T20 Records: ಟಿ20 ಕ್ರಿಕೆಟ್​ನಲ್ಲಿ ಅತೀ ವೇಗದ ಸೆಂಚುರಿ ಸಿಡಿಸಿದ ಬ್ಯಾಟರ್​ಗಳು ಯಾರು ಗೊತ್ತಾ?

T20 Records: ಇಂಗ್ಲೆಂಡ್​ನ ಓವಲ್ ಮೈದಾನದಲ್ಲಿ ನಡೆದ ಟಿ20 ಬ್ಲಾಸ್ಟ್​ ಲೀಗ್​ನಲ್ಲಿ ಕೆಂಟ್ ವಿರುದ್ಧ ಸಿಡಿಲಬ್ಬರದ ಶತಕ ಸಿಡಿಸುವ ಮೂಲಕ ಶಾನ್ ಅಬಾಟ್ ಹೊಸ ದಾಖಲೆ ನಿರ್ಮಿಸಿದ್ದಾರೆ. ಕೇವಲ 34 ಎಸೆತಗಳಲ್ಲಿ ಸೆಂಚುರಿ ಪೂರೈಸಿ ಟಿ20 ಕ್ರಿಕೆಟ್​ನಲ್ಲಿ ಅತೀ ವೇಗದ ಶತಕ ಸಿಡಿಸಿದ ಟಾಪ್-5 ಬ್ಯಾಟರ್​ಗಳ ಪಟ್ಟಿಯಲ್ಲಿ ಸ್ಥಾನ ಪಡೆದಿದ್ದಾರೆ.ವಿಶೇಷ ಎಂದರೆ ಟಿ20 ಕ್ರಿಕೆಟ್​ನಲ್ಲಿ 35 ಕ್ಕಿಂತ ಕಡಿಮೆ ಎಸೆತಗಳಲ್ಲಿ ಶತಕ ಬಾರಿಸಿರುವುದು ಕೇವಲ 5 ಬ್ಯಾಟರ್​ಗಳು ಮಾತ್ರ. ಈ ಪಟ್ಟಿಯಲ್ಲಿ ಇದೀಗ ಅಬಾಟ್ ಕೂಡ ಸ್ಥಾನ ಪಡೆದಿರುವುದು ವಿಶೇಷ. ಹಾಗಿದ್ರೆ ಟಿ20 ಕ್ರಿಕೆಟ್​ನಲ್ಲಿ ಅತೀ ವೇಗವಾಗಿ ಶತಕ ಬಾರಿಸಿದ ಬ್ಯಾಟರ್​ಗಳು ಯಾರೆಲ್ಲಾ ಎಂದು ನೋಡೋಣ...1- ಕ್ರಿಸ್ ಗೇಲ್: ಟಿ20 ಕ್ರಿಕೆಟ್​ನಲ್ಲಿ ಅತೀ ವೇಗದ ಶತಕದ ದಾಖಲೆ ಕ್ರಿಸ್ ಗೇಲ್ ಹೆಸರಿನಲ್ಲಿದೆ. 2013 ರಲ್ಲಿ ಪುಣೆ ವಾರಿಯರ್ಸ್ ವಿರುದ್ಧದ ಪಂದ್ಯದಲ್ಲಿ ಆರ್​ಸಿಬಿ ಪರ ಕಣಕ್ಕಿಳಿದಿದ್ದ ಗೇಲ್ ಕೇವಲ 30 ಎಸೆತಗಳಲ್ಲಿ ಶತಕ ಬಾರಿಸಿ ವಿಶ್ವ ದಾಖಲೆ ನಿರ್ಮಿಸಿದ್ದರು. ಇದುವೇ ಟಿ20 ಕ್ರಿಕೆಟ್​ನ ಅತ್ಯಂತ ವೇಗದ ಶತಕ ದಾಖಲೆಯಾಗಿದೆ.2- ರಿಷಭ್ ಪಂತ್: 2018 ರಲ್ಲಿ ಸೈಯದ್ ಮುಷ್ತಾಕ್ ಅಲಿ ಟೂರ್ನಿಯಲ್ಲಿ ಹಿಮಾಚಲ ಪ್ರದೇಶ ವಿರುದ್ಧ ದೆಹಲಿ ಪರ ಕಣಕ್ಕಿಳಿದಿದ್ದ ರಿಷಭ್ ಪಂತ್ ಕೇವಲ 32 ಎಸೆತಗಳಲ್ಲಿ ಸೆಂಚುರಿ ಸಿಡಿಸಿದ್ದರು. ಇದರೊಂದಿಗೆ ಟಿ20 ಕ್ರಿಕೆಟ್​ನಲ್ಲಿ ಅತೀ ವೇಗವಾಗಿ ಶತಕ ಬಾರಿಸಿದ ಭಾರತೀಯ ಎಂಬ ದಾಖಲೆ ಪಂತ್ ಪಾಲಾಯಿತು.
