ಕೆ ಮಂಡಳಿಯ ವೆಬ್‌ಸೈಟ್‌ ಮೂಲಕ ಅರ್ಜಿಯನ್ನು ಸಲ್ಲಿಸಬಹುದಾಗಿದೆ.

ಮೇ 9ರಿಂದ 16ರವರೆಗೆ ಉತ್ತರ ಪತ್ರಿಕೆಗಳ ಸ್ಕ್ಯಾನ್‌ ಪ್ರತಿಯನ್ನು ಪಡೆಯಲು ಆನ್‌ಲೈನ್‌ ಮೂಲಕ ಅರ್ಜಿ ಸಲ್ಲಿಸಬಹುದಾಗಿದೆ. ಉತ್ತರ ಪತ್ರಿಕೆಗಳ ಮರುಎಣಿಕೆಗೆ ಮತ್ತು ಮರು ಮೌಲ್ಯಮಾಪನಕ್ಕೆ ಆನ್‌ಲೈನ್‌ ಮೂಲಕ ಅರ್ಜಿ ಸಲ್ಲಿಸಬಹುದು. ಮೇ 13ರಿಂದ 22ವರೆಗೆ ಅರ್ಜಿ ಸಲ್ಲಿಸಬಹುದು ಜತೆಗೆ ಶುಲ್ಕವನ್ನು ಪಾವತಿಬಹುದಾಗಿದೆ. ಇನ್ನೂ ನೇರವಾಗಿ ಮರು ಎಣಿಕೆಗಾಗಿ ಭೌತಿಕವಾಗಿ ಅರ್ಜಿ ಸಲ್ಲಿಸುವಂತಿಲ್ಲ. ಬದಲಿಗೆ ಆನ್‌ಲೈನ್‌ ಮೂಲಕವೇ ಅರ್ಜಿಯನ್ನು ಸಲ್ಲಿಸಬೇಕಿದೆ. ಮರು ಎಣಿಕೆ ಬಯಸುವ ವಿದ್ಯಾರ್ಥಿಗಳು ಕಡ್ಡಾಯವಾಗಿ ಸಂಬಂಧಪಟ್ಟ ವಿಷಯದ ಉತ್ತರ ಪತ್ರಿಕೆಯ ಸ್ಕ್ಯಾನ್‌ ಪ್ರತಿಯನ್ನು ಪಡೆಯಬೇಕು.

ಸ್ಕ್ಯಾನ್‌ ಪ್ರತಿಯನ್ನು ಪಡೆದ ನಂತರ ಅಂಕಗಳ ಎಣಿಕೆಯಲ್ಲಿ ವ್ಯತ್ಯಾಸವಿದ್ದರೆ, ಅದನ್ನೂ ಖಚಿತಪಡಿಸಿಕೊಂಡ ನಂತರವಷ್ಟೇ ಮರುಎಣಿಕೆಗಾಗಿ ಅರ್ಜಿಯನ್ನು ಸಲ್ಲಿಸಬೇಕು. ಮರುಎಣಿಕೆಗಾಗಿ ಭೌತಿಕವಾಗಿ ಅರ್ಜಿಗಳನ್ನು ಸ್ವೀಕರಿಸುವುದನ್ನು ರದ್ದುಗೊಳಿಸಲಾಗಿದೆ. ಮರುಎಣಿಕೆ ಬಯಸುವ ಅಭ್ಯರ್ಥಿಗಳು ಆನ್‌ಲೈನ್ ಮುಖಾಂತರ ಅರ್ಜಿ ಸಲ್ಲಿಸಬೇಕಾಗಿರುತ್ತದೆ. ಇನ್ನೂ ಮರುಎಣಿಕೆಯು ಉಚಿತವಾಗಿದ್ದು ಪ್ರತ್ಯೇಕ ಶುಲ್ಕವಿರುವುದಿಲ್ಲ. ಮರು ಎಣಿಕೆ ಅಂಕಗಳ ಎಣಿಕೆಯಲ್ಲಿ ವ್ಯತ್ಯಾಸವಿದ್ದಲ್ಲಿ ಪರಿಶೀಲಿಸಿ, ನಂತರ ಪರಿಷ್ಕೃತ ಪಟ್ಟಿಯನ್ನು ಬಿಡುಗಡೆ ಮಾಡಲಾಗುತ್ತದೆ.

ಸಹಾಯವಾಣಿಗೆ ಕರೆ ಮಾಡಿ

ಎಸ್‌ಎಸ್‌ಎಲ್‌ಸಿ ಫಲಿತಾಂಶ, ಮೌಲ್ಯಮಾಪನಗೊಂಡ ಉತ್ತರ ಪತ್ರಿಕೆಗಳ ಸ್ಕ್ಯಾನ್‌ ಪಡೆಯುವ ಮತ್ತು ಮರು ಎಣಿಕೆಗೆ ಅರ್ಜಿ ಸಲ್ಲಿಸಲು ಯಾವುದೇ ಮಾಹಿತಿ ಪಡೆಯಬಹುದಾಗಿದೆ. ಹೀಗಾಗಿ ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯನಿರ್ಣಯ ಮಂಡಳಿ ಸಹಾಯವಾಣಿಯನ್ನು ಆರಂಭವಿಸಿದೆ. ವಿದ್ಯಾರ್ಥಿಗಳು ಸಹಾಯವಾಣಿ ಸಂಖ್ಯೆ 080 23310075, 23310076ಕ್ಕೆ ಕರೆ ಮಾಡಬಹುದು..

Source : https://vistaranews.com/education/sslc-result-2024-sslc-result-2024-date-to-apply-for-re-counting-and-revaluation/649238.html

2 thoughts on “SSLC Result 2024: ಎಸ್‌ಎಸ್‌ಎಲ್‌ಸಿ ‌ಉತ್ತರ ಪತ್ರಿಕೆ ಮರು ಮೌಲ್ಯಮಾಪನ, ಮರುಎಣಿಕೆಗೆ ಅರ್ಜಿ ಸಲ್ಲಿಸಲು ಆನ್‌ಲೈನ್‌ನಲ್ಲಷ್ಟೆ ಅವಕಾಶ.

Leave a Reply

Your email address will not be published. Required fields are marked *