ಶ್ರೀಲಂಕಾ ಪ್ರವಾಸಕ್ಕೆ ಭಾರತ ತಂಡ ಪ್ರಕಟ, ಸೂರ್ಯಕುಮಾರ್​ಗೆ ಟಿ20 ನಾಯಕತ್ವ.

ಬೆಂಗಳೂರು: ಜುಲೈ 27ರಿಂದ ಆರಂಭವಾಗಲಿರುವ ಶ್ರೀಲಂಕಾ ಪ್ರವಾಸಕ್ಕೆ (Team India Srilanka Tour) ಭಾರತ ತಂಡವನ್ನು ಭಾರತೀಯ ಕ್ರಿಕೆಟ್ ನಿಯಂತ್ರಣ ಮಂಡಳಿ (BCCI) ಪ್ರಕಟಿಸಿದೆ. ಈ ಪ್ರವಾಸವು ಮೂರು ಪಂದ್ಯಗಳ ಟಿ 20 ಐ ಸರಣಿಯನ್ನು ಒಳಗೊಂಡಿರುತ್ತದೆ ಮತ್ತು ನಂತರ ಮೂರು ಪಂದ್ಯಗಳ ಏಕದಿನ ಸರಣಿಯೂ ಆಯೋಜನೆಗೊಂಡಿದೆ. ಟಿ20 ತಂಡಕ್ಕೆ ಸೂರ್ಯಕುಮಾರ್​ ಯಾದವ್​​ ನಾಯಕರಾಗಿ ಆಯ್ಕೆಯಾಗಿದ್ದಾರೆ. ಆಯ್ಕೆ ಸಮಿತಿ ಹಾರ್ದಿಕ್ ಪಾಂಡ್ಯ ಬದಲಿಗೆ ಸೂರ್ಯಕುಮಾರ್ ಯಾದವ್​ಗೆ ಪಟ್ಟಕಟ್ಟಿದ್ದಾರೆ. ಇದೇ ವೇಳೆ ಏಕ ದಿನ ತಂಡಕ್ಕೆ ರೋಹಿತ್ ಶರ್ಮಾ ನಾಯಕರಾಗಿ ಮುಂದುವರಿಸಿದ್ದಾರೆ.

ಮುಂಬರುವ ಪ್ರವಾಸವು ನೂತನ ಕೋಚ್​ ಗೌತಮ್ ಗಂಭೀರ್ ಅವರಿಗೆ ಮೊದಲ ಸವಾಲಾಗಿದೆ. ಈ ಸರಣಿಯೊಂದಿಗೆ ತಮ್ಮ ತರಬೇತಿಯನ್ನು ಪ್ರಾರಂಭಿಸಲು ಸಜ್ಜಾಗಿದ್ದಾರೆ. ಟಿ 20 ತಂಡಕ್ಕೆ ಶುಭ್​ಮನ್ ಗಿಲ್ ಉಪನಾಯಕರಾಗಿದ್ದಾರೆ. ಹಾರ್ದಿಕ್ ಪಾಂಡ್ಯ ಕೂಡ ಸರಣಿಗೆ ಲಭ್ಯರಾಗಿದ್ದಾರೆ. ವಾಷಿಂಗ್ಟನ್ ಸುಂದರ್​, ಖಲೀಲ್​ ಅಹಮದ್​ ಅವಕಾಶ ಪಡೆದಿದ್ದಾರೆ. ರಿಷಭ್ ಪಂತ್ ಜತೆ ಸಂಜು ಸ್ಯಾಮ್ಸನ್ ವಿಕೆಟ್​ ಕೀಪರ್ ಆಗಿ ಅವಕಾಶ ಪಡೆದಿದ್ದಾರೆ.

ಏಕ ದಿನ ತಂಡಕ್ಕೆ ವಿರಾಟ್ ಕೊಹ್ಲಿ ಮರಳಿದ್ದಾರೆ. ಕೆ. ಎಲ್ ರಾಹುಲ್ ಇಲ್ಲಿ ವಿಕೆಟ್ ಕೀಪರ್ ಕೋಟಾದಲ್ಲಿ ಅವಕಾಶ ಪಡೆದಿದ್ದಾರೆ. ವಾಷಿಂಗ್ಟನ್ ಸುಂದರ್​, ಖಲೀಲ್ ಅಹಮದ್​​ , ಹರ್ಷಿತ್​ ರಾಣಾ ಬೌಲಿಂಗ್​​ನಲ್ಲಿ ಅವಕಾಶ ಪಡೆದಿದ್ದಾರೆ. ರಿಯಾನ್ ಪರಾಗ್​ ಏಕ ದಿನ ಮಾದರಿಯಲ್ಲಿ ತಂಡ ಸೇರಿದ್ದಾರೆ. ಎರಡೂ ತಂಡಗಳಿಗೆ ಜಸ್​ಪ್ರಿತ್ ಬುಮ್ರಾ ಅಲಭ್ಯರಾಗಿದ್ದಾರೆ.