3- ವಿಹಾನ್ ಲಬ್ಬ್: 2018 ರಲ್ಲಿ ಸೌತ್ ಆಫ್ರಿಕಾ ಟಿ20 ಕ್ರಿಕೆಟ್​ನಲ್ಲಿ ನಾರ್ತ್ ವೆಸ್ಟ್ ಪರ ಕಣಕ್ಕಿಳಿದ್ದ ವಿಹಾನ್ ಲಬ್ಬ್ ಲಿಂಪೊಪೊ ತಂಡದ ವಿರುದ್ಧ ಕೇವಲ 33 ಎಸೆತಗಳಲ್ಲಿ ಶತಕ ಬಾರಿಸಿದ್ದರು.4- ಆಂಡ್ರ್ಯೂ ಸೈಮಂಡ್ಸ್: 2004 ರಲ್ಲಿ ಮಿಡ್ಲ್​ಸೆಕ್ಸ್ ತಂಡದ ವಿರುದ್ಧದ ಪಂದ್ಯದಲ್ಲಿ ಕೆಂಟ್ ಪರ ಆಡಿದ್ದ ಸೈಮಂಡ್ಸ್ ಕೇವಲ 34 ಎಸೆತಗಳಲ್ಲಿ ಸೆಂಚುರಿ ಸಿಡಿಸಿ ಅಬ್ಬರಿಸಿದ್ದರು.5- ಶಾನ್ ಅಬಾಟ್: 2023 ರ ಟಿ20 ಬ್ಲಾಸ್ಟ್​ ಲೀಗ್​ನಲ್ಲಿ ಕೆಂಟ್ ವಿರುದ್ಧದ ಪಂದ್ಯದಲ್ಲಿ ಸರ್ರೆ ಪರ ಕಣಕ್ಕಿಳಿದ ಶಾನ್ ಅಬಾಟ್ ಕೇವಲ 34 ಎಸೆತಗಳಲ್ಲಿ ಶತಕ ಪೂರೈಸಿದ್ದಾರೆ. ಈ ಮೂಲಕ ಸೈಮಂಡ್ಸ್ ಹೆಸರಿನಲ್ಲಿದ್ದ ದಾಖಲೆಯನ್ನು ಸರಿಗಟ್ಟಿದ್ದಾರೆ.6- ಡೇವಿಡ್ ಮಿಲ್ಲರ್: 2017 ರಲ್ಲಿ ಬಾಂಗ್ಲಾದೇಶ್ ವಿರುದ್ಧದ ಪಂದ್ಯದಲ್ಲಿ ಸೌತ್ ಆಫ್ರಿಕಾದ ಹೊಡಿಬಡಿ ದಾಂಡಿಗ ಡೇವಿಡ್ ಮಿಲ್ಲರ್ ಕೇವಲ 35 ಎಸೆತಗಳಲ್ಲಿ ಶತಕ ಬಾರಿಸಿದ್ದರು.7- ರೋಹಿತ್ ಶರ್ಮಾ: 2017 ರಲ್ಲಿ ಶ್ರೀಲಂಕಾ ವಿರುದ್ಧ ಟೀಮ್ ಇಂಡಿಯಾದ ಆರಂಭಿಕ ಆಟಗಾರ ರೋಹಿತ್ ಶರ್ಮಾ ಕೇವಲ 35 ಎಸೆತಗಳಲ್ಲಿ ಸೆಂಚುರಿ ಸಿಡಿಸಿ ಅಬ್ಬರಿಸಿದ್ದರು.

source https://tv9kannada.com/photo-gallery/cricket-photos/t20-records-fastest-centuries-in-t20-cricket-kannada-news-zp-588300.html

Views: 0

Leave a Reply

Your email address will not be published. Required fields are marked *