ಎಸ್‌ಎಸ್‌ಎಲ್‌ಸಿ ಫಲಿತಾಂಶ ಪ್ರಕಟಿಸಲು ಕೊನೆಗೂ ಕರ್ನಾಟಕ ಪರೀಕ್ಷಾ ಮಂಡಳಿ ಡೇಟ್ ಫಿಕ್ಸ್ ಮಾಡಿ, ಮುಹೂರ್ತ ಇಟ್ಟಿದೆ. ಈ ಮೂಲಕ ಲಕ್ಷಾಂತರ ವಿದ್ಯಾರ್ಥಿಗಳು, ಇಷ್ಟು ದಿನ ಕಾಯುತ್ತಿದ್ದ ದಿನ ಬಂದೇ ಬಿಟ್ಟಿದೆ. ಸುಮಾರು 8.69 ಲಕ್ಷ ವಿದ್ಯಾರ್ಥಿಗಳ ಭವಿಷ್ಯ ನಿರ್ಧಾರ ಮಾಡುವ ಫಲಿತಾಂಶ ಇನ್ನೇನು ಕೆಲವೇ ಗಂಟೆಗಳಲ್ಲಿ ಹೊರ ಬೀಳಲಿದೆ. ಈ ಬಗ್ಗೆ ಇಂಚಿಂಚು ಮಾಹಿತಿ ತಿಳಿಯಲು ಮುಂದೆ ಓದಿ.

2023 & 2024ನೇ ಸಾಲಿನ ಎಸ್‌ಎಸ್‌ಎಲ್‌ಸಿ ಪರೀಕ್ಷೆಯಲ್ಲಿ ಒಟ್ಟು 2750 ಪರೀಕ್ಷಾ ಕೇಂದ್ರಗಳಲ್ಲಿ 8.69 ಲಕ್ಷ ವಿದ್ಯಾರ್ಥಿಗಳು ಪರೀಕ್ಷೆಗಾಗಿ ನೋಂದಣಿ ಮಾಡಿಕೊಂಡಿದ್ದರು. ಇದರಲ್ಲಿ 4.41 ಲಕ್ಷ ಬಾಲಕರು, 4.28 ಲಕ್ಷ ಬಾಲಕಿಯರು ಸೇರಿದ್ದರು. ಈಗ ಇವರೆಲ್ಲರ ಭವಿಷ್ಯ ನಿರ್ಧಾರ ಮಾಡುವ ಫಲಿತಾಂಶವು ಬಿಡುಗಡೆ ಆಗಲು ಕೆಲವೇ ಗಂಟೆ ಬಾಕಿ ಇದೆ. ಮೇ 09 ರಂದು SSLC ಫಲಿತಾಂಶ ಬಿಡುಗಡೆ ಆಗಲಿದೆ ಎಂದು, ಅಧಿಕೃತ ಘೋಷಣೆ ಮಾಡಲಾಗಿದೆ. ಹಾಗಾದ್ರೆ ಯಾವ ಯಾವ ವೆಬ್‌ಸೈಟ್ ಮೂಲಕ ನೀವು ಎಸ್‌ಎಸ್‌ಎಲ್‌ಸಿ ಫಲಿತಾಂಶ ವೀಕ್ಷಣೆ ಮಾಡಬಹುದು ಗೊತ್ತೆ? ಆ ಬಗ್ಗೆ ಸಂಪೂರ್ಣ ಮಾಹಿತಿಗೆ ಮುಂದೆ ಓದಿ.
SSLC ಫಲಿತಾಂಶ ನೋಡುವ ವೆಬ್‌ಸೈಟ್ : 8.69 ಲಕ್ಷ ಸಾಮಾನ್ಯ ವಿದ್ಯಾರ್ಥಿಗಳ ಜೊತೆ 18,225 ಖಾಸಗಿ ವಿದ್ಯಾರ್ಥಿಗಳು & 41,375 ರೀ ಎಕ್ಸಾಮ್ ಬರೆದಿದ್ದ ವಿದ್ಯಾರ್ಥಿಗಳು ಕೂಡ ಸೇರಿದ್ದಾರೆ. ಹೀಗಾಗಿ ಇವರೆಲ್ಲರ ಭವಿಷ್ಯವು ಮೇ 09 ಎಂದರೆ, ನಾಳೆಗೆ ನಿರ್ಧಾರ ಆಗಲಿದೆ. ಫಲಿತಾಂಶ ನೋಡಲು ನೀವು kseeb.kar.nic.in ಮತ್ತು karresults.nic.in ವೆಬ್‌ಸೈಟ್‌ಗೆ ಭೇಟಿ ನೀಡಲು ತಿಳಿಸಲಾಗಿದೆ. ಹಾಗೇ ಕೆಲವು ಶಾಲೆಗಳಲ್ಲಿ ಫಲಿತಾಂಶ ವೀಕ್ಷಣೆಗೆ ವಿಶೇಷ ವ್ಯವಸ್ಥೆ ಕೂಡ ಮಾಡಲಾಗಿದ್ದು. ನಾಳೆ ಬೆಳಗ್ಗೆ, ಕರ್ನಾಟಕ ಪರೀಕ್ಷಾ ಮಂಡಳಿಯು ಸುದ್ದಿಗೋಷ್ಠಿ ನಡೆಸಲಿದೆ. ಆ ನಂತರ ಎಸ್‌ಎಸ್‌ಎಲ್‌ಸಿ ಫಲಿತಾಂಶ ಅಧಿಕೃತವಾಗಿ ರಿಲೀಸ್ ಆಗಲಿದೆ.