ತಂಡ ಈ ಕೆಳಗಿನಂತಿದೆ

ಟಿ20 ತಂಡ: ಸೂರ್ಯಕುಮಾರ್ ಯಾದವ್ (ನಾಯಕ), ಶುಭಮನ್ ಗಿಲ್ (ಉಪನಾಯಕ), ಯಶಸ್ವಿ ಜೈಸ್ವಾಲ್, ರಿಂಕು ಸಿಂಗ್, ರಿಯಾನ್ ಪರಾಗ್, ರಿಷಭ್ ಪಂತ್ (ವಿಕೆಟ್ ಕೀಪರ್), ಸಂಜು ಸ್ಯಾಮ್ಸನ್ (ವಿಕೆಟ್ ಕೀಪರ್), ಹಾರ್ದಿಕ್ ಪಾಂಡ್ಯ, ಶಿವಂ ದುಬೆ, ಅಕ್ಷರ್ ಪಟೇಲ್, ವಾಷಿಂಗ್ಟನ್ ಸುಂದರ್, ರವಿ ಬಿಷ್ಣೋಯ್, ಅರ್ಷ್ದೀಪ್ ಸಿಂಗ್, ಖಲೀಲ್ ಅಹ್ಮದ್, ಮೊಹಮ್ಮದ್ ಶಮಿ. ಸಿರಾಜ್ .

ಏಕದಿನ ತಂಡ: ರೋಹಿತ್ ಶರ್ಮಾ (ನಾಯಕ), ಶುಭಮನ್ ಗಿಲ್ (ಉಪನಾಯಕ), ವಿರಾಟ್ ಕೊಹ್ಲಿ, ಕೆಎಲ್ ರಾಹುಲ್ (ವಿಕೆಟ್ ಕೀಪರ್), ರಿಷಭ್ ಪಂತ್ (ವಿಕೆಟ್ ಕೀಪರ್), ಶ್ರೇಯಸ್ ಅಯ್ಯರ್, ಶಿವಂ ದುಬೆ, ಕುಲದೀಪ್ ಯಾದವ್, ಮೊಹಮ್ಮದ್ ಶಮಿ. ಸಿರಾಜ್, ವಾಷಿಂಗ್ಟನ್ ಸುಂದರ್, ಅರ್ಷ್ದೀಪ್ ಸಿಂಗ್, ರಿಯಾನ್ ಪರಾಗ್, ಅಕ್ಷರ್ ಪಟೇಲ್, ಖಲೀಲ್ ಅಹ್ಮದ್, ಹರ್ಷಿತ್ ರಾಣಾ.

ಸರಣಿಯ ವೇಳಾಪಟ್ಟಿ

  • ಮೊದಲ ಟಿ20 ಪಂದ್ಯ: ಜುಲೈ 27, 2024 – ಸಂಜೆ 7 ಗಂಟೆಗೆ – ಪಲ್ಲೆಕೆಲೆ ಅಂತಾರಾಷ್ಟ್ರೀಯ ಕ್ರಿಕೆಟ್ ಕ್ರೀಡಾಂಗಣ
  • 2ನೇ ಟಿ20 ಪಂದ್ಯ- ಜುಲೈ 28, 2024 – ಸಂಜೆ 7 ಗಂಟೆಗೆ – ಪಲ್ಲೆಕೆಲೆ ಅಂತಾರಾಷ್ಟ್ರೀಯ ಕ್ರಿಕೆಟ್ ಕ್ರೀಡಾಂಗಣ
  • 3ನೇ ಟಿ20 ಪಂದ್ಯ- ಜುಲೈ 30, 2024 – ಸಂಜೆ 7 ಗಂಟೆಗೆ – ಪಲ್ಲೆಕೆಲೆ ಅಂತಾರಾಷ್ಟ್ರೀಯ ಕ್ರಿಕೆಟ್ ಕ್ರೀಡಾಂಗಣ
  • ಮೊದಲ ಏಕದಿನ ಪಂದ್ಯ- ಆಗಸ್ಟ್ 2, 2024 – ಮಧ್ಯಾಹ್ನ 2:30 – ಆರ್ ಪ್ರೇಮದಾಸ ಅಂತಾರಾಷ್ಟ್ರೀಯ ಕ್ರಿಕೆಟ್ ಕ್ರೀಡಾಂಗಣ, ಕೊಲಂಬೊ
  • 2ನೇ ಏಕದಿನ ಪಂದ್ಯ- ಆಗಸ್ಟ್ 4, 2024 – ಮಧ್ಯಾಹ್ನ 2:30 – ಆರ್ ಪ್ರೇಮದಾಸ ಅಂತಾರಾಷ್ಟ್ರೀಯ ಕ್ರಿಕೆಟ್ ಕ್ರೀಡಾಂಗಣ, ಕೊಲಂಬೊ
  • 3ನೇ ಏಕದಿನ ಪಂದ್ಯ- ಆಗಸ್ಟ್ 7, 2024 – ಮಧ್ಯಾಹ್ನ 2:30 – ಆರ್ ಪ್ರೇಮದಾಸ ಅಂತಾರಾಷ್ಟ್ರೀಯ ಕ್ರಿಕೆಟ್ ಕ್ರೀಡಾಂಗಣ, ಕೊಲಂಬೊ

Source : https://vistaranews.com/vistara/team-india-srilanka-tour-suryakumar-yadav-named-t20i-captain-for-sri-lanka-tour-announced/697357.html

 

Leave a Reply

Your email address will not be published. Required fields are marked *