MANGALURU SUBRAHMANYA TRAIN : ಏಪ್ರಿಲ್ 12ರಂದು ಮಂಗಳೂರು ಸೆಂಟ್ರಲ್ ನಿಲ್ದಾಣದಿಂದ ಸಂಜೆ 4 ಗಂಟೆಗೆ ಕೇಂದ್ರ ರೈಲ್ವೆ ಖಾತೆಯ ರಾಜ್ಯ ಸಚಿವ ಸೋಮಣ್ಣ ಧ್ವಜ ಪ್ರದರ್ಶನದ ಮೂಲಕ ರೈಲಿಗೆ ಚಾಲನೆ ನೀಡಲಿದ್ದಾರೆ.

ಸುಬ್ರಹ್ಮಣ್ಯ/ದ.ಕ: ಮಂಗಳೂರಿನಿಂದ ಕುಕ್ಕೆ ಸುಬ್ರಹ್ಮಣ್ಯಕ್ಕೆ ಏಪ್ರಿಲ್ 12ರಿಂದ ಹೊಸ ರೈಲು ಆರಂಭಿಸಲಾಗುತ್ತಿದ್ದು, ದಿನಕ್ಕೆ 4 ಬಾರಿ ಸಂಚರಿಸಲಿದೆ ಎಂದು ಕೇಂದ್ರ ರೈಲ್ವೆ ಖಾತೆ ಸಹಾಯಕ ಸಚಿವ ವಿ. ಸೋಮಣ್ಣ ತಿಳಿಸಿದರು. ಅವರು ತುಮಕೂರಿನಲ್ಲಿ ರೈಲ್ವೆ ಮೇಲ್ಸೇತುವೆ ನಿರ್ಮಾಣ ಕಾಮಗಾರಿಗೆ ಭೂಮಿ ಪೂಜೆ ನೆರವೇರಿಸಿ ಮಾತನಾಡಿದರು.

ಈ ವಿಷಯವನ್ನು ದಕ್ಷಿಣ ಕನ್ನಡ ಜಿಲ್ಲಾ ಸಂಸದ ಕ್ಯಾಪ್ಟನ್ ಬ್ರಿಜೇಶ್ ಚೌಟ ಅವರೂ ತಮ್ಮ ಅಧಿಕೃತ ಎಕ್ಸ್ ಖಾತೆಯಲ್ಲಿ ಘೋಷಿಸಿದ್ದಾರೆ. ಈ ವಿಸ್ತರಣೆಗೊಂಡ ಕಬಕ ಪುತ್ತೂರು ಎಕ್ಸ್‌ಪ್ರೆಸ್ ರೈಲನ್ನು ಕೇಂದ್ರ ರೈಲ್ವೆ ಖಾತೆಯ ರಾಜ್ಯ ಸಚಿವ ಸೋಮಣ್ಣ ಅವರು ಏಪ್ರಿಲ್ 12ರಂದು ಮಂಗಳೂರು ಸೆಂಟ್ರಲ್ ನಿಲ್ದಾಣದಿಂದ ಸಂಜೆ 4 ಗಂಟೆಗೆ ಧ್ವಜ ಪ್ರದರ್ಶನದ ಮೂಲಕ ಆರಂಭಿಸಲಿದ್ದಾರೆ.

ಸಂಸದ ಬ್ರಿಜೇಶ್ ಅವರು ಈ ಯೋಜನೆಯನ್ನು ಕೇಂದ್ರ ರೈಲ್ವೆ ಸಚಿವಾಲಯದೊಂದಿಗೆ ನಿರಂತರವಾಗಿ ಪ್ರಾಮುಖ್ಯತೆಯನ್ನು ಮುಂದಿಟ್ಟು, ಈಡೇರಿಸಲು ಪ್ರಯತ್ನಿಸಿದ್ದಾಗಿ ಎಕ್ಸ್‌ನಲ್ಲಿ ತಿಳಿಸಿದ್ದಾರೆ. ಈ ಮೂಲಕ ಕರಾವಳಿ ಮತ್ತು ಕೇರಳ ಭಾಗದ ಜನರ ಬಹುಕಾಲದ ಬೇಡಿಕೆ ಈಡೇರಿದೆ.

