
ಚಿತ್ರದುರ್ಗ/ದೊಡ್ಡ ಸಿದ್ದವನಹಳ್ಳಿ: ಡಿ.11: ಸರ್ಕಾರಿ ಶಾಲೆಗಳಲ್ಲಿ ಮಕ್ಕಳ ಹಾಜರಾತಿ ಇಲ್ಲದೆ ರಾಜ್ಯದ ಹಲವು ಶಾಲೆಗಳು ಮುಚ್ಚಿ ಹೋಗುತ್ತಿವೆ. ಇಂತಹ ಸಂದರ್ಭದಲ್ಲಿ ಹಳೆ ವಿದ್ಯಾರ್ಥಿಗಳು ತಾವು ಓದಿದ ಸರ್ಕಾರಿ ಕನ್ನಡ ಶಾಲೆಗೆ ಮೂಲಭೂತ ಸೌಕರ್ಯ ಒದಗಿಸಿ ಆರ್ಥಿಕವಾಗಿ ಹಿಂದುಳಿದ ಮಕ್ಕಳ ಕಲಿಕೆಗೆ ಅನುಕೂಲಕರ ವಾತಾವರಣ ನಿರ್ಮಿಸುವ ಪ್ರಯತ್ನ ನಿಜಕ್ಕೂ ಶ್ಲಾಘನೀಯವಾದದ್ದು ಬಾಲ್ಯದಲ್ಲಿ ನಾವು ಊರಿನ ಶಾಲೆಯನ್ನು ಗುರುಗಳನ್ನು ಎಂದಿಗೂ ಮರೆಯಬಾರದು ಎಂದು ಚಿತ್ರದುರ್ಗ ಕ್ಷೇತ್ರ ಶಿಕ್ಷಣಾಧಿಕಾರಿಗಳಾದ ನಾಗಭೂಷಣ್ ಅಭಿಪ್ರಾಯಪಟ್ಟಿದ್ದಾರೆ.

ಅವರು ಇಂದು ತಾಲೂಕಿನ ದೊಡ್ಡಸಿದ್ದವನಹಳ್ಳಿ ಸರ್ಕಾರಿ ಪ್ರೌಢಶಾಲೆ ಆವರಣದಲ್ಲಿ ದಿ..ಶ್ರೀಮತಿ ಮೂಲಂಗಿ ಶಾರದಮ್ಮ ರಂಗರೆಡ್ಡಿ ಇವರ ಸ್ಮರಣಾರ್ಥವಾಗಿ ಹಮ್ಮಿಕೊಳ್ಳಲಾಗಿದ್ದ ಮಕ್ಕಳ ಪ್ರತಿಭಾ ಪುರಸ್ಕಾರ ಹಾಗೂ ಮಕ್ಕಳ ಆರೋಗ್ಯ ತಪಾಸಣಾ ಶಿಬಿರ ಕಾರ್ಯಕ್ರಮವನ್ನು ಉದ್ದೇಶಿಸಿ ಮಾತನಾಡಿದರು.

ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದ ಶಾಲೆಯ ಹಳೆಯ ವಿದ್ಯಾರ್ಥಿಗಳ ಸಂಘದ ಗೌರವಾಧ್ಯಕ್ಷ ಹಾಗೂ ಖ್ಯಾತ ಭೂಗರ್ಭ ಶಾಸ್ತ್ರಜ್ಞ ಎನ್ ಜೆ ದೇವರಾಜ್ ರೆಡ್ಡಿ ಮಾತನಾಡಿ ಸರ್ಕಾರಿ ಶಾಲೆಗಳ ಅಭಿವೃದ್ಧಿಗೆ ಸರ್ಕಾರದ ಅನುದಾನವನ್ನೇ ಕಾಯುತ್ತಾ ಕೂರುವ ಬದಲು ಹಳೆಯ ವಿದ್ಯಾರ್ಥಿಗಳು ಎಲ್ಲಾ ಸೇರಿ ತಾವು ಓದಿದ ಶಾಲೆಯ ಅಭಿವೃದ್ಧಿಗೆ ಸಹಕಾರ ನೀಡುವುದು ಅತಿ ಅಗತ್ಯ ಸರ್ಕಾರಿ ಶಾಲೆಗಳಲ್ಲಿ ವಿದ್ಯಾರ್ಥಿಗಳ ಕೊರತೆ ಅಥವಾ ಯಾವುದೇ ಕೊರತೆಯಿಂದ ನಾವು ಓದಿದ ಶಾಲೆ ಮುಚ್ಚದಂತೆ ನೋಡಿಕೊಳ್ಳುವುದು ಹಳೆಯ ವಿದ್ಯಾರ್ಥಿಗಳ ಜವಾಬ್ದಾರಿಯಾಗಿದೆ ಈ ದಿನ ದೊಡ್ಡ ಸಿದ್ದವನಹಳ್ಳಿ ಶಾಲೆಯಲ್ಲಿ ಹಳೆಯ ವಿದ್ಯಾರ್ಥಿಗಳಾದ ಆದರ್ಶ್, ರಾಮಣ್ಣ ಹಾಗೂ ಕುಟುಂಬದವರು ಹಮ್ಮಿಕೊಂಡಿರುವ ಪ್ರತಿಭಾ ಪುರಸ್ಕಾರ ಇತರ ಹಳೆಯ ವಿದ್ಯಾರ್ಥಿಗಳಿಗೆ ಕುಡಿದಿದ್ದಾಯಕವಾಗಲಿ ಎಂದು ಶ್ಲಾಘಿಸಿದರು.
