ಚಿತ್ರದುರ್ಗ, ಅ. 7:
ವರದಿ ಮತ್ತು ಫೋಟೋ ಕೃಪೆ ಸುರೇಶ್ ಪಟ್ಟಣ್, ಮೊ : 98862 95817
ವಿಧಾನ ಪರಿಷತ್ನ ಆಗ್ನೇಯ ಪದವೀಧರರ ಕ್ಷೇತ್ರದ ಚುನಾವಣೆಗೆ ಶಿಕ್ಷಣ ಇಲಾಖೆಯ ನಿವೃತ್ತ ಅಧಿಕಾರಿ ಸೈಯದ್ ಅಫಾಖ್ ಅಹಮದ್ ಅವರು ಪಕ್ಷೇತರ ಅಭ್ಯರ್ಥಿಯಾಗಿ ಸ್ಪರ್ಧಿಸಿದ್ದಾರೆ.
ಅವರು ಅಕ್ಟೋಬರ್ 6ರಂದು ಬೆಂಗಳೂರಿನ ಶಾಂತಿನಗರದಲ್ಲಿರುವ ಸಹಾಯಕ ಆಯುಕ್ತರ ಕಚೇರಿಯಲ್ಲಿ ನಾಮಪತ್ರ ಸಲ್ಲಿಸಿದ್ದು, ನಾಮಪತ್ರ ಅಂಗೀಕಾರಗೊಂಡಿದೆ ಎಂದು ತಿಳಿಸಿದ್ದಾರೆ.
ಈ ಕುರಿತು ಮಾತನಾಡಿದ ಸೈಯದ್ ಅಫಾಖ್ ಅಹಮದ್, ಪ್ರಸ್ತುತ ಶಿಕ್ಷಣ ಕ್ಷೇತ್ರ ಹಲವು ಸಮಸ್ಯೆಗಳನ್ನು ಎದುರಿಸುತ್ತಿದೆ. ಶಿಕ್ಷಕರು ಎದುರಿಸುತ್ತಿರುವ ವಿವಿಧ ಸಮಸ್ಯೆಗಳಿಗೆ ಸ್ಪಂದಿಸಿ, ಅವರಿಗೆ ನ್ಯಾಯ ದೊರಕಿಸಿಕೊಡುವುದರ ಜೊತೆಗೆ ಶಿಕ್ಷಣ ಕ್ಷೇತ್ರದ ಸಮಗ್ರ ಪ್ರಗತಿಗೆ ಶ್ರಮಿಸುವ ಉದ್ದೇಶದಿಂದ ಚುನಾವಣೆಗೆ ಸ್ಪರ್ಧಿಸಲು ನಿರ್ಧರಿಸಿರುವುದಾಗಿ ಹೇಳಿದರು.
2026ರಲ್ಲಿ ನಡೆಯಲಿರುವ ವಿಧಾನ ಪರಿಷತ್ನ ಆಗ್ನೇಯ ಪದವೀಧರರ ಕ್ಷೇತ್ರದ ಚುನಾವಣೆಗೆ ಈಗಾಗಲೇ ಮತದಾರರ ನೋಂದಣಿ ಪ್ರಕ್ರಿಯೆ ಪೂರ್ಣಗೊಂಡಿದ್ದು, ಕ್ಷೇತ್ರದಲ್ಲಿ ಮತದಾರರ ನೋಂದಣಿ ಕಾರ್ಯದಲ್ಲಿಯೂ ತಾವು ತೊಡಗಿಸಿಕೊಂಡಿದ್ದಾಗಿ ಅವರು ತಿಳಿಸಿದರು.
ಕಳೆದ 30 ವರ್ಷಗಳಿಂದ ಶಿಕ್ಷಣ ಕ್ಷೇತ್ರದಲ್ಲಿ ಸೇವೆ ಸಲ್ಲಿಸಿರುವ ತಮಗೆ ಚಿತ್ರದುರ್ಗ, ದಾವಣಗೆರೆ ಹಾಗೂ ತುಮಕೂರು ಭಾಗಗಳಲ್ಲಿ ವಿವಿಧ ಹುದ್ದೆಗಳಲ್ಲಿ ಕಾರ್ಯನಿರ್ವಹಿಸಿದ ಅನುಭವವಿದೆ. ಹೀಗಾಗಿ ಶಿಕ್ಷಕರು ಎದುರಿಸುತ್ತಿರುವ ಸಮಸ್ಯೆಗಳ ಬಗ್ಗೆ ಸಮಗ್ರ ಅರಿವು ಹೊಂದಿರುವುದಾಗಿ ಸೈಯದ್ ಅಫಾಖ್ ಅಹಮದ್ ಹೇಳಿದರು.

ಶಿಕ್ಷಣ ಕ್ಷೇತ್ರದ ಕುರಿತು ಹೊಂದಿರುವ ಅನುಭವ ಹಾಗೂ ಹಲವಾರು ಹಿತೈಷಿಗಳ ಒತ್ತಾಸೆಯಿಂದ ಮಧ್ಯ ಕರ್ನಾಟಕದ ಆಗ್ನೇಯ ಪದವೀಧರರ ಕ್ಷೇತ್ರದಿಂದ ಪಕ್ಷೇತರ ಅಭ್ಯರ್ಥಿಯಾಗಿ ಚುನಾವಣಾ ಕಣಕ್ಕಿಳಿದಿರುವುದಾಗಿ ಅವರು ತಿಳಿಸಿದರು.
ನಮ್ಮ ಸಮಗ್ರ ಸುದ್ದಿಗಳಿಗಾಗಿ ಕೆಳಗಿನ Social Media ಪುಟಗಳಿಗೆ Follow / Subscribe ಮಾಡಿ.
🟢 WhatsApp Group
Join WhatsApp Group
🔵 Facebook Page
Follow Facebook Page
⚫ Twitter / X
Follow on X (Twitter)
🟣 Threads
Follow on Threads
🟠 Instagram
Follow on Instagram
🔵 Telegram
Join Telegram Channel
🟢 WhatsApp Channel
Follow WhatsApp Channel
📰 ಸಮಗ್ರ ಸುದ್ದಿ
ನಿಖರತೆಗೆ ಮತ್ತೊಂದು ಹೆಸರು
📢 ಸುದ್ದಿ • ಮಾಹಿತಿ • ಶಿಕ್ಷಣ • ಉದ್ಯೋಗ • ಕರ್ನಾಟಕ • ದೇಶ • ಜಗತ್ತು