ರೈಲಿನ ವೇಳಾಪಟ್ಟಿ ಈ ಕೆಳಗಿನಂತಿದೆ:
ಮಂಗಳೂರು ಸೆಂಟ್ರಲ್-ಕಬಕ ಪುತ್ತೂರು-ಸುಬ್ರಹ್ಮಣ್ಯ ರಸ್ತೆ ಪ್ಯಾಸೆಂಜರ್ ರೈಲು (56625) ಮುಂಜಾನೆ 4ಕ್ಕೆ ಮಂಗಳೂರು ಸೆಂಟ್ರಲ್‌ನಿಂದ ಹೊರಟು ಕಬಕ-ಪುತ್ತೂರಿಗೆ 5.18ಕ್ಕೆ ತಲುಪಲಿದೆ. ಇಲ್ಲಿ 2 ನಿಮಿಷ ನಿಲುಗಡೆಯಾಗಿ 6.30ಕ್ಕೆ ಸುಬ್ರಹ್ಮಣ್ಯ ತಲುಪಲಿದೆ.
ಸುಬ್ರಹ್ಮಣ್ಯ-ಮಂಗಳೂರು (56626) ಪ್ಯಾಸೆಂಜರ್ ರೈಲು ಬೆಳಗ್ಗೆ 7ಕ್ಕೆ ಸುಬ್ರಹ್ಮಣ್ಯದಿಂದ ಹೊರಟು 7.48ಕ್ಕೆ ಕಬಕ-ಪುತ್ತೂರು ತಲುಪಲಿದೆ. 2 ನಿಮಿಷ ನಿಲುಗಡೆಯಾಗಿ 9.30ಕ್ಕೆ ಮಂಗಳೂರು ಸೆಂಟ್ರಲ್‌ಗೆ ತಲುಪಲಿದೆ.
ಮಂಗಳೂರು ಸೆಂಟ್ರಲ್-ಸುಬ್ರಹ್ಮಣ್ಯ ರಸ್ತೆ ಪ್ಯಾಸೆಂಜರ್ ರೈಲು (56627) ಸಂಜೆ 5.45ಕ್ಕೆ ಮಂಗಳೂರು ಸೆಂಟ್ರಲ್‌ನಿಂದ ಹೊರಟು ಸಂಜೆ 7.03ಕ್ಕೆ ಪುತ್ತೂರಿಗೆ ತಲುಪಲಿದೆ. 2 ನಿಮಿಷ ನಿಲುಗಡೆಯಾಗಿ ರಾತ್ರಿ 8.10ಕ್ಕೆ ಸುಬ್ರಹ್ಮಣ್ಯ ತಲುಪಲಿದೆ.
ಸುಬ್ರಹ್ಮಣ್ಯ ರಸ್ತೆ-ಮಂಗಳೂರು ಪ್ಯಾಸೆಂಜರ್ ರೈಲು (56628) ರಾತ್ರಿ 8.40ಕ್ಕೆ ಸುಬ್ರಹ್ಮಣ್ಯ ರಸ್ತೆ ನಿಲ್ದಾಣದಿಂದ ಹೊರಟು ರಾತ್ರಿ 9.28ಕ್ಕೆ ಕಬಕ-ಪುತ್ತೂರಿಗೆ ತಲುಪಿ 2 ನಿಮಿಷ ನಿಲುಗಡೆಯಾಗಿ ರಾತ್ರಿ 11.10ಕ್ಕೆ ಮಂಗಳೂರು ಸೆಂಟ್ರಲ್ ತಲುಪಲಿದೆ.
ETV Bharat
ನಮ್ಮ ಸಮಗ್ರ ಸುದ್ದಿಗಳಿಗಾಗಿ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು
WhatsApp Group:https://chat.whatsapp.com/KnDIfiBURQ9G5sLEJLqshk
Facebook page: https://www.facebook.com/samagrasudii
Sharechat: https://sharehat.com/profile/edu514826335?d=n
Twitter: https://twitter.com/SuddiSamagra
Threads: https://www.threads.net/@samagrasuddi.co.in
Instagram: https://www.instagram.com/samagrasuddi.co.in/
Telegram: https://t.me/+E1ubNzdguQ5jN2Y1