ಫಲಿತಾಂಶ ನೋಡುವುದು, ಡೌನ್ಲೋಡ್ ಮಾಡುವುದು ಹೇಗೆ?
- ಅಧಿಕೃತ ವೆಬ್‌ಸೈಟ್ karresults.nic.in ಗೆ ಭೇಟಿ ನೀಡಿ
- ಮುಖಪುಟದಲ್ಲಿ SSLC Results 2024 ಲಿಂಕ್ ಅನ್ನು ಕ್ಲಿಕ್ ಮಾಡಿ
- ಹೊಸ ಲಾಗಿನ್ ಪುಟವು ತೆರೆಯುತ್ತದೆ
- ನಿಮ್ಮ ಅಪ್ಲಿಕೇಶನ್ ಸಂಖ್ಯೆ ಮತ್ತು ಜನ್ಮ ದಿನಾಂಕವನ್ನು ನಮೂದಿಸಿ
- ಆಗ ಫಲಿತಾಂಶ ಕಾಣಿಸಿಕೊಳ್ಳುತ್ತದೆ, ಅಲ್ಲಿ ಡೌನ್ಲೋಡ್ ಮಾಡಿ
ಅನುತ್ತೀರ್ಣರಾದರೆ ಮುಂದೇನು?
ನಾಳೆ ಫಲಿತಾಂಶದಲ್ಲಿ ಅನುತ್ತೀರ್ಣರಾದ ವಿದ್ಯಾರ್ಥಿಗಳು ಚಿಂತಿಸುವ ಅಗತ್ಯವಿಲ್ಲ. ಈ ಶೈಕ್ಷಣಿಕ ಸಾಲಿನಿಂದ ಎಸ್‌ಎಸ್‌ಎಲ್‌ಸಿ ಪರೀಕ್ಷೆ ಓದುತ್ತಿರುವವರು ಹಾಗೂ ಖಾಸಗಿ ವಿದ್ಯಾರ್ಥಿಗಳು ಪರೀಕ್ಷೆಯನ್ನು 3 ಬಾರಿ ಬರೆಯಬಹುದು. ಈ ಹಿಂದೆ ಅನುತ್ತೀರ್ಣರಾದವರು ಪೂರಕ ಪರೀಕ್ಷೆ ಬರೆಯಬೇಕಿತ್ತು. ಆದರೆ ಈ ಸಾಲಿನಿಂದ ಪಾಸಾಗಲಿ, ಫೇಲಾಗಲಿ 3 ಬಾರಿ ಪರೀಕ್ಷೆ ಬರೆಯುವ ಅವಕಾಶ ಇದೆ. ಪಾಸಾದರು ಸಹ ಅಂಕ ಹೆಚ್ಚಿಸಿಕೊಳ್ಳಲು ಮತ್ತೆ ಪರೀಕ್ಷೆ-2, ಪರೀಕ್ಷೆ-3 ಬರೆಯಬಹುದು. 3 ಪರೀಕ್ಷೆಗಳಲ್ಲಿ ಅತಿಹೆಚ್ಚು ಅಂಕಗಳನ್ನು ಪಡೆದ ಪರೀಕ್ಷೆಯನ್ನು ಆಯ್ಕೆ ಮಾಡುವ ಅವಕಾಶ ನೀಡಲಾಗಿದೆ. ಆದ್ದರಿಂದ ಪರೀಕ್ಷೆ-1 ರಲ್ಲಿ ಅನುತ್ತೀರ್ಣರಾದರೆ / ಕಡಿಮೆ ಅಂಕಗಳು ಬಂದರೆ ಪರೀಕ್ಷೆ-2 ತೆಗೆದುಕೊಳ್ಳಬಹುದು. ಪರೀಕ್ಷೆ-2 ಅನುತ್ತೀರ್ಣರಾದರೆ / ಕಡಿಮೆ ಅಂಕ ಬಂದರೆ ಪರೀಕ್ಷೆ-3 ತೆಗೆದುಕೊಳ್ಳಬಹುದು. ಇದರಲ್ಲಿ ಯಾವುದೇ ಪರೀಕ್ಷೆ ಪೂರಕ ಪರೀಕ್ಷೆ ಆಗಿರುವುದಿಲ್ಲ. ಅಂಕಪಟ್ಟಿಯಲ್ಲಿ ಫ್ರೆಶ್ ಸ್ಟೂಡೆಂಟ್ ಎಂದೇ ನಮೂದು ಆಗುತ್ತದೆ.
ನಮ್ಮ ಸಮಗ್ರ ಸುದ್ದಿಗಳಿಗಾಗಿ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು
WhatsAppGroup:https://chat.whatsapp.com/KnDIfiBURQ9G5sLEJLqshk
Facebook page: https://www.facebook.com/samagrasudii
Sharechat: https://sharehat.com/profile/edu514826335?d=n
Twitter: https://twitter.com/SuddiSamagra
Threads: https://www.threads.net/@samagrasuddi.co.in
Instagram: https://www.instagram.com/samagrasuddi.co.in/
Telegram: https://t.me/+E1ubNzdguQ5jN2Y1