ದೊಡ್ಡ ಸಿದ್ದವನಹಳ್ಳಿ ಸರ್ಕಾರಿ ಪ್ರಾಥಮಿಕ ಆರೋಗ್ಯ ಕೇಂದ್ರದ ಆಡಳಿತ ವೈದ್ಯಾಧಿಕಾರಿ ಶ್ರೀಮತಿ ಶಮೀಲಾ ಶಾಲೆಯ ಎಲ್ಲ ವಿದ್ಯಾರ್ಥಿಗಳ ಆರೋಗ್ಯ ತಪಾಸಣೆ ನಡೆಸಿದರು ಇದೇ ಸಂದರ್ಭದಲ್ಲಿ ಹಳೆಯ ವಿದ್ಯಾರ್ಥಿಗಳಾದ ಆದರ್ಶ್ , ಆರ್ ಶ್ರೀನಿವಾಸ ರೆಡ್ಡಿ ಹಾಗೂ ಇತರ ವಿದ್ಯಾರ್ಥಿಗಳು ಸೇರಿ ಶಾಲೆಗೆ ಅಗತ್ಯವಿರುವ ತುರ್ತು ವಿದ್ಯುತ್ ಘಟಕ (UPS) ಕೊಡುಗೆಯಾಗಿ ಹಾಗೂ ಎಸ್ ಎಸ್ ಎಲ್ ಸಿ ಪರೀಕ್ಷೆಯಲ್ಲಿ ಹೆಚ್ಚಿನ ಅಂಕಗಳನ್ನು ಪಡೆದ ವಿದ್ಯಾರ್ಥಿಗಳಿಗೆ ಪ್ರತಿಭಾ ಪುರಸ್ಕಾರ ನೀಡಿದರು.ಶಾಲೆಯ ಮುಖ್ಯ ಶಿಕ್ಷಕ ಮಂಜುನಾಥ್ ರೆಡ್ಡಿ ಅಧ್ಯಕ್ಷತೆಯನ್ನು ವಹಿಸಿದ್ದ ಈ ಕಾರ್ಯಕ್ರಮದಲ್ಲಿ ಮುಖ್ಯ ಹತ್ತಿಗಳಾಗಿ ಜಿಲ್ಲಾ ಆಸ್ಪತ್ರೆ ನೇತ್ರಾಧಿಕಾರಿ ರಾಮು ಕೆ. ಡಾಕ್ಟರ್ ಚೇತನ್ ರಾಮ್, ಕೃಷ್ಣಮೂರ್ತಿ ಇನ್ನಿತರರು ಭಾಗವಹಿಸಿದ್ದ ಈ ಕಾರ್ಯಕ್ರಮದಲ್ಲಿ ಶ್ರೀಮತಿ ಗಾಯಿತ್ರಿ ಎಲ್ಲರನ್ನೂ ಸ್ವಾಗತಿಸಿದರೆ, ಶ್ರೀಮತಿ ಪಾರಿಜಾತ ಸುಂದರ ನಿರೂಪಣೆಯಿಂದ ಕಾರ್ಯಕ್ರಮಕ್ಕೆ ಮೆರುಗು ನೀಡಿದರು.
Views: 1