ಬೆಂಗಳೂರು : ತೆಲುಗು ಚಿತ್ರರಂಗದ ಖ್ಯಾತ ನಟ ನಂದಮೂರಿ ತಾರಕರತ್ನ ಅವರು ಬೆಂಗಳೂರಿನ ನಾರಾಯಣ ಹೃದಯಾಲಯದಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.
ಅವರ ಆರೋಗ್ಯ ವಿಚಾರಿಸಲು ಜೂ . ಎನ್ ಟಿಆರ್ ಅವರು ಕಲ್ಯಾಣ್ ರಾಮ್ ಅವರೊಂದಿಗೆ ವಿಶೇಷ ವಿಮಾನದಲ್ಲಿ ಬೆಂಗಳೂರು ತಲುಪಿದರು.
ತಾರಕರತ್ನ ಅವರ ಆರೋಗ್ಯ ಪರಿಸ್ಥಿತಿಯ ಬಗ್ಗೆ ವೈದ್ಯರ ಬಳಿ ಮಾಹಿತಿ ಪಡೆದ ನಂತರ ತಾರಕ್ ಮಾಧ್ಯಮಗಳೊಂದಿಗೆ ಮಾತನಾಡಿದರು. ‘ಅಣ್ಣ (ತಾರಕರತ್ನ) ಚಿಕಿತ್ಸೆಗೆ ಸ್ಪಂದಿಸುತ್ತಿದ್ದಾರೆ. ಅವರಿಗೆ ಇಲ್ಲಿ ಉತ್ತಮ ಚಿಕಿತ್ಸೆ ನೀಡಲಾಗುತ್ತಿದೆ. ಪ್ರಸ್ತುತ ಸಾವು ಬದುಕಿನೊಂದಿಗೆ ಹೋರಾಟ ನಡೆಸುತ್ತಿದ್ದಾರೆ. ಅವರು ಗಂಭೀರ ಸ್ಥಿತಿಯಿಂದ ಹೊರಬಂದಿದ್ದಾರೆ ಎಂದು ಹೇಳಲಾಗುವುದಿಲ್ಲ.
ನಾನು ಕುಟುಂಬ ಸದಸ್ಯನಾಗಿ ಇಲ್ಲಿಗೆ ಬಂದಿದ್ದೇನೆ. ವೈದ್ಯರು ತಮ್ಮ ಕೈಲಾದ ಪ್ರಯತ್ನ ಮಾಡುತ್ತಿದ್ದಾರೆ. ನಿಮ್ಮೆಲ್ಲರ ಆಶೀರ್ವಾದ ಮತ್ತು ಪ್ರಾರ್ಥನೆ ನಮಗೆ ಬೇಕು’ ಎಂದು ಹೇಳಿದರು. ಸಹೋದರ ಶೀಘ್ರ ಗುಣಮುಖರಾಗಿ ನಿಮ್ಮೆಲ್ಲರ ಪ್ರೀತಿಯಿಂದ ನಮ್ಮ ಮುಂದೆ ಬರಲಿ ಎಂದು ದೇವರಲ್ಲಿ ಹಾರೈಸುತ್ತೇನೆ’ ಎಂದರು.
The post ತಾರಕರತ್ನ ಸಾವು ಬದುಕಿನೊಂದಿಗೆ ಹೋರಾಟ ನಡೆಸುತ್ತಿದ್ದಾರೆ : ಜೂ.ಎನ್ ಟಿಆರ್ first appeared on Kannada News | suddione.
from ರಾಷ್ಟ್ರೀಯ ಸುದ್ದಿ – Kannada News | suddione https://ift.tt/Qt2uC7a
via IFTTT