Geetha Shivarajkumar: ಶಿವಣ್ಣ ಪತ್ನಿ ಹಾಗೂ ನಿರ್ಮಾಪಕಿ ಗೀತಾ ಶಿವರಾಜ್ಕುಮಾರ್ ಅವರಿಗೆ ಸರ್ಜರಿ ಆಗಿದೆ ಎನ್ನುವ ವಿಚಾರ ತಿಳಿದು ಅಭಿಮಾನಿಗಳು ಕೂಡ ಆತಂಕಗೊಂಡಿದ್ದಾರೆ.

ಸ್ಯಾಂಡಲ್ವುಡ್ ನಟ ಶಿವರಾಜ್ಕುಮಾರ್ ಇತ್ತೀಚಿಗಷ್ಟೆ ಅಮೆರಿಕಾದಲ್ಲಿ ಕ್ಯಾನ್ಸರ್ ಚಿಕಿತ್ಸೆ ಪಡೆದು ಬಂದಿದ್ದಾರೆ. ಕ್ಯಾನ್ಸರ್ನಿಂದ ಸಂಪೂರ್ಣ ಗುಣಮುಖರಾಗಿದ್ದಾರೆ. ಶಿವಣ್ಣ ಬಳಿಕ ಪತ್ನಿ ಗೀತಾ ಶಿವರಾಜ್ಕುಮಾರ್ (Geetha Shivarajkumar) ಅವರು ಕೂಡ ಶಸ್ತ್ರಚಿಕಿತ್ಸೆಗೆ ಒಳಗಾಗಿದ್ದಾರೆ ಎನ್ನುವ ಮಾಹಿತಿ ಹೊರ ಬಂದಿದೆ. ಗೀತಾ ಅವರಿಗೆ ಆಸ್ಪತ್ರೆಯಲ್ಲಿ ಚಿಕಿತ್ಸೆ ಮುಂದುವರಿದಿದೆ.

ಗೀತಾ ಶಿವರಾಜ್ಕುಮಾರ್ ಅವರಿಗೆ ಏನಾಗಿದೆ?
ಶಿವಣ್ಣ ಪತ್ನಿ ಹಾಗೂ ನಿರ್ಮಾಪಕಿ ಗೀತಾ ಶಿವರಾಜ್ಕುಮಾರ್ ಅವರಿಗೆ ಸರ್ಜರಿ ಆಗಿದೆ ಎನ್ನುವ ವಿಚಾರ ತಿಳಿದು ಅಭಿಮಾನಿಗಳು ಕೂಡ ಆತಂಕಗೊಂಡಿದ್ದಾರೆ. ಕತ್ತಿನ ಭಾಗದಲ್ಲಿ ಶಸ್ತ್ರಚಿಕಿತ್ಸೆ ಆಗಿದೆ ಎನ್ನುವ ಮಾಹಿತಿ ಆಪ್ತ ವಲಯದಿಂದ ತಿಳಿದು ಬಂದಿದೆ. ಕುಟುಂಬದ ಕಡೆಯಿಂದ ಅಧಿಕೃತ ಮಾಹಿತಿ ಹೊರಬರಬೇಕಿದೆ.

ಗೀತಾ ಶಿವರಾಜ್ಕುಮಾರ್ ಅವರಿಗೆ ನರದ ಸಮಸ್ಯೆಯಿಂದ ಕತ್ತಿನ ಭಾಗದಲ್ಲಿ ನೋವು ಕಾಣಿಸಿಕೊಂಡಿತ್ತು ಎನ್ನಲಾಗಿದೆ. ಈ ಮೊದಲೇ ಅವರು ಇದಕ್ಕೆ ಶಸ್ತ್ರಚಿಕಿತ್ಸೆ ಮಾಡಿಸಿಕೊಳ್ಳಬೇಕಿತ್ತು. ಆದರೆ ಅದು ಸಾಧ್ಯವಾಗಿರಲಿಲ್ಲ. ಈಗ ಗೀತಾ ಅವರು ಕತ್ತಿನ ಭಾಗದಲ್ಲಿ ಸರ್ಜರಿ ಮಾಡಿಸಿಕೊಂಡಿದ್ದಾರೆ ಎನ್ನಲಾಗಿದೆ. ಅವರು ಬೇಗ ಚೇತರಿಕೆ ಕಾಣಲಿ ಎಂದು ಫ್ಯಾನ್ಸ್ ಹಾರೈಸುತ್ತಿದ್ದಾರೆ.

Source : News 18 Kannada
ನಮ್ಮ ಸಮಗ್ರ ಸುದ್ದಿಗಳಿಗಾಗಿ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು
WhatsApp Group:https://chat.whatsapp.com/KnDIfiBURQ9G5sLEJLqshk
Facebook page: https://www.facebook.com/samagrasudii
Sharechat: https://sharehat.com/profile/edu514826335?d=n
Twitter: https://twitter.com/SuddiSamagra
Threads: https://www.threads.net/@samagrasuddi.co.in
Instagram: https://www.instagram.com/samagrasuddi.co.in/
Telegram: https://t.me/+E1ubNzdguQ5jN2Y1