ಜಾತ್ಯತೀತ ನಾಯಕತ್ವ, ಎಲ್ಲರ ಪ್ರೀತಿ ವಿಶ್ವಾಸಕ್ಕೆ ಪಾತ್ರರಾಗಿದ್ದ ಸುಧಾಕರ್ ; ಬಿಜೆಪಿ ಕುಮಾರಸ್ವಾಮಿ.

ಸಮಗ್ರ ಸುದ್ದಿ ಚಿತ್ರದುರ್ಗ ಮೇ. 11 

ಸಚಿವ ಡಿ. ಸುಧಾಕರ್ ಅವರ ನಿಧನಕ್ಕೆ ಭಾರತೀಯ ಜನತಾ ಪಾರ್ಟಿಯ ಜಿಲ್ಲಾಧ್ಯಕ್ಷರಾದ ಕೆ.ಟಿ.ಕುಮಾರ ಸ್ವಾಮಿ ಅವರು ತೀವ್ರ ಸಂತಾಪ ವ್ಯಕ್ತಪಡಿಸಿದ್ದಾರೆ.

ಸುಧಾಕರ್ ಅವರು ಎಲ್ಲ ಸಮುದಾಯದವರ ಪ್ರೀತಿಗಳಿಸಿದ್ದರು. ಜಿಲ್ಲಾ ಉಸ್ತುವಾರಿ ಸಚಿವರಾಗಿ ಜಿಲ್ಲೆಯ ಸಮಗ್ರ ಅಭಿವೃದ್ಧಿಗೆ ಶ್ರಮಿಸಿದ ಡಿ. ಸುಧಾಕರ್ ಅಜಾತಶತ್ರುವಾಗಿ ಜನಮಾನಸದಲ್ಲಿ ನೆಲೆಗೊಂಡಿದ್ದಾರೆ.

ಚಿತ್ರದುರ್ಗ ಜಿಲ್ಲೆಯ ಹಿರಿಯೂರು ಮತ್ತು ಚಳ್ಳಕೆರೆಯಲ್ಲಿ ಜಾತಿ ಮತ ಬೇಧವಿಲ್ಲದೆ ನಾಲ್ಕು ಬಾರಿ ಶಾಸಕರಾಗಿ ಆಯ್ಕೆಯಾಗಿದ್ದು ಅವರ ಜನಪ್ರಿಯತೆಗೆ ಸಾಕ್ಷಿಯಾಗಿದೆ. 2008ರಲ್ಲಿ ಬಿಜೆಪಿ ಸರ್ಕಾರ ರಚನೆಯಾದಾಗ, ಪಕ್ಷೇತರರಾಗಿ ಗೆದ್ದಿದ್ದ ಸುಧಾಕರ್ ಅವರು ತಮ್ಮ ರಾಜಕೀಯ ಮಿತ್ರ ಡಿ.ಕೆ. ಶಿವಕುಮಾರ್ ಅವರ ಅನುಮತಿ ಪಡೆದೇ ಬಿಜೆಪಿಗೆ ಬೆಂಬಲ ನೀಡಿದ್ದರು.

ತಾವು ನಂಬಿದವರಿಗೆ ಅವರು ಎಂದಿಗೂ ದ್ರೋಹ ಬಗೆದವರಲ್ಲ ಅವರು ಒಬ್ಬ ಅತ್ಯುತ್ತಮ ಸಂಘಟನಾಕಾರ ಮತ್ತು ಮೇರು ವ್ಯಕ್ತಿತ್ವದ ರಾಜಕಾರಣಿಯನ್ನು ಜಿಲ್ಲೆ ಕಳೆದುಕೊಂಡಿದೆ. ಅವರ ಅಗಲಿಕೆ ಇಡೀ ಜಿಲ್ಲೆಗೆ ತುಂಬಲಾರದ ನಷ್ಟ ಎಂದು ಕಂಬನಿ ಮಿಡಿದರು. 

ಭದ್ರಾ ಮೇಲ್ದಂಡೆ ಯೋಜನೆ ಪೂರ್ಣಗೊಳಿಸಿ ಚಿತ್ರದುರ್ಗ ಜಿಲ್ಲೆಗೆ ನೀರು ಹರಿಸಬೇಕು ಹಾಗೂ ವಾಣಿವಿಲಾಸ ಸಾಗರ ಅಣೆಕಟ್ಟನ್ನು ತುಂಬಿಸಬೇಕು ಎನ್ನುವುದು ಸಚಿವ ಡಿ. ಸುಧಾಕರ್ ಆಸೆಯಾಗಿತ್ತು ಸದಾ ಬಡವರ ಪರ, ಅಭಿವೃದ್ಧಿ ಪರ ಚಿಂತನೆ ಮಾಡುತ್ತಿದ್ದ ಧೀಮಂತ ನಾಯಕನನ್ನು ಕಳೆದುಕೊಂಡಿರುವುದು ಜಿಲ್ಲೆಗೆ ತುಂಬಲಾರದ ನಷ್ಟವಾಗಿದೆ ಎಂದು ಕುಮಾರಸ್ವಾಮಿ ತಿಳಿಸಿದ್ದಾರೆ.

Leave a Reply

Your email address will not be published. Required fields are marked *