Paris Olympics 2024: ಪ್ಯಾರಿಸ್ ಒಲಿಂಪಿಕ್ಸ್ನಲ್ಲಿ ಭಾರತದ ಪದಕಗಳ ಸಂಖ್ಯೆ ಮೂರಕ್ಕೇರಿದೆ. ಏರ್ ಪಿಸ್ತೂಲ್ ಶೂಟಿಂಗ್ನಲ್ಲಿ ಮನು ಭಾಕರ್ ಕಂಚಿನ ಪದಕ ಗೆದ್ದಿದ್ದರು. ಇದರ ಬೆನ್ನಲ್ಲೇ ಮಿಶ್ರ ಏರ್ ಪಿಸ್ತೂಲ್ನಲ್ಲೂ ಭಾರತವು ಪದಕ ಗೆದ್ದುಕೊಂಡಿತು.

ಪ್ಯಾರಿಸ್ ಒಲಿಂಪಿಕ್ಸ್ನ ಪುರುಷರ 50 ಮೀ ರೈಫಲ್ 3 ಸುತ್ತಿನಲ್ಲಿ ಸ್ವಪ್ನಿಲ್ ಕುಸಾಲೆ ಕಂಚಿನ ಪದಕ ಗೆದ್ದಿದ್ದಾರೆ. 8 ಮಂದಿ ಒಳಗೊಂಡಿದ್ದ ಫೈನಲ್ ಸುತ್ತಿನಲ್ಲಿ ಒಟ್ಟು 451.4 ಅಂಕಗಳನ್ನು ಕಲೆಹಾಕುವ ಮೂಲಕ ಭಾರತೀಯ ಶೂಟರ್ ಮೂರನೇ ಸ್ಥಾನ ಪಡೆದಿದ್ದಾರೆ. ಈ ಮೂಲಕ ಭಾರತಕ್ಕೆ ಮೂರನೇ ಕಂಚಿನ ಪದಕ ಗೆದ್ದುಕೊಡುವಲ್ಲಿ ಯಶಸ್ವಿಯಾಗಿದ್ದಾರೆ.
ಸ್ವಪ್ನಿಲ್ ಕುಸಾಲೆ ಅವರ ಸಾಧನೆಗಳು:
- ವಿಶ್ವ ಚಾಂಪಿಯನ್‌ಶಿಪ್, ಕೈರೋ (2022) – 4ನೇ ಸ್ಥಾನ.
- ಏಷ್ಯನ್ ಗೇಮ್ಸ್ (2022) – ಚಿನ್ನ ಪದಕ
- ವಿಶ್ವಕಪ್, ಬಾಕು (2023) – ಮಿಶ್ರ ತಂಡ ಸ್ಪರ್ಧೆಯಲ್ಲಿ ಚಿನ್ನದ ಪದಕ
- ವಿಶ್ವಕಪ್, ಬಾಕು (2023) ವೈಯಕ್ತಿಕ ಮತ್ತು ತಂಡದ ಸ್ಪರ್ಧೆಗಳಲ್ಲಿ ಎರಡು ಬೆಳ್ಳಿ ಪದಕಗಳು.
- ವಿಶ್ವ ಚಾಂಪಿಯನ್‌ಶಿಪ್, ಕೈರೋ (2022) – ತಂಡದ ಸ್ಪರ್ಧೆಯಲ್ಲಿ ಕಂಚಿನ ಪದಕ.
- ವಿಶ್ವಕಪ್, ನವದೆಹಲಿ (2021) – ತಂಡದ ಸ್ಪರ್ಧೆಯಲ್ಲಿ ಚಿನ್ನದ ಪದಕ.